Breaking News

Uncategorized

ಪೈರಸಿ ತಡೆಯುವುದಕ್ಕೆ ಮೊದಲು ನಾವು ಬದಲಾಗಬೇಕು: ಪುನೀತ್ ರಾಜ್​ಕುಮಾರ್

ಪೈರಸಿ ವಿಷಯ ಕಳೆದ ಕೆಲವು ದಿನಗಳಿಂದ ಬಹಳ ಸುದ್ದಿ ಮಾಡುತ್ತಿದೆ. ಪ್ರಮುಖವಾಗಿ ತಮ್ಮ’ಹೀರೋ’ ಚಿತ್ರ 3ನೇ ದಿನಕ್ಕೆ ಪೈರಸಿ ಆಗೋಯ್ತು ಎಂದು ನಟ -ನಿರ್ದೇಶಕ ರಿಷಬ್​ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದರು. ಪೈರಸಿ ಪ್ರೋತ್ಸಾಹಿಸುವ ಕೆಲವು ಆಯಪ್ ಮತ್ತು ವೆಬ್‍ಸೈಟ್‍ಗಳನ್ನು ಯಾಕೆ ಬ್ಯಾನ್ ಮಾಡಲಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಅದರ ಹಿಂದೆಯೇ ‘ರಾಬರ್ಟ್’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಒಂದು ಪಕ್ಷ ತಮ್ಮ ಚಿತ್ರವನ್ನೇನಾದರೂ ಪೈರಸಿ ಮಾಡಿದರೆ ಅವರನ್ನು ಸುಮ್ಮನೆ …

Read More »

ಪ್ರವಾಸಿಗರಿಗಾಗಿ ತಲೆ ಎತ್ತಲಿವೆ ತ್ರಿಸ್ಟಾರ್ ಹೋಟೆಲ್‌ಗಳು: ಸಿ.ಪಿ.ಯೋಗೇಶ್ವರ್

ಬೆಂಗಳೂರು: ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ನಾಲ್ಕು ತ್ರಿಸ್ಟಾರ್‌ ಹೋಟೆಲ್‌ಗಳನ್ನು ನಿರ್ಮಾಣ ಮಾಡಲಿದೆ. ಈ ಕುರಿತು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರೈಟ್ಸ್‌ ಸಂಸ್ಥೆಯೊಂದಿಗೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಿದೆ. ‘ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ಈ ಹೋಟೆಲ್‌ಗಳು ತಲೆ ಎತ್ತಲಿವೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರವಾಸಿಗರ ಸೇವೆಗೆ ಸಮರ್ಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. …

Read More »

ಗ್ರಾಹಕಿ ಮುಖಕ್ಕೆ ಪಂಚ್; ಜೊಮ್ಯಾಟೊ ಬಾಯ್ ಬಂಧನ

ಬೆಂಗಳೂರು: ‘ಜೊಮ್ಯಾಟೊ’ ಮೊಬೈಲ್ ಆಯಪ್ ಮೂಲಕ ಕಾಯ್ದಿರಿಸಿದ್ದ ಆಹಾರದ ಪೂರೈಕೆ ತಡವಾಗಿದ್ದಕ್ಕಾಗಿ ಗ್ರಾಹಕಿ ಹಾಗೂ ಡೆಲಿವರಿ ಬಾಯ್‌ ನಡುವೆ ಜಗಳವಾಗಿದ್ದು, ಸಿಟ್ಟಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ್ದಾನೆ. ಗ್ರಾಹಕಿ ಮುಖಕ್ಕೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬ್ಯಾಂಡೇಜ್‌ ಹಾಕಿಸಿಕೊಂಡಿದ್ದಾರೆ. ‘ಮಂಗಳವಾರ ರಾತ್ರಿ ಆಹಾರ ನೀಡಲು ಬಂದಿದ್ದ ಡೆಲಿವರಿ ಬಾಯ್ ಕಾಮರಾಜ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಆರೋಪಿಸಿ ಸ್ಥಳೀಯ …

Read More »

