Breaking News

Uncategorized

ರಸ್ತೆ ಪ್ರಗತಿಯಿಂದ ಜನರಿಗೆ ಅನುಕೂಲ

ಅಥಣಿ ಗ್ರಾಮೀಣ: ಗ್ರಾಮಗಳ ಅಭಿವೃದ್ಧಿ ಕಾಮಗಾರಿ ಯಶಸ್ವಿಯಾಗಬೇಕಾದರೆ, ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ಜಿಪಂ ವತಿಯಿಂದ ಹಮ್ಮಿಕೊಂಡಿದ್ದ 1.45 ಕೋಟಿ ರೂ. ವೆಚ್ಚದ ರಸ್ತೆ, ಸಮುದಾಯ ಭವನ ನಿರ್ಮಾಣ ಹಾಗೂ ಕಟ್ಟಡ ಅಡಿಗಲ್ಲು ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜನರ ಜೀವನಮಟ್ಟ ಉತ್ತಮಗೊಳಿಸುವುದರ ಜತೆಗೆ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನಿರ್ಮಿಸುವುದೇ ನಿಜವಾದ ಅಭಿವೃದ್ಧಿಯಾಗಿದೆ. ಸರ್ಕಾರದಿಂದ …

Read More »

ವಿದ್ಯಾರ್ಥಿನಿ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಜೈಲು ಶಿಕ್ಷೆ

ಬೆಳಗಾವಿ: ಹಾಡಹಗಲೇ ಕಾಲೇಜ್ ವಿದ್ಯಾರ್ಥಿನಿ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕನಿಗೆ 2ನೇ ಜೆಎಂಎಫ್ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ ವಿಧಿಸಿದೆ. ಜಾಫರ್ ಸಾದಿಕ್ ಮೈನುದ್ದೀನ್ ಕಂಚಿ ಶಿಕ್ಷೆಗೊಳಗಾದ ಅಪರಾಧಿ. 2019ರ ಜೂ.23ರಂದು ಕೇಂದ್ರ ಬಸ್ ನಿಲ್ದಾಣದಿಂದ ಕೋಟೆ ಕೆರೆ ರಸ್ತೆಯತ್ತ ನಡೆದುಕೊಂಡು ಹೊರಟಿದ್ದಾಗ ಮಳೆ ಬಂದ ಕಾರಣಕ್ಕೆ ವಿದ್ಯಾರ್ಥಿನಿ ಈತನ ಆಟೋ ಹತ್ತಿದ್ದಳು. ಈಕೆ ಒಂಟಿಯಾಗಿದ್ದನ್ನೇ ದುರುಪಯೋಗಪಡಿಸಿಕೊಂಡಿದ್ದ ಚಾಲಕ ಕೆಇಬಿ ಪವರ್ ಗ್ರೀಡ್ …

Read More »

ಬೀಳಗಿಯಲ್ಲಿ ₹43.40 ಲಕ್ಷಕ್ಕೂ ಅಧಿಕ ಹಣ ವಂಚನೆ ; ಇಬ್ಬರು ಆರೋಪಿಗಳ ಬಂಧನ

ಬಾಗಲಕೋಟೆ ಜಿಲ್ಲೆ ಬಿಳಗಿ ಪೊಲೀಸ್ ಠಾಣೆಯಲ್ಲಿ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿರುದ್ಧ ಸಾರ್ವಜನಿಕರಿಗೆ ಆಕರ್ಷಕ ಲಾಭಾಂಶದ ಭರವಸೆ ನೀಡಿ ಹಣ ಸಂಗ್ರಹಿಸಿ ವಂಚನೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಸಂಸ್ಥೆಯು ವಿವಿಧ ಮುಖಬೆಲೆಯ ಯೋಜನೆಗಳ ಮೂಲಕ, ವಿಶೇಷವಾಗಿ ಮಹಿಳೆಯರನ್ನು ಸಣ್ಣ-ಸಣ್ಣ ಗುಂಪುಗಳಾಗಿ ಸೇರಿಸಿ, ಮೂರು ವರ್ಷಗಳ ನಂತರ ಹೆಚ್ಚಿನ ಹಣ ಮರಳಿ ನೀಡುವುದಾಗಿ ಭರವಸೆ ನೀಡಿ ವಾರದ/ತಿಂಗಳ ಕಂತುಗಳ ರೂಪದಲ್ಲಿ ಹಣ ಸಂಗ್ರಹಿಸಿರುವುದು ತನಿಖೆಯಲ್ಲಿ ಬೆಳಕಿಗೆ …

