Breaking News

Uncategorized

ಅದ್ಧೂರಿ ರಾಜ್ಯೋತ್ಸವಕ್ಕೆ ಚಾಲನೆ

ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿ ಕೂಡ ಕರ್ನಾಟಕ ರಾಜ್ಯೋತ್ಸವಕ್ಕೆ, ಇಲ್ಲಿ‌ನ ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಮಧ್ಯರಾತ್ರಿಯೇ ಚಾಲನೆ ನೀಡಲಾಯಿತು. ಕಿಕ್ಕಿರಿದು ಸೇರಿದ ಕನ್ನಡ ಮನಸ್ಸುಗಳು ಇನ್ನಿಲ್ಲದಂತೆ ಸಂಭ್ರಮಿಸಿದವು. ರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಜೈಕಾರ, ಜಯಘೋಷಗಳು, ಸಂಭ್ರಮ ಮುಗಿಲುಮುಟ್ಟಿತು.   ನಡುರಾತ್ರಿಯೇ ಅಪಾರ ಸಂಖ್ಯೆಯ ಯುವಕ, ಯಿವತಿಯರು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡರು. ಎಲ್ಲರ ಕೈಯಲ್ಲಿ ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಗಳು. ಹಳದಿ ಕೆಂಪು ಬಣ್ಣದ ಬಲೂನುಗಳ ಹಾರಾಟ. …

Read More »

ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಎರಡು ಪಟ್ಟು ಏರಿಕೆ

ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ 50ನೇ ವರ್ಷದ ಸಂಭ್ರಮಾಚದರಣೆಯಲ್ಲಿದೆ. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಇದೀಗ ಅದರ ಮೊತ್ತವನ್ನು ಹೆಚ್ಚಿಸಿದೆ. ನವೆಂಬರ್ 1ರಂದು ನಡೆಯಲಿರುವ ಕನ್ನಡೋತ್ಸವ ಸಂಭ್ರಮಾಚರಣೆಯಲ್ಲಿ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಾಗಿತ್ತು. ಈ ಪ್ರಶಸ್ತಿಯ ಮೊತ್ತವನ್ನು 50,000 ಎಂದು ಮೊದಲು …

Read More »

ದೀಪಾವಳಿ ಬಂದರೆ ಸಾಕು ಭರ್ಜರಿ ಖಾದ್ಯಗಳ ರಸದೌತಣ

ದೀಪಾವಳಿ ಬಂದರೆ ಸಾಕು ಭರ್ಜರಿ ಖಾದ್ಯಗಳ ರಸದೌತಣ. ಬಗೆಬಗೆಯ ತಿನುಸುಗಳ ಸೊಗಸೂ ಇರುತ್ತದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಗಡಿ ಜಿಲ್ಲೆಗಳಲ್ಲಿ ಕನ್ನಡ- ಮರಾಠಿ ಮಿಶ್ರ ಸಂಸ್ಕೃತಿ ಖಾದ್ಯಗಳನ್ನು ಸವಿಯುವುದೇ ಸಡಗರ. ಸಿಹಿಯೂ, ಖಾರವೂ, ಕರಿದ ಪದಾರ್ಥಗಳೂ, ಬೇಕರಿ ತಿನಿಸುಗಳೂ… ಒಂದೇ ಎರಡೇ. ತಿಂಡಿಪ್ರಿಯರಿಗಂತೂ ಇದು ಹೇಳಿ ಮಾಡಿಸಿದ ಹಬ್ಬ. ‘ಬಲೀಂದ್ರ ಪೂಜೆ’ ಅಮಾವಾಸ್ಯೆಯ ವಿಶೇಷ. ಈ ದಿನದಿಂದಲೇ ವಿಕ್ರಮ ಸಂವತ್ಸರ ಆರಂಭವಾಗುತ್ತದೆ. ವರ್ತಕರು, ಉದ್ಯಮಿಗಳಿಗೆ ಈ ದಿನ ಅತ್ಯಂತ …

Read More »

ರಿವಾಲ್ವರ್ ಇಟ್ಟುಕೊಂಡ ಆಂಜನೇಯ

ಚಿಕ್ಕೋಡಿ: ದೇವರ ಆಯುಧಗಳು ಎಂದರೆ, ಗದೆ, ಬಿಲ್ಲು, ಖಡ್ಗ, ತ್ರಿಶೂಲ, ಶಂಖ, ಚಕ್ರ ನೋಡಿರುತ್ತೀರಿ. ಆದರೆ, ಪಿಸ್ತೂಲ್‌ ಅನ್ನೇ ಆಯುಧವಾಗಿಸಿಕೊಂಡ ದೇವರನ್ನು ನೋಡಬೇಕಾದರೆ ತಾಲ್ಲೂಕಿನ ಜಾಗನೂರಿಗೆ ಬರಬೇಕು. ಇಲ್ಲಿನ ಆಂಜನೇಯ ತನ್ನ ಸೊಂಟಕ್ಕೆ ಪಿಸ್ತೂಲ್ ಇಟ್ಟುಕೊಂಡಿರುವುದು ಕಂಡುಬರುತ್ತದೆ. ಜಾತ್ರೆ, ಉತ್ಸವ, ಹನುಮ ಜಯಂತಿ, ರಾಮನವಮಿ ಸೇರಿ ವಿಶೇಷ ಸಂದರ್ಭ ಹನುಮಾನ ದೇವರ ಮೂರ್ತಿ ಅಲಂಕರಿಸುವಾಗ, ಪಿಸ್ತೂಲ್ ಇರಿಸುವ ಪರಿಪಾಠ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ದೀಪಾವಳಿ ಪ್ರಯುಕ್ತ ನ.1, 2ರಂದು ವೈಭವದಿಂದ …