ಹುಬ್ಬಳ್ಳಿ: ಕಿಮ್ಸ್‌ ಸಿಬ್ಬಂದಿಗೆ ಸಿಗದ ಕೋವಿಡ್ ಭತ್ಯೆ

ಹುಬ್ಬಳ್ಳಿ: ಜೀವದ ಹಂಗು ತೊರೆದು ಕೋವಿಡ್-19‌ ರೋಗಿಗಳ ಚಿಕಿತ್ಸೆ ಮತ್ತು ಆರೈಕೆ ಮಾಡಿದ ಕಿಮ್ಸ್‌ ಆಸ್ಪತ್ರೆಯ ವೈದ್ಯಕೀಯ, ಅರೆ ವೈದ್ಯಕೀಯ, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಸರ್ಕಾರ ಘೋಷಿಸಿದ್ದ ₹5 ಸಾವಿರ ಕೋವಿಡ್‌ ಭತ್ಯೆ ಇನ್ನೂ ಸಿಕ್ಕಿಲ್ಲ. ಕೆಇಎಯಿಂದ (ವೈದ್ಯಕೀಯ ಇಲಾಖೆ) ನೇಮಕವಾದ 149 ನರ್ಸಿಂಗ್ ಅಧಿಕಾರಿಗಳು, ಕಿಮ್ಸ್‌ನಿಂದ ನೇರವಾಗಿ ಗುತ್ತಿಗೆ ಆಧಾರದಲ್ಲಿ ನೇಮಕವಾದ 79 ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 39, ಕ್ಯಾಟ್‌ಲಾಬ್‌ನ 20 ಹಾಗೂ …

Read More »

ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್‌ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ. ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್‌ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ …

Read More »

ಮಹಾಶಿವರಾತ್ರಿ ವಿಶೇಷ………

ಮಹಾಶಿವರಾತ್ರಿ ಶಿವ ತಣ್ತೀವನ್ನು ಮನದಲ್ಲಿ ಜಾಗ್ರತಗೊಳಿಸಿ ಶಿವಸ್ವರೂಪದ ಅನುಸಂಧಾನ ಮಾಡುವ ದಿನ ವಿಶೇಷವಾಗಿದೆ. ಆ ದಿನ- ಶ್ರೋತ್ರೇಣ ಶ್ರವಣಂ ತಸ್ಯ ವಚಸಾ ಕೀರ್ತನಂ ತಥಾ| ಮನಸಾ ಮನನಂ ತಸ್ಯ ಮಹಾಸಾಧನಮುಚ್ಯತೇ|| -ಶಿವಪುರಾಣದ ಈ ಹಾಡಿನ ಅರ್ಥದಂತೆ ಮಹೇಶ್ವರನ ಶ್ರವಣ, ಕೀರ್ತನ, ಮನನವನ್ನು ಮಾಡಬೇಕು; ಈ ಶ್ರುತಿ ವಾಕ್ಯವು ನಮಗೆಲ್ಲರಿಗೂ ಪ್ರಮಾಣಭೂತವಾಗಿದೆ. ಇದೇ ಸಾಧನೆಯಿಂದ ಸಮಸ್ತ ಮನೋರಥಗಳ ಸಿದ್ಧಿಯಲ್ಲಿ ತೊಡಗಿರುವ ನೀವೆಲ್ಲರೂ ಪರಮಸಾಧ್ಯವನ್ನು ಪಡೆದುಕೊಳ್ಳುವಿರಿ. ಮಾಘ ಕೃಷ್ಣ ಚತುರ್ದಶಿಯನ್ನು ಮಹಾಶಿವರಾತ್ರಿ ಎಂದು …

Read More »

ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸಐಟಿ) ರಚಿಸಿ ಸರಕಾರ ಆದೇಶ ಹೊರಡಿಸಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ರಾಜ್ಯ ಸರಕಾರದ ನಡೆ ಕುತೂಹಲ ಮೂಡಿಸಿದೆ. ವಿಡೀಯೋ ನಕಲಿಯೋ, ಅಸಲಿಯೋ ಎನ್ನುವ ಕುರಿತು ತನಿಖೆ ನಡೆಸಲಾಗುತ್ತದೆಯೋ ಎನ್ನುವ ಕುರಿತು ತನಿಖೆ ನಡೆಸಲಾಗುವುದೋ ಇಲ್ಲವೋ ಎನ್ನುವ ಮಾಹಿತಿ ಆದೇಶದಲ್ಲಿಲ್ಲ. ಕೇವಲ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿದವರು ಯಾರು ಎನ್ನುವುದನ್ನು …

Read More »

ರಾಧಿಕಾ ಪಂಡಿತ್ ಬರ್ತಡೇ: ಮೊಹಮ್ಮದ್ ನಲಪಾಡ್ ಸೇರಿ ಸ್ನೇಹಿತರು ಭಾಗಿ

ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ಇತ್ತೀಚಿಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಕೊರೊನಾ ವೈರಸ್ ಹಿನ್ನೆಲೆ ಈ ವರ್ಷ ಅಭಿಮಾನಿಗಳ ಜೊತೆ ಜನುಮದಿನ ಸಂಭ್ರಮಿಸಲು ಸಾಧ್ಯವಾಗಿಲ್ಲ. ನೆಚ್ಚಿನ ನಟಿಯ ಹುಟ್ಟುಹಬ್ಬದ ಕ್ಷಣದಲ್ಲಿ ಭಾಗಿಯಾಗಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ನಿರಾಸೆಯಾಗಿದ್ದರು. ಇದೀಗ, ರಾಧಿಕಾ ಪಂಡಿತ್ ಬರ್ತಡೇ ಸೆಲೆಬ್ರೆಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಸ್ನೇಹಿತರು ರಾಧಿಕಾ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ …

Read More »

ಸಚಿವರ ಸಾಮೂಹಿಕ ಗೈರು: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ ‘

ಬೆಂಗಳೂರು: ಕಲಾಪದಲ್ಲಿ ಭಾಗವಹಿಸಬೇಕಿದ್ದ ಸಚಿವರು ಸಾಮೂಹಿಕವಾಗಿ ಗೈರಾಗಿದ್ದರಿಂದ ಬುಧವಾರ ಮಧ್ಯಾಹ್ನದ ಬಳಿಕ ವಿಧಾನ ಪರಿಷತ್ ಕಲಾಪ ನಡೆಯಲಿಲ್ಲ. ಮಧ್ಯಾಹ್ನ 1.45ಕ್ಕೆ ಗಂಟೆಗೆ ಸದನದ ಕೋರಂ ಬೆಲ್ ಹಾಕಲಾಯಿತು. 15 ನಿಮಿಷಗಳ ಬಳಿಕ ಕಲಾಪ ಆರಂಭವಾಯಿತು. ಆದರೆ, ಸಭಾ ನಾಯಕ‌ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಲವು ಸದಸ್ಯರು ಮಾತ್ರ ಆಡಳಿತ ಪಕ್ಷದ ಸಾಲಿನಲ್ಲಿದ್ದರು. ಸಚಿವರಾದ ಎಂ.ಟಿ.ಬಿ. ನಾಗರಾಜ್, ಕೆ. ಗೋಪಾಲಯ್ಯ, ಸಿ.ಸಿ. ಪಾಟೀಲ, ಮುರುಗೇಶ ನಿರಾಣಿ, ಸಿ.ಪಿ. ಯೋಗೇಶ್ವರ ಹಾಜರಿರಬೇಕಿತ್ತು. …

Read More »

ಕರ್ನಾಟಕದಲ್ಲಿ ಒಂದೇ ದಿನ 590 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಮಾರ್ಚ್.09: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕಡಿಮೆ ಆಗುತ್ತಲೇ ಇಲ್ಲ. ಬೆಂಗಳೂರಿನಲ್ಲಿ ಒಂದೇ ದಿನ 363 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ 590 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 956041ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಈವರೆಗೂ 12373 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಕೊವಿಡ್ …

Read More »