ಬೆಳಗಾವಿ: ಕುಗ್ರಾಮದ ಮಕ್ಕಳ ವಿಮಾನ ಏರುವ ಕನಸನ್ನು ಬೆಳಗಾವಿ ತಾಲ್ಲೂಕು ಸೋನಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ ದೇಯಣ್ಣವರ ಅವರು ನನಸು ಮಾಡಿದರು. ಶಾಲೆಗೆ ಪ್ರತಿದಿನವೂ ತಪ್ಪದೇ ಬರುವುದಾಗಿ ಹೇಳಿ ಮಾತು ಉಳಿಸಿಕೊಂಡ ಮಕ್ಕಳಿಗೆ ಅವರು ಬೆಳಗಾವಿಯಿಂದ ಹೈದರಾಬಾದ್‌ವರೆಗೆ ವಿಮಾನದ ಪ್ರಯಾಣದ ಕೊಡುಗೆ ನೀಡಿದರು. ಪ್ರಕಾಶ ದೇಯಣ್ಣವರ ಅವರು ತಮ್ಮ ನಾಲ್ಕು ತಿಂಗಳ ವೇತನದ ಒಟ್ಟು ₹ 2.10 ಲಕ್ಷ ಹಣವನ್ನು ಅವರು ವಿಮಾನ ಪ್ರವಾಸಕ್ಕೆ …
Read More »8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಗುರುವಾರ(ನ.7) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಬಳಿ ಎಂಟು ವರ್ಷದ ಬಾಲಕಿಯನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಡಿ ಮೂವರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ …
Read More »ಧಾರವಾಡದಲ್ಲಿ ಸೌಂಡ್ ಮಾಡಿದ ಖಾಸಗಿ ಗನ್..
ಮಧ್ಯರಾತ್ರಿ ಧಾರವಾಡದಲ್ಲಿ ಸೌಂಡ್ ಮಾಡಿದ ಖಾಸಗಿ ಗನ್……ಮುಂಜಾನೆ ಸ್ಥಳಕ್ಕೆ ಹು-ಧಾ ಕಮಿಷನರ್ ಭೇಟಿ ನೀಡಿ ಪರಿಶೀಲನೆ… ನಿನ್ನೆ ತಡರಾತ್ರಿ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಎದುರಿಗೆ ನಡೆದ ಫೈರಿಂಗ್ ಸ್ಥಳಕ್ಕೆ ಇಂದು ಮುಂಜಾನೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವೈ- ಕಳೆದ ದಿನ ತಡರಾತ್ರಿ ಧಾರವಾಡದ ಆರ್.ಎನ್.ಶೆಟ್ಟಿ ರಸ್ತೆ ಎದುರಿಗೆ ಅಭಿಷೇಕ ಬಡ್ಡಿಮನಿ ಎಂಬುವವರು ಸ್ಕೂಟಿ ಮೇಲೆ ಹೊರಟಿದ್ದ ಸಂದರ್ಭದಲ್ಲಿ, …
Read More »ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
ಕಲಬುರಗಿ: ವಕ್ಪ್ ತೆಗಿಯಬೇಕೆಂದು ಬಿಜೆಪಿಯವರು ಹೇಳ್ತಾರಲ್ಲ, ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರವೇ ಇತ್ತು. ಆಗ ಇವರು ಕತ್ತೆ ಕಾಯುತ್ತಿದ್ದರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಇದೆಲ್ಲಾ ನೆನಪಾಗುತ್ತಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಚೆಯಿಂದಲೂ ರೈತರಿಗೆ ನೋಟಿಸ್ ಬಂದಿವೆ. ಎಲೆಕ್ಷನ್ ಬಂದಾಗ ಇದನ್ನ ದೊಡ್ಡ ಇಶ್ಯು ಮಾಡಿದ್ದಾರೆ. ನಾಚಿಕೆಯಾಗಲ್ವಾ ನಿಮಗೆ? ವಕ್ಪ್ ಆಸ್ತಿಯನ್ನು ಜಿಐಎಸ್ ಮ್ಯಾಪ್ ಮಾಡಿಸುತ್ತಿರುವುದು …