Read More »

ಸಾಲದ ಕಿರುಕುಳಕ್ಕೆ ಮಗನ ಕೊಂದು ತಾನೂ ಆತ್ಮಹತ್ಯೆ

ಬೆಳಗಾವಿ: ತಾಲೂಕಿನ ಪೀರನವಾಡಿ ಪಟ್ಟಣದಲ್ಲಿ ಮೂರು ವರ್ಷದ ಮಗನಿಗೆ ನೇಣು ಹಾಕಿ ಬಳಿಕ ತಾಯಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ, ಮೈದುನ, ವಾರಗಿತ್ತಿ ಸೇರಿದಂತೆ ಆರು ಜನರ ವಿರುದ್ಧ ಸೋಮವಾರ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಘಟನೆ?: ಅವಿಭಕ್ತ ಕುಟುಂಬದಲ್ಲಿ ಮಾಡಿದ ಸಾಲವನ್ನು ಬೇರೆಯಾದ ಬಳಿಕ ಹಿರಿ ಮಗ ಹಾಗೂ ಆಕೆಯ ಪತ್ನಿಯೇ ತೀರಿಸಬೇಕೆಂದು ಒತ್ತಡ ಹಾಕಿದ್ದರಿಂದ ಮನನೊಂದ ಪ್ರೇಮಾ ನಾಗೇಶ ತಳವಾರ(28) …

Read More »

18ರಂದು ಹಾಸ್ಯ ಕಾರ್ಯಕ್ರಮ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ‘ನಕ್ಕು ಹಗುರಾಗಿರಿ’ ಹಾಸ್ಯ ಕಾರ್ಯಕ್ರಮ ಜು.18ರಂದು ಸಂಜೆ 4 ಗಂಟೆಗೆ ನೆಹರು ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಜಿ.ಎಸ್.ಸೋನಾರ ಅತಿಥಿಯಾಗಿ ಆಗಮಿಸಲಿದ್ದಾರೆ. ಸಂಚಾಲಕ ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಪಾರ್ವತಿ ತುಪ್ಪದ ರಚಿಸಿರುವ ಲೀಲಾಮೃತ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More »

ಇಂದು ಉಚಿತ ತಪಾಸಣೆ ಶಿಬಿರ

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ಲಾಸ್ಟಿಕ್ ಸರ್ಜರಿ ವಿಭಾಗದಿಂದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಅಂಗವಾಗಿ ಜು.15ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಸುಟ್ಟ ಗಾಯ, ಸುಟ್ಟಗಾಯದಿಂದ ಮುದುಡಿದ ಚರ್ಮ, ಸೀಳು ತುಟಿ, ಅಂಗಳ ತೊಂದರೆಯಿಂದ ಬಳಲುತ್ತಿರುವವರು ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ …

Read More »

