ಬೆಂಗಳೂರು: ಇಂದು ಬೆಂಗಳೂರಿನಿಂದ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದವರಿಗೆ ಒಂದು ವಿಶೇಷ ಕಾಣಿಸಿತ್ತು. ಅವರಿಗೆ ಆ ರೈಲಿನಲ್ಲಿ, ರೈಲ್ವೇ ನಿಲ್ದಾಣದಲ್ಲಿ ಎಲ್ಲ ಸಿಬ್ಬಂದಿ ಮಹಿಳೆಯರೇ ಆಗಿದ್ದರು. ಆ ಮೂಲಕ ನೈಋತ್ಯ ರೈಲ್ವೇ ಇಲಾಖೆ ವಿಶೇಷವಾಗಿ ಮಹಿಳಾ ದಿನವನ್ನು ಆಚರಿಸಿತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲ್ಯಾಟ್ಫಾರಂ-8ರ ಮೂಲಕ ಬೆಳಗ್ಗೆ 11.15ಕ್ಕೆ ಬಾಗಲಕೋಟೆಗೆ ಹೊರಟ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಅದರ ಲೋಕೋ ಪೈಲಟ್, ಟಿಕೆಟ್ ಕಲೆಕ್ಟರ್ ಸೇರಿ ಎಲ್ಲ …
Read More »ದಿ. ಸುರೇಶ್ ಅಂಗಡಿ ಕನಸಿನ ಯೋಜನೆಗೆ ಅನುದಾನ
ಧಾರವಾಡ, ಮಾರ್ಚ್ 08: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನೆನಪು ಮಾಡಿಕೊಂಡರು. ಬೆಳಗಾವಿ ಕ್ಷೇತ್ರದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ 2020ರ ಸೆಪ್ಟೆಂಬರ್ 23ರಂದು ವಿಧಿವಶರಾಗಿದ್ದರು. ಕೋವಿಡ್ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಧಾರವಾಡ- ಬೆಳಗಾವಿ ನೇರ ರೈಲು ಮಾರ್ಗ …
Read More »ರಾಜ್ಯದಲ್ಲಿ ಮಹಿಳಾ ಉದ್ಯಮಿಗಳು ಹಾಗೂ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಉತ್ತೇಜನ ನೀಡುವ ಬಜೆಟ್ – ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು 8 ನೇ ಬಾರಿಗೆ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯದ ಮಹಿಳಾ ಉದ್ಯಮಿಗಳು ಹಾಗೂ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಸ್ಪಷ್ಟ ದೂರದರ್ಶಿತ್ವ ಮತ್ತು ಮಾರ್ಗದರ್ಶಿಗಳನ್ನು ನೀಡಿದ್ದಾರೆ. ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆ ಮತ್ತು ಕೃಷಿ ಭೂಮಿಯನ್ನು ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಭೂ ಕಂದಾಯ ಅಧಿನಿಯಮ ತಿದ್ದುಪಡಿಕೆಯ ಭರವಸೆ ನೀಡುವ ಮೂಲಕ ರಾಜ್ಯ ಕೈಗಾರಿಕಾಭಿವೃದ್ದಿಗೆ ಸಜ್ಜಾಗಿದೆ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ …
Read More »ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …
Read More »ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ
ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಸಾವನ್ನಪ್ಪಿರುವ ಬಾಲಕರು. ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರವಾರ ಪೊಲೀಸ್ …
Read More »Karnataka Budget 2021 | ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ: ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ‘ದೇಶೀಯ ಪಶು ಸಂಪತ್ತಿನ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ. ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ …
Read More »Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ
ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು. ‘ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,’ ಎಂದು ಘೋಷಿಸಿದರು. ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು …
Read More »ಮದ್ಯಪ್ರಿಯರಿಗೆ ಗುಡ್ ನ್ಯೂಸ್, ವಾಹನ ಸವಾರರಿಗೆ ನಿರಾಸೆ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದರೆ, ವಾಹನ ಸವಾರರಿಗೆ ನಿರಾಸೆ ಮೂಡಿಸಿದ್ದಾರೆ. ಸೋಮವಾರ ಬಜೆಟ್ ಮಂಡಿಸಿದ ಅಬಕಾರಿ ಸುಂಕ ಏರಿಕೆ ಮಾಡದೇ ಇರುವ ಪ್ರಸ್ತಾಪವನ್ನು ಮುಂದಿಟ್ಟರು. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದಾಗಿ ಘೋಷಿಸಿದರು. ಕೊರೊನಾ ವೈರಸ್ ಮತ್ತು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಜನತೆಗೆ ರಾಜ್ಯ ಬಜೆಟ್ ನಲ್ಲಿ ನಿರಾಸೆ …
Read More »ಅಪಾರ್ಟ್‍ಮೆಂಟ್ ಖರೀದಿಸುವವರಿಗೆ ಬಜೆಟ್ ನಲ್ಲಿ ಗುಡ್ ನ್ಯೂಸ್..!
ಬೆಂಗಳೂರು, ಮಾ.8- ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಅಪಾರ್ಟ್‍ಮೆಂಟ್‍ಗಳ ಮೊದಲ ನೋಂದಣಿಗೆ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಕಡಿಮೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಧ್ಯಮವರ್ಗ ಕೈಗೆಟುಕುವ ಮನೆಗಳನ್ನು ಖರೀದಿಸಲು ಪ್ರೋತ್ಸಾಹಿಸುವ ಸಲುವಾಗಿ 35ರಿಂದ 45 ಲಕ್ಷಮೌಲ್ಯದೊಳಗಿನ ಅಪಾರ್ಟ್‍ಮೆಂಟ್‍ಗಳ ಖರೀದಿಯ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,665 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗಿತ್ತು. ಫೆಬ್ರವರಿ ಅಂತ್ಯಕ್ಕೆ 9014 …
Read More »ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. * ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ * ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ * ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ * ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್ …
Read More »