Breaking News

Uncategorized

ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತೆ :ವಾಟಾಳ್ ನಾಗರಾಜ್

ಮೈಸೂರು : ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತದೆ ಎಂದು ವಾಟಾಳ್​ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬಿಎಸ್​ವೈಗೆ ಕುಟುಕಿದ್ದಾರೆ. ನಂಜನಗೂಡಿನಲ್ಲಿ ಮಾ.26ರಂದು ಪಂಚ ಮಹಾರಥೋತ್ಸವ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಡಿಯ ಹಿಂದೆ ಯಾರಿದ್ದಾರೆ ಎಂದು ತಿಳಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿಯನ್ನು ಪರಮ ಪವಿತ್ರ ಎಂದು ಬಿಂಬಿಸುತ್ತಿದ್ದಾರೆ. ಜಾರಕಿಹೊಳಿ ಪರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ …

Read More »

ಜೊತೆ ಜೊತೆಯಲಿ ಡೈರೆಕ್ಟರ್ ಆರೂರು ಜಗದೀಶ್ ಸೀರಿಯಲ್ ನಲ್ಲಿ ಹಿರಿಯ ನಟಿ ಉಮಾಶ್ರೀ..? ಕಿರುತೆರೆಗೆ ಬಂದರು ಪುಟ್ಮಲ್ಲಿ..?

ಕನ್ನಡ ಸೀರಿಯಲ್ ಲೋಕದಲ್ಲಿ ಇವರದ್ದು ದೊಡ್ಡ ಹೆಸರು.ಇವರು ನಿರ್ದೇಶನ ಮಾಡಿರುವ ಎಲ್ಲಾ ಸೀರಿಯಲ್ಸ್ ಸಾವಿರಾರು ಎಪಿಸೋಡ್ಸ್ ಪ್ರದರ್ಶನ ಕಂಡಿವೆ. ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಮೆಚ್ಚುಗೆಯಾಗಿವೆ. ಇಂದಿಗೂ ಮೆಚ್ಚುಗೆಯಾಗ್ತಿವೆ. ಅದಕ್ಕೆ ಬೆಸ್ಟ್ ಎಕ್ಸಂಪಲ್ ಜೊತೆ ಜೊತೆಯಲಿ ಸೀರಿಯಲ್.. ಸೀರಿಯಲ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದ ಧಾರಾವಾಹಿ ಜೊತೆ ಜೊತೆಯಲಿ.. ಒಂದು ನಾವಿರಾದ ಪ್ರೇಮ ಕಥೆ.. ಫ್ಯಾಮಿಲಿ ಟಚ್ ಎಲ್ಲವೂ ಇರುವ ಈ ಸೀರಿಯಲ್ ಇಂದು ಕರುನಾಡಿನ ಮನೆ ಮಂದಿ ಮೆಚ್ಚಿದ್ದಾರೆ. ಈ …

Read More »

‘ಕುಂದಾ ನಗರಿ, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನವರುಗಳ ಊರು ಬೆಳಗಾವಿಗೆ ಬರಲು ಸದಾ ಖುಷಿಯಾಗುತ್ತದೆ. ನಾವು ಬಂದ ಕೂಡಲೇ ಮಳೆ ಸಹ ಬಂದಿದ್ದು ಶುಭ ಸೂಚಕ’ ಎಂದರು. ಪುನೀತ್ ರಾಜ್‌ಕುಮಾರ್

ಸಿನಿಮಾ, ಸಾಹಿತ್ಯ ಅಥವಾ ಇನ್ಯಾವುದೇ ಆಗಲಿ ಬೆಳಗಾವಿಯಲ್ಲಿ ನಡೆವ ಕನ್ನಡ ಕಾರ್ಯಕ್ರಮಗಳು ಸದಾ ವಿಶೇಷ.  ಬೆಳಗಾವಿಗೆ ನಟ ಪುನೀತ್ ರಾಜ್‌ಕುಮಾರ್ ಆಗಮಿಸಿದ್ದರು. ಈ ಗಡಿ ಜಿಲ್ಲೆಯಲ್ಲಿ ತಮ್ಮ ‘ಯುವರತ್ನ’ ಸಿನಿಮಾದ ಪ್ರಚಾರವನ್ನು ಪುನೀತ್ ನಡೆಸಿದರು. ಬೆಳಗಾವಿಯ ಕ್ಯಾಂಪ್ ಏರಿಯಾದಲ್ಲಿರುವ ಚಂದನ್-ಐನ್ಯಾಕ್ಸ್ ಚಿತ್ರಮಂದಿರದ ಬಳಿ ಬಂದ ಪುನೀತ್ ಅವರನ್ನು ನೂರಾರು ಅಭಿಮಾನಿಗಳು ಸೇರಿದ್ದರು. ಘೋಷಣೆಗಳನ್ನು ಕೂಗಿ, ಕನ್ನಡ ಬಾವುಟಗಳ್ನು ಹಿಡಿದು ಪುನೀತ್ ಅವರನ್ನು ಜಿಲ್ಲೆಗೆ ಸ್ವಾಗತಿಸಿದರು. ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಪುನೀತ್ ರಾಜ್‌ಕುಮಾರ್, …

Read More »

ಬೆಂಗಳೂರಲ್ಲಿಂದು ರೈತರ ರಣಕಹಳೆ

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದೆಹಲಿಯಲ್ಲಿ 100 ಕ್ಕೂ ಅಧಿಕ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ನಾಯಕರು …

Read More »

ಖತರ್ನಾಕ್ ಕಳ್ಳರ ಬಂಧನ; ₹6 ಲಕ್ಷ ಮೌಲ್ಯದ 12 ಬೈಕ್​ ವಶ

ಮೈಸೂರು: ನಗರದ ನರಸಿಂಹರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಫಯಾಜ್​ ಅಹಮ್ಮದ್​ ಹಾಗೂ ಮೊಕ್ತಾರ್​​ ಪಾಷಾ ಬಂಧಿತ ಆರೋಪಿಗಳು. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದರು. ಬೈಕ್​ ಕಳುವಾಗಿರುವ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಕದ್ದ ಬೈಕ್​ಗಳನ್ನ ಮಾರಾಟ ಮಾಡಲು ಮುಂದಾದ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳಿಂದ ಪೊಲೀಸರು, 6 …

Read More »

ಕಪಿಲೇಶ್ವರ ಮಂದಿರದ ಬಳಿ ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು

ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. …

Read More »

ವಿಜಯಪುರದ ‘BSNL’ ಕಚೇರಿ ಮೇಲೆ ‘CBI’ ಅಧಿಕಾರಿಗಳ ದಾಳಿ ; ಮಹತ್ವದ ದಾಖಲೆಗಳು ವಶಕ್ಕೆ

ವಿಜಯಪುರ : ನಗರದ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ದಾಳಿ ನಡೆಸಿದೆ. ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್ ಕೇಬಲ್ ಗಳನ್ನು ಅಳವಡಿಕೆ ಮಾಡಲಾಗಿತ್ತು, ಗ್ರಾ.ಪಂ ಗೆ ಫೈಬರ್ …

Read More »

ಕಲಬುರಗಿ ಜಿಲ್ಲೆಯಲ್ಲಿ ನನ್ನ ಸಿನಿಮಾ ಶೂಟಿಂಗ್ ಮಾಡುತ್ತೇನೆ: ಪುನೀತ್ ರಾಜಕುಮಾರ್

ಕಲಬುರಗಿ: ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ನಂತರ ಹಾಗೂ ಕೊರೊನಾ ಸೋಂಕಿನ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ್ದು, ಜಿಲ್ಲೆಯಲ್ಲಿ ನನ್ನ ಸಿನಿಮಾವೊಂದರ ಶೂಟಿಂಗ್ ಮಾಡಲಾಗುವುದು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಘೋಷಿಸಿದರು. ‘ಯುವರತ್ನ’ ಚಿತ್ರದ ಪ್ರಚಾರಕ್ಕಾಗಿ ರವಿವಾರ ನಗರಕ್ಕೆ ಆಗಮಿಸಿದ್ದ ಅವರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಯಾವ ಸಿನಿಮಾದ ಶೂಟಿಂಗ್ ಎಂಬುದನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದ್ದೇವೆ ಎಂದು ಹೇಳಿದರು.   ಕಲಬುರಗಿ ನನಗೆ ಹೊಸದಲ್ಲ. ಚಿಕ್ಕಂದಿನಿಂದಲೇ …

Read More »

ಅಹೋರಾತ್ರ ಮನೆಗೆ ನುಗ್ಗಿ ಸುದೀಪ್​ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್​ ಮಾಡಲು ಆಗ್ರಹ

ಕಿಚ್ಚ ಸುದೀಪ್​ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್​ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್​ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. ಇಂದು ಫೇಸ್​ಬುಕ್​ನಲ್ಲಿ ಅಹೋರಾತ್ರ ಲೈವ್​ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ …

Read More »

ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು: ‘ಮಹಾ’ ಮಾಜಿ ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ

ಮುಂಬೈ: ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು ಎಂದು ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಫೋಟಕ ವಾಹನದ ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎನ್ನುವ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಮುಂಬೈ ನಗರ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳದ ಮುಖ್ಯಸ್ಥರನ್ನಾಗಿ ಗುರುವಾರವಷ್ಟೇ …

Read More »