Read More »ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಆರ್ .ಅಶೋಕ ಆರೋಪಕ್ಕೆ ಡಿಕೆ ಶಿವಕುಮಾರ್ ಗರಂ ಒಳಗಡೆ ಏನ ಪ್ರಶ್ನೆ ಕೇಳಿದಾರೇ ಏನ ಉತ್ತರ ಕೊಟ್ಟಿದಾರೆ ಅನ್ನೋದು ಅವರಿಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೇನು ಗೊತ್ತು . ವಾಪಸ್ ವಿಚಾರಣೆಗೆ ಕರಿಯಬಹುದು. ಬಿಜೆಪಿ ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿದಾರಾ ಅನ್ನೋ ಹೇಳಿಕೆಗೆ ಡಿಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವ ಕೊಟ್ಟು ಲೋಕಾಯುಕ್ತ ಕಚೇರಿಗೆ ಸಿಎಮ್ ಹಾಜರಾಗಿದ್ದರೆ ಗೌರವಾನ್ವಿತ ಮುಖ್ಯಮಂತ್ರಿಗಳಿದಾರೆ ಅನ್ನೋದಕ್ಕೆ ನೀವೆಲ್ಲಖುಷಿ ಪಡಬೇಕು.ಲೋಕಾಯುಕ್ತರನ್ನು ನೇಮಕ ಮಾಡಿದ್ದು ಬಿಜೆಪಿ ಕಾಲದಲ್ಲಿ.ಅಶೋಕ ಮ್ಯಾಚ್ ಫಿಕ್ಸಿಂಗ್ ಪದ ಬಳಕೆ ಮಾಡಿದ್ದು ನ್ಯಾಯಾಲಯಕ್ಕೆ ನ್ಯಾಯಾಲಾಯದ ಪೀಠಕ್ಕೆ ಮಾಡಿರೋ ಅವಮಾನ..ನ್ಯಾಯಾಲಯಗಳ ಮೇಲೆ ಆ ರೀತಿ ಮಾಡಿರೋದು ದೊಡ್ಡ ಅಪಮಾನ. ರಾಜಕಾರಣಿಗಳು ನೇಮಕ ಮಾಡಿರೋ ಪೋಸ್ಟ್ ಅಲ್ಲ ಅದು.ಸಂವಿಧಾನ ನೇಮಕ ಮಾಡಿರೋದು,ಲೋಕಾಯುಕ್ತ ಅಧಿಕಾರಿಗಳು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು. ಉಪಚುನಾವಣೆ ಹಿನ್ನಲೆ ಇಂದು ಶಿಗ್ಗಾಂವಿ ಗೆ ಹೋಗತೀದ್ದೇನೆ. ಇಗಾಗಲೇ ಸಂಡೂರ, ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ್ದೇನೆ..ಮೂರು ಕ್ಷೇತ್ರದಲ್ಲಿ ಒಳ್ಳೆ ವಾತಾವರಣ ಇದೆ..ರಾಜ್ಯದ ಆಡಳಿತ ಜನ ನೋಡಿದ್ದಾರೆ. ಮೂರು ಕ್ಷೇತ್ರದಲ್ಲಿ ಅಭ್ಯರ್ಥಿ ಗಳಿದ್ದಾರೆ..ಶಿಗ್ಗಾಂವಿ ಯಲ್ಲಿ ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ನಮಗೆ ಲೀಡ್ ಬಂದಿದೆ. ನಾನು ಶಿಗ್ಗಾಂವಿ ಗೆಳ್ತಿವಿ.ಬೊಮ್ಮಾಯಿ ವಿರುದ್ಧ ಆಕ್ರೋಶ ಇದೆಯಂತೆ..ಕಾರ್ಯಕರ್ತರಿಗೆ ಸೀಟ್ ಕೊಡ್ತೀನಿ ಅಂದು ಕೊಟ್ಟಿಲ್ಲವಂತೆ.ಹೀಗಾಗಿ ನಾವ ಗೆಲೀವಿ ಎಂದ ಡಿಕೆ.ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣ. ಸಚಿವರ ಆಪ್ತರಾಗಲಿ ಯಾರೇ ಆಗಲಿ ಕ್ರಮ ಆಗತ್ತೆ.ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ .ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ..ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದರು.
ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಆರ್ .ಅಶೋಕ ಆರೋಪಕ್ಕೆ ಡಿಕೆ ಶಿವಕುಮಾರ್ ಗರಂ ಒಳಗಡೆ ಏನ ಪ್ರಶ್ನೆ ಕೇಳಿದಾರೇ ಏನ ಉತ್ತರ ಕೊಟ್ಟಿದಾರೆ ಅನ್ನೋದು ಅವರಿಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೇನು ಗೊತ್ತು . ವಾಪಸ್ ವಿಚಾರಣೆಗೆ ಕರಿಯಬಹುದು. ಬಿಜೆಪಿ ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿದಾರಾ ಅನ್ನೋ ಹೇಳಿಕೆಗೆ ಡಿಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವ ಕೊಟ್ಟು ಲೋಕಾಯುಕ್ತ ಕಚೇರಿಗೆ ಸಿಎಮ್ ಹಾಜರಾಗಿದ್ದರೆ …
Read More »ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ ಮಹಿಳೆಯರ ಮೇಲಿನ ದೌರ್ಜನ್ಯತಡೆಗಟ್ಟಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ : ಮಹಿಳೆಯರ ಸುರಕ್ಷತೆ-ಸಬಲೀಕರಣಕ್ಕೆ ವಿಶೇಷ ಗಮನ ನೀಡಬೇಕು. ಮಹಿಳಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ …
Read More »ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ. ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
ದಾಂಡೇಲಿ: ಧಾರವಾಡದಿಂದ ದಾಂಡೇಲಿ ಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ಸೋಮವಾರ(ನ.4) ಬೆಳಿಗ್ಗೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬವರೇ ಹೃದಯಘಾತಕ್ಕೊಳಗಾದ ಪ್ರಯಾಣಿಕರಾಗಿದ್ದಾರೆ. ಚಂದರಗಿ ಅವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇನ್ನಿತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿಯನ್ನು ನೀಡಿದ್ದಾರೆ. ಕುಳಿತಲ್ಲೇ …
Read More »ಮಠ ಗುರುಪ್ರಸಾದ್ “ನಿಗೂಢ ಸಾವು”: ಇರುವ ಅನುಮಾನಗಳೇನು ?
ಕನ್ನಡ ಚಿತ್ರರಂಗದಲ್ಲಿ ಹೊಸ ಮಾದರಿಯ, ಹಾಸ್ಯ ಹಾಗೂ ಭಿನ್ನ ಸಿನಿಮಾಗಳನ್ನು ಕೊಟ್ಟಿದ್ದ ಗುರುಪ್ರಸಾದ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಿನಿಮಾರಂಗದಲ್ಲಿ ಸೋಲು – ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದವರಲ್ಲಿ ಗುರುಪ್ರಸಾದ್ ಅವರು ಸಹ ಒಬ್ಬರು. ಗುರುಪ್ರಸಾದ್ ಕನ್ನಡದಲ್ಲಿ ಐದು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಗುರುಪ್ರಸಾದ್ ಕೇವಲ ನಿರ್ದೇಶಕ ಮಾತ್ರವಲ್ಲ. ಅವರು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ನಟ ಹಾಗೂ …
Read More »ಮುಡಾದ ಮತ್ತೊಂದು ಹಗರಣ ಬಯಲಿಗೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಯಲಾಗಿದೆ. ಅಧಿಕಾರಿಗಳೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ವಂಚನೆ ಪ್ರಕರಣದಲ್ಲಿ ಪ್ರಾಧಿಕಾರದ ಹೊರಗುತ್ತಿಗೆ ನೌಕರರು, ಅಧಿಕರಿಗಳು, ಬ್ಯಾಂಕ್ ಸಿಬ್ಬಂದಿಗಳು ಶಾಮೀಲಾಗಿದ್ದಾರೆ ಎಂದು ಮೈಸೂರು ಉಳಿಸಿ ಹೋರಾಟಗಾರರ ವೇದಿಕೆ ಆರೋಪಿಸಿದೆ. ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಶಾಖೆಯ ಕೆಲ ಸಿಬ್ಬಂದಿಗಳು ಹಾಗೂ ಕೆಲ ಅಧಿಕಾರಿಗಳು ಮುಡಾ ಕಂದಾಯ ಇಲಾಖೆಯ ವಿವಿಧ ಸೇವೆಗಳಿಗಾಗಿ 93 ಗ್ರಾಹಕರಿಂದ …
Read More »ಹಾಸನಾಂಬೆ ದೇಗುಲಕ್ಕೆ ಹರಿದು ಬಂತು ದಾಖಲೆಯ 9 ಕೋಟಿಗೂ ಅಧಿಕ ಆದಾಯ
ಹಾಸನ : ಹಾಸನದ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನ ಇಂದು ಅಂತ್ಯವಾಗಲಿದೆ. ಈ ವೇಳೆ ಕಳೆದ 11 ದಿನಗಳಲ್ಲಿ ದಾಖಲೆ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಹಾಸನಾಂಬೆ ದೇಗುಲಕ್ಕೆ 9 ಕೋಟಿಗೂ ಅಧಿಕ ಆದಾಯ ಬಂದಿದೆ. ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲು, ಕ್ಷಣಗಣನೆ ಶುರುವಾಗಿದೆ.ಈಗಾಗಲೇ ಭಕ್ತರಿಂದ ದೇವಾಲಯ ಆವರಣ ತುಂಬಿ ತುಳುಕುತ್ತಿದೆ.ಬೆಳಿಗ್ಗೆ 11.50ರ ನಂತರ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ. ವಿಶ್ವರೂಪದ ದರ್ಶನ ಬಳಿಕ …
Read More »