ಗದಗ: ಸಾರಿಗೆ ಸಂಸ್ಥೆಯ ಬಸ್ ನ ಬ್ರೇಕ್ ವೈಫಲ್ಯವಾದರೂ, ಚಾಲಕನ ಸಮಯ ಪ್ರಜ್ಞೆಯಿಂದ ನಡೆಯಬಹುದಾಗಿದ್ದ ಭಾರಿ ಅಪಾಯವೊಂದು ತಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಬಾಗೇವಾಡಿ ಗ್ರಾಮದ ಬಳಿ ಬಸ್ ಬ್ರೇಕ್ ವೈಫಲ್ಯವಾಗಿತ್ತು. ತಕ್ಷಣ ಎಚ್ವೆತ್ತುಕೊಂಡ ಬಸ್ ಚಾಲಕ ಸಿದ್ದಪ್ಪ ಗುದ್ದಿನ್, ರಸ್ತೆಗೆ ಹೊಂದಿಕೊಂಡಿರುವ ಗುಡ್ಡಕ್ಕೆ ಬಸ್ ಏರಿಸಿದ್ದಾರೆ. ಇದರಿಂದ …
Read More »ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …
Read More »ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ
ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್‍ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಗುರುವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಸಿದರು. ಚುನಾವಣೆ ನೀತಿ ಸಂಹಿತೆ, ಬದಲಾದ ನಿಯಮಗಳು, ಶಾಂತಿ ಸುವ್ಯವಸ್ಥಿತ ಚುನಾವಣೆಗೆ ಸಹಕಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಅಭಿಪ್ರಾಯ ಪಡೆದುಕೊಂಡರು. ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಯಿತು. ಈ …
Read More »ಕೊರೋನಾ ತಡೆಗೆ ಜಿಲ್ಲಾದ್ಯಂತ ಕಟ್ಟೆಚ್ಚರ, ಲಸಿಕೆ ಕಾರ್ಯ ಚುರುಕು: ಡಾ.ಶಶಿಕಾಂತ ಮುನ್ಯಾಳ
ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿ ಭಾಗದಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಲಸಿಕೆ ಕಾರ್ಯಕ್ರಮ ಮುಂದುವರಿದಿದ್ದು, ಫ್ರಂಟ್ ಲೈನ್ ವಾರಿಯರ್ಸ್ ಸೇರಿ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಈ ಅಲೆ ಮಾರ್ಚ್ ಮಧ್ಯಭಾಗದಿಂದ …
Read More »ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಬೇಕು: ಕರವೆ ಪ್ರವೀಣ ಶೆಟ್ಟಿ.
ಕನ್ನಡಿಗರಿಗೆ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ದಮ್ಕಿ ಹಾಕಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯ ಚನಮ್ಮ ವೃತ್ತದಲ್ಲಿ ಕರವೆ ಪ್ರವಿಣ ಶೆಟ್ಟಿ ಬಣದಿಂದ ಪ್ರತಿಭಟನೆ ಮಾಡಲಾಯಿತು. ಕೆಲ ದಿನಗಳಹಿಂದ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ಕೆಂಪು,ಹಳದಿ ಬಣ್ಣದ ಶಾಲು ಧ್ವಜ ನಮ್ಮ ಮುಂದೆ ಬಂದರೆ ಅಟ್ಟಾಡಿಸಿ ಹೊಡೆಯುದಾಗಿ ಹೇಳಿಕೆ ನೀಡುವ ಮೂಲಕ ಕನ್ನಡಿಗರನ್ನು ಕೆರಳಿಸಿದರು. ಈ ಕುರಿತು ಮಾತನಾಡಿರುವ ಪ್ರವೀಣ ಕುಮಾರ ಶೆಟ್ಟಿ ಎಂ.ಇ ಎಸ್, ಶಿವಸೇನೆ ಕನ್ನಡಿಗರನ್ನು ಕೆರಳಿಸಿದೆ. ನಮ್ಮ …
Read More »ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ …
Read More »ಹರಿದ ಜೀನ್ಸ್ ಪ್ಯಾಂಟ್ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್ ಮೊಮ್ಮಗಳು ನವ್ಯಾ!
ಬಿಗ್-ಬಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್ ಪ್ಯಾಂಟ್ ಕಾರಣಕ್ಕೆ! ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್ ಮೊಮ್ಮಗಳಿಗೂ, ಹರಿದ ಜೀನ್ಸ್ ಪ್ಯಾಂಟ್ಗೂ ಏನು …
Read More »ಸಚಿವರಿಗೆ ಸ್ವಪಕ್ಷೀಯರಿಂದಲೇ ಮುಜುಗರ
ಬೆಂಗಳೂರು: ನೇಕಾರರ ಸಮಸ್ಯೆ ಕುರಿತು ಆಡಳಿತ ಪಕ್ಷದ ಸದಸ್ಯರೇ ಪದೇ ಪದೇ ಪ್ರಶ್ನೆಗಳನ್ನು ಕೇಳುವ ಮೂಲಕ ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಮುಜುಗರ ತಂದ ವಿದ್ಯಮಾನ ವಿಧಾನಸಭೆಯಲ್ಲಿ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ, ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದರು. ‘ನೇಕಾರ ಸಮ್ಮಾನ್ ಯೋಜನೆಯಡಿ ನೀಡಿದ ₹2 ಸಾವಿರ ಯಾವುದಕ್ಕೂ ಸಾಲದು. ಲಾಕ್‌ಡೌನ್ ಅವಧಿಯಲ್ಲಿ ನೇಕಾರರು ತಯಾರಿಸಿದ ಸೀರೆಗಳನ್ನು ಇಲಾಖೆ ಖರೀದಿ ಮಾಡಿಲ್ಲ. …
Read More »ಲೋಕಸಭಾ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. : ಎಂ.ಜಿ.ಹಿರೇಮಠ
ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.17) ನಡೆದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಾದರಿ ನೀತಿ ಸಂಹಿತೆ ಪಾಲನೆಗೆ …
Read More »