ರಾಜ್ಯದಲ್ಲಿ ದರೋಡೆ, ಸುಲಿಗೆ ಕೊಲೆ ಪ್ರಕರಣ ಸಂಖ್ಯೆ ಇಳಿಕೆ

ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ದರೋಡೆ, ಸುಲಿಗೆ, ಸರಗಳ್ಳತನ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಹಲವು ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕವಿತ್ತು. ಆದರೆ 2025ರ ಅಂಕಿ-ಅಂಶಗಳನ್ನು 2024ಕ್ಕೆ ಹೋಲಿಸಿದರೆ 2025ರಲ್ಲಿ ಸಾಮಾನ್ಯ ಅಪರಾಧ ಪ್ರಕರಣಗಳು ಹಲವು ಜಿಲ್ಲೆಗಳಲ್ಲಿ ಸರಾಸರಿ ಶೇ.30ರಷ್ಟು ಕಡಿಮೆಯಾಗಿವೆ. ಬೆಂಗಳೂರು, ಮಂಗಳೂರು, ಮೈಸೂರು ಸೇರಿ ಪ್ರಮುಖ ನಗರ ಪ್ರದೇಶಗಳಲ್ಲೂ ಇದೇ ಪ್ರಮಾಣದಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ ಕಂಡುಬಂದಿದೆ. ಆದರೆ …

Read More »

ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸಿರುವ ಹೋರಾಟ ಇಂದು ಹೊಸ ತಿರುವು ಪಡೆದಿದೆ. ಪಾಲಿಕೆಯಲ್ಲಿ ಬೆಳಗಾವಿಯು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಸ್ವೀಕರಿಸುವವರೆಗೂ ಪಾಲಿಕೆಗೆ ರಾಜ್ಯ ಸರಕಾರ ಯಾವದೇ ರೀತಿಯ ಅನುದಾನ ಬಿಡುಗಡೆ ಮಾಡಬಾರದೆಂದು ಗಡಿನಾಡು ಕನ್ನಡಿಗರ ಸೇನೆಯು ಆಗ್ರಹಿಸಿದೆ. ಈ ಕುರಿತು ಮಂಗಳವಾರ ಮುಂಜಾನೆ ಪ್ರಾದೇಶಿಕ ಆಯುಕ್ತರ ಕಚೇರಿಯ ಎದುರು ಮಹಾಪೌರರ ಹಾಗೂ …

Read More »

ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದಂಪತಿ. ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಏಕಾಏಕಿ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಾಯಕಾರಿ ರೀತಿಯಲ್ಲಿ ಜೋತುಬೀಳುತ್ತಿದ್ದ ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಣೆ ಮಾಡದ …

Read More »

ಅಂಗಡಿ ಕಾಲೇಜಿನ ಎಐಟಿಎಂ ಎಂಬಿಎ ವಿದ್ಯಾರ್ಥಿಗಳಿಗೆ ಮಲೇಷ್ಯಾ ಅಂತರರಾಷ್ಟ್ರೀಯ ಅಧ್ಯಯನ ಪ್ರವಾಸ

ಬೆಳಗಾವಿ: ಬೆಳಗಾವಿಯ ಎಸ್‌ಎಇಎಫ್‌ನ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್  ನ ಎಂಬಿಎ ವಿಭಾಗವು 2026ರ ಜುಲೈ 2ರಿಂದ 8ರವರೆಗೆ ಮಲೇಷ್ಯಾಕ್ಕೆ ಯಶಸ್ವಿಯಾಗಿ ಅಂತರರಾಷ್ಟ್ರೀಯ ಅಧ್ಯಯನ ಪ್ರವಾಸವನ್ನು ಆಯೋಜಿಸಿತು. ಈ ಪ್ರವಾಸವು ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶೈಕ್ಷಣಿಕ ಅನುಭವ, ಕೈಗಾರಿಕಾ ಪರಿಚಯ ಹಾಗೂ ವಿವಿಧ ಸಂಸ್ಕೃತಿಗಳ ಅರಿವು ಮೂಡಿಸುವ ಮಹತ್ವದ ಅವಕಾಶವನ್ನು ಕಲ್ಪಿಸಿತು. ಈ ಏಳು ದಿನಗಳ ಜಾಗತಿಕ ಅಧ್ಯಯನ ಕಾರ್ಯಕ್ರಮದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದ್ದರು. ಪ್ರವಾಸದ ಅಂಗವಾಗಿ ಯೂನಿವರ್ಸಿಟಿ …

Read More »