Breaking News

Uncategorized

ಸಿಡಿ ಕೇಸ್‌: ಕತ್ತರಿ ಹಾಕದ ವಿಡಿಯೋ ಪತ್ತೆ

ಬೆಂಗಳೂರು: ಸಿಡಿ ಕೇಸ್‌ ತನಿಖೆ ಚುರುಕುಗೊಳಿಸಿರುವ ಎಸ್‌ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ ರನ್ನು ಎಸ್‌ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ‌ ಕಿಂಗ್‌ ಪಿನ್‌ ಎನ್ನ ಲಾದ ಪತ್ರ ಕರ್ತ ನರೇ ಶ್‌ …

Read More »

ಪ್ರಜಾಪ್ರಭುತ್ವವನ್ನು ಕೊಲ್ಲಲೂ ಮೋದಿ ಸರ್ಕಾರ ಹಿಂಜರಿಯುವುದಿಲ್ಲ; ಶಿವಸೇನೆ

ಮುಂಬೈ, ಮಾರ್ಚ್ 25: ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಶಿವಸೇನೆ, “ಬಿಜೆಪಿಯೇತರ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕೇಸರಿ ಪಕ್ಷ ನಿಗ್ರಹಿಸುತ್ತಿದೆ” ಎಂದು ಆರೋಪಿಸಿದೆ. ಪಕ್ಷದ ಪತ್ರಿಕೆ “ಸಾಮ್ನಾ”ದ ಸಂಪಾದಕೀಯದಲ್ಲಿ ಈ ಕುರಿತು ಟೀಕಿಸಿದ್ದು, ನರೇಂದ್ರ ಮೋದಿ ಅವರು ಈ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯವನ್ನು ನಿಗ್ರಹಿಸಲು ನಿರ್ಧರಿಸಿದಂತಿದೆ ಎಂದು …

Read More »

ಕೋವಿಡ್: ಮತ್ತಷ್ಟು ಕ್ರಮ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೊಸ ಆದೇಶದಂತೆ ಮುಂಬರುವ ಯುಗಾದಿ, ಹೋಳಿ, ಷಬ್‌-ಎ- ಬರಾತ್‌, ಗುಡ್‌ ಫ್ರೈಡೇ ಸಹಿತ ಹಲವು ಹಬ್ಬಗಳು ಮತ್ತು ಸಂಬಂಧಿತ ಸಮಾರಂಭಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಬಾರದು. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಮತ್ತಿತರ ಕಡೆಗಳಲ್ಲಿ ಸಭೆ-ಸಮಾರಂಭ ನಡೆಸದಂತೆ ಸೂಚಿಸಲಾಗಿದೆ. ನಿಯಮ ಉಲ್ಲಂ‍ಘಿಸುವವರ ವಿರುದ್ಧ ವಿಪತ್ತು …

Read More »

ಆ ಸಿಡಿಯನ್ನ ವಿಷ್ಣುಚಕ್ರ ಅಂದುಕೊಂಡು ತಿರುಗಿಸಿದ್ರಾ?;: ಎಚ್​. ವಿಶ್ವನಾಥ್​

ಮೈಸೂರು(ಮಾ.25): ಕೋಟ್ಯಾಂತರ ರೂಪಾಯಿ ಲೂಟ್ ಆಗಿರುವ ಇಡಿ ಬಗ್ಗೆ ಚರ್ಚೆ ಮಾಡೋಲ್ಲ ಬರಿ ಸಿಡಿ ಚರ್ಚೆ ಮಾಡುತ್ತೀರಲ್ಲಾ, ಬಜೆಟ್‌ ಚರ್ಚೆಗಿಂತ ಸಿಡಿಯೇ ಹೆಚ್ಚಾಯ್ತಾ ನಿಮಗೆ ಅಂತ, ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಪರಿಷತ್‌ ಸದಸ್ಯ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಚಾಟಿ ಬೀಸಿದ್ದಾರೆ. ನಿನ್ನೆ ಮುಗಿದ ಸದನ ಮುಗಿತು ಅಷ್ಟೆ, ಇದರಲ್ಲಿ ರಾಜ್ಯದ ಜನರಿಗೆ ಯಾವುದೇ ಪ್ರಯೋಜನ ಆಗಲಿಲ್ಲ. ಬಜೆಟ್ ಅಧಿವೇಶ ಅಂದ್ರೆ ಆದಾಯ, ತೆರಿಗೆ, ಹಣಕಾಸಿನ ಬಗ್ಗೆ …

Read More »

C.D. ಯುವತಿ ಪರ ಮಹಿಳಾ ಕಾಂಗ್ರೆಸ್​ ನಿಂತಿದೆ.

