Breaking News

Uncategorized

ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ

ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್​ 20ರಂದು ಸಂಜೆ …

Read More »

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.

Read More »

ಸರ್ಕಾರಿ ಕಚೇರಿಯ ಮುಂದೆಯೇ ವ್ಯಕ್ತಿಯ ಭೀಕರ ಕೊಲೆ…!

ಗದಗ: ಯುವಕನೋರ್ವ ಅಶ್ಲೀಲವಾಗಿ ಬೈದಾಡುತ್ತಿದ್ದ ಸಂಬಂಧಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ. ಕುರಹಟ್ಟಿ ಪೇಟೆ ನಿವಾಸಿ ಪ್ರವೀಣ್ ಗದುಗಿನ (23) ಕೊಲೆಗೈದ ಯುವಕ. ಪ್ರವೀಣ್ ತನ್ನ ಸಂಬಂಧಿಯಾದ ಮಂಜುನಾಥ್ ಗದುಗಿನ (44)ನನ್ನು ಕೊಲೆ ಮಾಡಿದ್ದಾನೆ. ಮಂಜುನಾಥ್ ಆಗಾಗ ಪ್ರವೀಣ್ ಮನೆ ಬಳಿ ಬಂದು ಅಶ್ಲೀಲವಾಗಿ ಬೈದಾಡುತ್ತಿದ್ದ. ಮಂಗಳವಾರ ರಾತ್ರಿ ಸಹ ಮಂಜುನಾಥ್ ಬೈದಾಡುತ್ತಿದ್ದ. ಇದರಿಂದ ಕೋಪಗೊಂಡ ಪ್ರವೀಣ್ ಆತನ ಕುತ್ತಿಗೆಗೆ ಚಾಕು ಹಾಕಿ ಕೊಲೆಗೈದು …

Read More »

ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ:ಪಿಯೂಷ್ ಗೋಯಲ್

ನವದೆಹಲಿ: ಭಾರತೀಯ ರೈಲ್ವೆ ಖಾಸಗೀಕರಣದ ಬಗ್ಗೆ ಹಲವಾರು ಗಾಳಿಸುದ್ದಿಗಳು ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದು, ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈಲ್ವೆಗಾಗಿ ಬಿಡುಗಡೆಯಾದ ಅನುದಾನ ಕುರಿತು ಸದಸ್ಯರು ಕೇಳಿದ ಪ್ರಶ್ನೆಗೆ ಚರ್ಚೆವೇಳೆ ಉತ್ತರಿಸಿದ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್, ಪ್ರಧಾನಿ ಮೋದಿ ಸರ್ಕಾರ ರೈಲ್ವೆ ಹೂಡಿಕೆಯನ್ನು ಹೆಚ್ಚಿಸಿದೆ. 2019-20ರ ಆರ್ಥಿಕ ವರ್ಷದಲ್ಲಿ 1.5 ಲಕ್ಷ ಕೋಟಿ ಇದ್ದ ಹೂಡಿಕೆ 2021-22ರ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …

Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಮಹಿಳೆಯರು

ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ ಎಚ್ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಬೆಳಗಾವಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಕಂಗ್ರಾಳಿ ಕೆಎಚ್ ಗ್ರಾಮದ ಮಹಾತ್ಮಾ ಪುಲೆ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್(ರಿ) ಬೆಳಗಾವಿ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರದೀಪ …

Read More »

ಯಡಿಯೂರಪ್ಪ ಅವರತ್ತ ಪರೋಕ್ಷವಾಗಿ ಗುರಿ ಇಟ್ಟ ಬಿಜೆಪಿ: ಕಾಂಗ್ರೆಸ್ ತಿರುಗೇಟು

ಬೆಂಗಳೂರು, ಮಾ.16: “ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ” ಎನ್ನುತ್ತ ಬಿ.ಎಸ್.ಯಡಿಯೂರಪ್ಪ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ? ಎಂದು ಬಿಜೆಪಿಗೆ ಕಾಂಗ್ರೆಸ್ ಟ್ವಿಟರ್ ನಲ್ಲಿ ತಿರುಗೇಟು ನೀಡಿದೆ. ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ ಬಿಎಸ್ವೈ ಮುಕ್ತ ಬಿಜೆಪಿ ಅಭಿಯಾನ ಮುಂದುವರೆಸುತ್ತಿರುವಿರಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ …

Read More »

ಟೋಯಿಂಗ್‌ನಲ್ಲಿ ಅಕ್ರಮ: ಕ್ರಮಕ್ಕೆ ಒತ್ತಾಯ

ಬೆಂಗಳೂರು: ‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್‌ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು. ‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್‌ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ …

Read More »

ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …

Read More »

ವಂಶವಾಹಿ ರಾಜಕಾರಣ ನಾಶ ಖಚಿತ

ದೇಶದಲ್ಲಿ ಈಗ “ಒಂದು ರಾಷ್ಟ್ರ ಒಂದು ಚುನಾವಣೆ’ ಎಂಬ ಪರಿಕಲ್ಪನೆ ಬಗ್ಗೆ ಚರ್ಚೆ ಆರಂಭವಾಗಿದೆ. ಈಚೆಗಷ್ಟೇ ರಾಜ್ಯ ವಿಧಾನಮಂಡಲಗಳಲ್ಲಿ ಈ ಬಗ್ಗೆ ಚರ್ಚೆಗೆ ಸಮಯ ನಿಗದಿಯಾಗಿತ್ತಾದರೂ, ವಿಪಕ್ಷಗಳ ವಿರೋಧದಿಂದ ಚರ್ಚೆ ಸಾಧ್ಯವಾಗಿಲ್ಲ. ಈ ಬಗ್ಗೆ “ಉದಯವಾಣಿ’ಯ ವೇದಿಕೆಯಲ್ಲಿ ರಾಜಕಾರಣಿಗಳು, ವಿಷಯ ತಜ್ಞರು ತಮ್ಮ ವಾದ ಮಂಡಿಸಲಿದ್ದಾರೆ. ದೃಷ್ಟಾರ ಮುಂದಿನ ಪೀಳಿಗೆಯ ಬಗ್ಗೆ ಯೋಚನೆ ಮಾಡಿದರೆ, ರಾಜಕೀಯ ನಾಯಕ ಕೇವಲ ಮುಂದಿನ ಚುನಾವಣೆ ಗೆಲ್ಲುವುದು ಹೇಗೆ ಎನ್ನುವುದನ್ನಷ್ಟೇ ಯೋಚಿಸುತ್ತಾನೆ. ಇದು ರಾಜಕೀಯ …

Read More »