Read More »

ನಕಲಿ ವೈದ್ಯರಿಗೆ ಕಡಿವಾಣ ಹಾಕಿ’

ರಾಮದುರ್ಗ: ‘ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿದೆ. ಇದರಿಂದ ಜನರಿಗೆ ಸ್ವಲ್ಪ ಪ್ರಮಾಣದ ಸಹಾಯವಾಗಿದ್ದರೂ ಪ್ರಾಣದ ಜೊತೆಗೆ ಆಟವಾಡುವ ನಕಲಿ ವೈದ್ಯರಿಗೆ ಕಡಿವಾಣ ಹಾಕಲಾಗುವುದು’ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.   ರಾಮದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ₹55 ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್‌ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿ, ‘ತರಬೇತಿ ಇಲ್ಲದೆ ನಕಲಿ ವೈದ್ಯರು ನೀಡುವ ಚಿಕಿತ್ಸೆ ಮತ್ತು ಔಷಧದಿಂದ ರೋಗಿಗಳಿಗೆ ತಾತ್ಕಾಲಿಕವಾಗಿ …

Read More »

ಅಳ್ನಾವರ: ಧಾರಾಕಾರ ಮಳೆ

ಅಳ್ನಾವರ: ಬುಧವಾರ ಸಂಜೆ ಏಕಾಎಕಿ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಹೊರ ವಲಯದ ಹೊಲ ಗದ್ದೆಗಳಲ್ಲಿ ಹಾಗೂ ರಾಶಿ ಹಾಕಿದ್ದ ಫಸಲನ್ನು ರಕ್ಷಿಲು ರೈತರು ಪರದಾಡಿದರು. ಸುಮಾರು ಒಂದು ತಾಸು ಧಾರಾಕಾರ ಮಳೆ ಸುರಿಯಿತು. ಪಟ್ಟಣದ ತೆಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿದ್ದವು. ಇಂದಿರಾ ನಗರ ಹಾಗೂ ನೆಹರೂ ನಗರ ಬಡಾವಣೆ ಹಾಗೂ ಮಿಲ್ಲತ್ ಶಾಲೆಯ ಹತ್ತಿರದ ರಸ್ತೆಗಳಲ್ಲಿ ನೀರು ನಿಂತಿತ್ತು. ಚರಂಡಿಗಳು ತುಂಬಿ ಹರಿದವು. ‌ಎಪಿಎಂಸಿ ಆವರಣದಲ್ಲಿ ಗೋವಿನ ಜೋಳ ಒಣಗಿಸಲು …

Read More »

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು …

Read More »

ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೈಲಹೊಂಗಲ ಉತ್ಸವದ ಜಾನಪದ ಕಲಾಮೇಳ, ರೂಪಕಗಳ ಮೆರವಣಿಗೆ ಗಮನ ಸೆಳೆಯಿತು.   ಕಿತ್ತೂರು ಚನ್ನಮ್ಮನ ವೃತ್ತದಿಂದ ಆರಂಭವಾದ ಕಲಾಮೇಳ ಮೆರವಣಿಗೆ ಎಪಿಎಂಸಿ ಗಣೇಶ ದೇವಸ್ಥಾನ, ಇಂಚಲ ಕ್ರಾಸ್‌, ಬಸ್‌ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗ ವಾಗಿ ಚನ್ನಮ್ಮನ ಸಮಾಧಿ  ಸ್ಥಳಕ್ಕೆ …

Read More »

ಚನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೈಲಹೊಂಗಲ (ದೊಡ್ಡಬಾವೆಪ್ಪ ವೇದಿಕೆ): ‘ಪ್ರತಿ ವರ್ಷ ಬೈಲಹೊಂಗಲದಲ್ಲಿ ಉತ್ಸವ ನಡೆಯಬೇಕು. ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕ ಮಾಡಲು ಸರ್ಕಾರಗಳು ಶ್ರಮಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.   ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಲ್ಲಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಸೋಮವಾರ ನಡೆದ ಬೈಲಹೊಂಗಲ ಉತ್ಸವ-2024ರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, …

Read More »

ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ: ಕೇಸ್ ದಾಖಲಿಸಲು ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.   ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ …

Read More »