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ‘ಸಂತ್ರಸ್ತ’ ಯುವತಿ ಪರ ಮಹಿಳಾ ಕಾಂಗ್ರೆಸ್​ ನಿಂತಿದೆ. ಒಬ್ಬ ರಾಜಕಾರಣಿಯಿಂದ ಆಕೆಗೆ ಅನ್ಯಾಯ ಆಗಿದ್ದರೂ ಸಂತ್ರಸ್ತೆಗೆ ಸರ್ಕಾರದಿಂದ ರಕ್ಷಣೆ ಕೊಡಲು ಸಾಧ್ಯವಾಗಿಲ್ಲ. ಸರ್ಕಾರದ ಮೇಲೆ ಆಕೆಗೆ ನಂಬಿಕೆ ಇಲ್ಲ, ಹಾಗಾಗಿ ಕಾಂಗ್ರೆಸ್​ ನಾಯಕರ ಬಳಿ ರಕ್ಷಣೆ ಕೋರಿದ್ದಾಳೆ. ಆ ಹೆಣ್ಣುಮಗಳ ರಕ್ಷಣೆಗೆ ನಾವಿದ್ದೇವೆ ಎಂದು ಕಾಂಗ್ರೆಸ್ ಶಾಸಕಿಯರು ಹೇಳಿದ್ದಾರೆ. ಸಚಿವ ಡಾ.ಕೆ. ಸುಧಾಕರ್​ ನೀಡಿದ್ದ ಏಕಪತ್ನಿವ್ರತಸ್ಥ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ …

Read More »

ಸುಧಾಕರ್ ಅವರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹ

ಬೆಂಗಳೂರು: 225 ಶಾಸಕರ ಬಗ್ಗೆಯೂ ಕೀಳಾಗಿ ಮಾತನಾಡುವ ಮೂಲಕ ವಿಧಾನಸಭೆಗೆ ಅವಮಾನ ಮಾಡಿರುವ ಡಾ.ಕೆ. ಸುಧಾಕರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಅವರು ಶಾಸಕರಾಗಿಯೂ ಉಳಿಯಬಾರದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ. ಪಕ್ಷದ‌ ಶಾಸಕಿಯರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ ಸುಧಾಕರ್ ಆರೋಗ್ಯ ಸಚಿವರಲ್ಲ, ಅನಾರೋಗ್ಯ ಸಚಿವ. ಅವರು ಸಚಿವರಾಗಿರಲು ನಾಲಾಯಕ್. ಮುಖ್ಯಮಂತ್ರಿ …

Read More »

ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಕಲಬುರಗಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ಅಧಿಕಾರ ನಡೆಸಲು ಕೇಂದ್ರದವರು ಬಿಟ್ಟಿಲ್ಲ. ಬಿಜೆಪಿ ಸರ್ಕಾರಕ್ಕೆ ಅಧಿಕಾರ ನಡೆಸಲು ಬರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕುತಂತ್ರದಿಂದ ಬಂದಿದೆ. ಹೀಗಾಗಿ ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ. ಕೇಂದ್ರದಿಂದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಸರ್ಕಾರದ ಪತನದ …

Read More »

ಪ್ರಜಾಪ್ರಭುತ್ವಕ್ಕೆ ಕೆಟ್ಟ ದಿನ: ದೆಹಲಿ ಮಸೂದೆ ಬಗ್ಗೆ ಸಿಎಂ ಕೇಜ್ರಿವಾಲ್ ಕಿಡಿ

ನವದೆಹಲಿ, ಮಾರ್ಚ್ 25: ದೆಹಲಿ ಮಸೂದೆ 2021ಕ್ಕೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವಕ್ಕೆ ಕೆಟ್ಟ ದಿನ ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ ನಮ್ಮ ಅಧಿಕಾರ ಮರಳಿ ಪಡೆಯಲು ನಮ್ಮ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ ರಾಜ್ಯಸಭೆಯಲ್ಲಿ ಜಿಎಲ್ ಸಿಟಿಡಿ ತಿದ್ದುಪಡಿ ಮಸೂದೆಗೆ ಅನುಮೋದನೆ ದೊರೆತಿದೆ. ನಿಜಕ್ಕೂ ಇದು ಪ್ರಜಾಪ್ರಭುತ್ವದ ಕೆಟ್ಟ ದಿನವಾಗಿದೆ. ಅಂತೆಯೇ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. …

Read More »

ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ: ಕಾರಜೋಳ ಮನೆ ಎದುರು ಧರಣಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿಯನ್ನು ವಿರೋಧಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆ ಎದುರು ಕರ್ನಾಟಕ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ‘ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್‌) ₹2 ಕೋಟಿ ವರೆಗಿನ ಕಾಮಗಾರಿಯನ್ನು ನೇರವಾಗಿ ವಹಿಸುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದು ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಮೀಸಲಾತಿ ಸವಲತ್ತು ದುರ್ಬಲಗೊಳಿಸುವ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »