ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರೈಲ್ವೆ ಜಂಕ್ಷನ್‌ನ 18 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಎಲ್ಲ 18 ಕೊರೊನಾ ಸೋಂಕಿತರು ಒಂದೇ ಕಟ್ಟಡದಲ್ಲಿ ವಾಸವಾಗಿದ್ದಾರೆ. ಈ ಕಟ್ಟಡವನ್ನು 14 ದಿನಗಳ ಕಾಲ ಕಂಟೈನ್ಮೆಂಟ್ ವಲಯವನ್ನಾಗಿ ಒಳಪಡಿಸಲಾಗಿದೆ. ಈ ಹಿನ್ನೆಲೆ ರೈಲ್ವೆ ಮೂಲಕ ಬರುವ ಪ್ರಯಾಣಿಕರ ಸುರಕ್ಷತೆಗೂ ಕ್ರಮಕೈಗೊಳ್ಳಲು ಆಡಳಿತ ತೀರ್ಮಾನಿಸಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ …
Read More »50 ಕೋಟಿ ರೂ.ಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಗಳಿಗೆ ಏಪ್ರಿಲ್ 1ರಿಂದ ಇ-ಇನ್ ವಾಯ್ಸ್ ಕಡ್ಡಾಯ
ನವದೆಹಲಿ : 50 ಕೋಟಿ ರೂ.ಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಗಳಿಗೆ ಏಪ್ರಿಲ್ 1ರಿಂದ ಬಿ2ಬಿ ವಹಿವಾಟಿಗೆ ಇ-ಇನ್ ವಾಯ್ಸ್ ಗಳನ್ನು ತಯಾರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಕಾನೂನಿನ ಪ್ರಕಾರ, 2020ರ ಅಕ್ಟೋಬರ್ 1ರಿಂದ 2021ರ ವರೆಗೆ 500 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸುವ ಕಂಪನಿಗಳಿಗೆ ವ್ಯಾಪಾರ-ವಹಿವಾಟಿಗೆ (ಬಿ2ಬಿ) ಇ-ಇನ್ ವಾಯ್ಸಿಂಗ್ ಕಡ್ಡಾಯಗೊಳಿಸಲಾಗಿದೆ. ಏಪ್ರಿಲ್ 1ರಿಂದ 50 ಕೋಟಿ ರೂ.ಗೂ ಹೆಚ್ಚು …
Read More »ಸಿ.ಡಿ ಇವೆ ಎಂದು ಹೇಳುವವರನ್ನು ಸರ್ಕಾರ ಏಕೆ ಬಂಧಿಸುತ್ತಿಲ್ಲ..? : ಹೆಚ್ಡಿಕೆ ಪ್ರಶ್ನೆ
ಬೆಂಗಳೂರು,ಮಾ.9-ಮಾಧ್ಯಮಗಳ ಮುಂದೆ ಸಿ.ಡಿ ಇವೆ ಎಂದು ಹೇಳಿಕೆ ನೀಡುವವರನ್ನು ರಾಜ್ಯ ಸರ್ಕಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಬಂಧಿಸಬೇಕಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಡಿ ಪ್ರಕರಣದಂತಹ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಕುಟುಂಬ ರಾಜಕೀಯ ದುರ್ಬಳಕೆ ಮಾಡಿಕೊಳ್ಳುವುದಾಗಲಿ ಅಥವಾ ಇನ್ನೊಬ್ಬರ ತೇಜೋವಧೆಗೆ ಕೈಹಾಕಿಲ್ಲ. ನಮ್ಮ ತಂದೆಯವರ ಕಾಲದಿಂದಲೂ ಇಂಥ ಕೆಲಸ ಮಾಡಿಲ್ಲ ಎಂದರು.ನಾಲ್ಕು ಗೋಡೆ ಮಧ್ಯೆ ನಡೆದಿರುವುದನ್ನು ದಾಖಲಿಸಿ ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಕಾನೂನು ಬಾಹಿರವಲ್ಲವೇ? ಆ …
Read More »ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!
ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಹಾಜರಾಗದೆ ಬಹಿಷ್ಕರಿಸಿತು. ಸೋಮವಾರ ಬಜೆಟ್ ಮಂಡನೆ ವೇಳೆ ಸದನದಿಂದ ಸಭಾತ್ಯಾಗ ಮಾಡಿದ್ದ ಕಾಂಗ್ರೆಸ್ ಇಂದು ಕೂಡಾ ಬಿಎಸಿ ಸಭೆಗೂ ಹಾಜರಾಗದೆ ಅಸಮಾಧಾನ ತೋರಿತು. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಹೀಗಾಗಿ ಇಂದು ಸಭೆ ಹಾಜರಾಗಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾದರು. …
Read More »ಯುವತಿಗೆ ₹ 5 ಕೋಟಿ, ವಿದೇಶದಲ್ಲಿ ಫ್ಲ್ಯಾಟ್ ಆಮಿಷ: ಗದ್ಗದಿತ ಜಾರಕಿಹೊಳಿ ಆರೋಪ
ಬೆಂಗಳೂರು: ಇದು ಶೇ. 100ರಷ್ಟು ನಕಲಿ ಸಿಡಿ. ನಾನು ಅಪರಾಧಿಯಲ್ಲ, ನಿರಪರಾಧಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಗದ್ಗದಿತರಾಗಿದ್ದಾರೆ. ರಮೇಶ್ ಜಾರಕಿಹೊಳಿಯವರು ಮಹಿಳೆಯನ್ನು ಕೆಲಸದ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಿ.ಡಿ ಜೊತೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಇತ್ತೀಚೆಗೆ ಕೇಸ್ ವಾಪಸ್ ಪಡೆದಿದ್ದರು. ಇದರ ಬೆನ್ನಲ್ಲೇ, ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. …
Read More »‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ
ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ …
Read More »ಮತ್ತೆ ಸಚಿವ ಸಂಪುಟಕ್ಕೆ ಸೇರುತ್ತಾರ ರಮೇಶ್ ಜಾರಕಿಹೊಳಿ…20ಶಾಸಕರಿಂದB.S.Y.ಗೆ ಮನವಿ….?
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿನ್ನಲೆ ದಿನಕ್ಕೊಂದು ತಿರುವು ಪಡೆದು ರಮೇಶ್ ಜಾರಕಿಹೊಳಿ ಅವರ ವಿರುದ್ಧ ಹುನ್ನಾರ ನಡೆದಿದೆ ಎಂದು ದಿನದಿಂದ ದಿನಕ್ಕೆ ಕ್ರಮೇಣ ಇದು ಸುಳ್ಳು ಎಂದು ಸಾಬೀತಾಗುವ ಎಲ್ಲ ಲಕ್ಷಣಗಳೂ ಕಂಡು ಬರುತ್ತಿವೆ. ಅದೇರೀತಿ ನಿನ್ನೆ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಮಾತನಾಡಿದ ಪ್ರಕಾರ ರಮೇಶ್ ಜಾರಕಿಹೊಳಿ ಅವರು ತಪ್ಪು ಮಾಡಿಲ್ಲ ಅಂದ್ರೆ ಮಾಧ್ಯಮದ ಮುಂದೆ ಬರಲು ಹೇಳುತ್ತೇನೆ ಎಂದು …
Read More »ಎಲ್ಲೆಲ್ಲೂ ಮಹಿಳೆಯರೇ: ನೈಋತ್ಯ ರೈಲ್ವೇಯಿಂದ ಸಂಪೂರ್ಣ ಸ್ತ್ರೀಮಯ ಮಹಿಳಾ ದಿನಾಚರಣೆ
ಬೆಂಗಳೂರು: ಇಂದು ಬೆಂಗಳೂರಿನಿಂದ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದವರಿಗೆ ಒಂದು ವಿಶೇಷ ಕಾಣಿಸಿತ್ತು. ಅವರಿಗೆ ಆ ರೈಲಿನಲ್ಲಿ, ರೈಲ್ವೇ ನಿಲ್ದಾಣದಲ್ಲಿ ಎಲ್ಲ ಸಿಬ್ಬಂದಿ ಮಹಿಳೆಯರೇ ಆಗಿದ್ದರು. ಆ ಮೂಲಕ ನೈಋತ್ಯ ರೈಲ್ವೇ ಇಲಾಖೆ ವಿಶೇಷವಾಗಿ ಮಹಿಳಾ ದಿನವನ್ನು ಆಚರಿಸಿತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲ್ಯಾಟ್ಫಾರಂ-8ರ ಮೂಲಕ ಬೆಳಗ್ಗೆ 11.15ಕ್ಕೆ ಬಾಗಲಕೋಟೆಗೆ ಹೊರಟ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಅದರ ಲೋಕೋ ಪೈಲಟ್, ಟಿಕೆಟ್ ಕಲೆಕ್ಟರ್ ಸೇರಿ ಎಲ್ಲ …
Read More »ದಿ. ಸುರೇಶ್ ಅಂಗಡಿ ಕನಸಿನ ಯೋಜನೆಗೆ ಅನುದಾನ
ಧಾರವಾಡ, ಮಾರ್ಚ್ 08: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನೆನಪು ಮಾಡಿಕೊಂಡರು. ಬೆಳಗಾವಿ ಕ್ಷೇತ್ರದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ 2020ರ ಸೆಪ್ಟೆಂಬರ್ 23ರಂದು ವಿಧಿವಶರಾಗಿದ್ದರು. ಕೋವಿಡ್ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಧಾರವಾಡ- ಬೆಳಗಾವಿ ನೇರ ರೈಲು ಮಾರ್ಗ …
Read More »ರಾಜ್ಯದಲ್ಲಿ ಮಹಿಳಾ ಉದ್ಯಮಿಗಳು ಹಾಗೂ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಉತ್ತೇಜನ ನೀಡುವ ಬಜೆಟ್ – ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು 8 ನೇ ಬಾರಿಗೆ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯದ ಮಹಿಳಾ ಉದ್ಯಮಿಗಳು ಹಾಗೂ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಸ್ಪಷ್ಟ ದೂರದರ್ಶಿತ್ವ ಮತ್ತು ಮಾರ್ಗದರ್ಶಿಗಳನ್ನು ನೀಡಿದ್ದಾರೆ. ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆ ಮತ್ತು ಕೃಷಿ ಭೂಮಿಯನ್ನು ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಭೂ ಕಂದಾಯ ಅಧಿನಿಯಮ ತಿದ್ದುಪಡಿಕೆಯ ಭರವಸೆ ನೀಡುವ ಮೂಲಕ ರಾಜ್ಯ ಕೈಗಾರಿಕಾಭಿವೃದ್ದಿಗೆ ಸಜ್ಜಾಗಿದೆ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ …
Read More »