ಬೆಂಗಳೂರು: ನೋಟಿಸ್ ಕೊಟ್ಟರೆ ಅಂಜುವ ಮಗ ನಾನಲ್ಲ. ನನಗೆ ನೋಟಿಸ್ ಕೊಟ್ಟರೂ ನನ್ನ ಬಾಯಿ ಬಂದ್ ಆಗುವುದಿಲ್ಲ. ನಾನು ಯಾರಿಗೂ ಪಂಪ್ ಹೊಡೆಯೋ ರಾಜಕಾರಣಿ ಅಲ್ಲ. ನನ್ನನ್ನು ಅಂಜಿಸುತ್ತೇನೆ ಎಂದು ತಿಳಿದಿದ್ದರೆ, ಆದಷ್ಟು ಬೇಗ ಕುರ್ಚಿ ಖಾಲಿ ಮಾಡಿಸಬೇಕಾಗುತ್ತೆ ಎಂದು ಶಾಸಕ ಬಸಗೌಡ ರಾ.ಪಾಟೀಲ್ ಯತ್ನಾಳ್ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ನೇರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಬಿಎಸ್ವೈ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2ಎ …
Read More »ವಿದ್ಯಾರ್ಥಿಗಳು ಬಸ್‌ಪಾಸ್ ಇದ್ದರೂ ಹಣ ನೀಡಿ ಟಿಕೆಟ್ ಖರೀದಿಸಬೇಕಾದ ಪರಿಸ್ಥಿತಿ
ಚಿಂತಾಮಣಿ: ಪ್ರಸಿದ್ಧ ವಾಣಿಜ್ಯ ಮತ್ತು ಶೈಕ್ಷಣಿಕ ಕ್ಷೇತ್ರ ಚಿಂತಾಮಣಿಯ ಗ್ರಾಮೀಣ ಮತ್ತು ಪಟ್ಟಣ ವಿದ್ಯಾರ್ಥಿಗಳು ಬಸ್‌ಪಾಸ್ ಇದ್ದರೂ ಹಣ ನೀಡಿ ಟಿಕೆಟ್ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಕೇಂದ್ರ ಹಾಗೂ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ತಾಲೂಕಿನ ಬಸ್ ನಿಲ್ದಾಣಕ್ಕೆಬರುವ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಳಿ ಪಾಸ್ ಇದ್ದರೂ ಹಣ ಪಡೆದು ಟಿಕೆಟ್ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಅಳಲೇನು?: ತಾಲೂಕಿನಿಂದ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರಿಗೆವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ತೆರಳುತ್ತಾರೆ.ಆದರೆ, ಬಸ್ ನಿಲ್ದಾಣದಲ್ಲಿ …
Read More »ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ಷಡ್ಯಂತ್ರ..!
ಬೆಂಗಳೂರು, ಫೆಬ್ರವರಿ 22: ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ಷಡ್ಯಂತ್ರ..! ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಟಟ್ಟು ದಂಡ ಎಂಬುದು ದಂಡದ ಹೆಸರಿನಲ್ಲಿ ಮಾಡುತ್ತಿರುವ ದಂಧೆ..! ವಾಸ್ತವದಲ್ಲಿ ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ದಂಡ ಹಾಕಲಿಕ್ಕೆ ಕಾನೂನಿನಲ್ಲಿ ಅವಕಾಶವೇ ಇಲ್ಲ! ಸಂವಿಧಾನದತ್ತವಾಗಿ ಪ್ರಜೆಗಳಿಗೆ ಸಿಕ್ಕಿರುವ ಮೂಲಭೂತ ಹಕ್ಕುಗಳ ದಮನ. ಇದರ ವಿರುದ್ಧ ಜನರು ಧ್ವನಿಯೆತ್ತದಿದ್ದರೆ ಭವಿಷ್ಯದ ದಿನಗಳು ಇನ್ನೂ ಕರಾಳವಾಗಲಿವೆ..! ಫಾಸ್ಟ್ಯಾಗ್ ಕಡ್ಡಾಯ, ಫಾಸ್ಟ್ಯಾಗ್ ಇಲ್ಲದಿದ್ದರೆ ದಂಡ ವಿಧಿಸುತ್ತಿರುವ ಖಾಸಗಿ ಕಂಪನಿಗಳ ನೀತಿ, …
Read More »ಮಠಾಧಿಪತಿಗಳೇ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ : ವಾಟಾಳ್ ನಾಗರಾಜ್
ಮೈಸೂರು : ರಾಜ್ಯದಲ್ಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಮಠಾಧೀಶರ ವಿರುದ್ಧ ವಾಟಾಳ್ ನಾಗರಾಜ್ ಗರಂ ಆಗಿದ್ದು, ಇಂದು ಮೈಸೂರಿನ ಹಾಡಿರ್ಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಮೀಸಲಾತಿಗಾಗಿ ಹೋರಾಟ ಮಾಡಿ ರಾಜ್ಯವನ್ನು ಜಾತಿಗೆ ಸೀಮಿತಗೊಳಿಸಬಾರದು. ಮಠಾಧಿಪತಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ಮಠದಲ್ಲಿಯೇ ಇರಿ. ಮೀಸಲಾತಿ ಹಾಗೂ ಜಾತಿಗಾಗಿ ಹೋರಾಟಕ್ಕೆ ಬಂದರೆ ನಿಮ್ಮ ಶಕ್ತಿ ಕುಂದುತ್ತದೆ ಎಂದು ಮನವಿ ಮಾಡಿಕೊಂಡರು. …
Read More »ಪತಂಜಲಿ ಕೊರೊನಿಲ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು
ಪತಂಜಲಿ ಸಂಸ್ಥೆಯು ಕೊರೊನಾ ವೈರಸ್ ಸೋಂಕು ನಿಗ್ರಹಕ್ಕೆಂದು ಹೊರತಂದಿರುವ ಕೊರೊನಿಲ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆಯುರ್ವೇದ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಿಲ್ಗೆ ಮಾನ್ಯತೆ ನೀಡಿದೆ ಎಂದು ವೈರಲ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಕೋವಿಡ್-19 ತಡೆಯಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೊನಿಲ್ ಸಹಕಾರಿ ಎಂದು ಪತಂಜಲಿ ಸಂಸ್ಥೆ ಹೇಳಿತ್ತು. ಇದಕ್ಕೆ ಆಯುಷ್ …
Read More »ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ
ಬೆಳಗಾವಿ: ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ ತೆಗೆಯುತ್ತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮ ಕೂಡ ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ಧಮ್ಕಿ ಹಾಕಿ ಪತ್ರವೊಂದನ್ನು ರವಾನಿಸಿದೆ. ಮಿರಜದ ಶಾಸ್ತ್ರಿ ವೃತ್ತದಲ್ಲಿ ಬಸ್ಸುಗಳ ನಿಲುಗಡೆಯೇ ಇಲ್ಲ. ಅಲ್ಲಿಗೆ ಬರುವ ಕರ್ನಾಟಕದ ” ಪರ್ಮಿಟ್ ಇಲ್ಲದ” ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತವೆ. ಇದರಿಂದಾಗಿ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ …
Read More »ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ …
Read More »ರೈಲ್ವೆ ನಿಲ್ದಾಣ ನೂತನ ಕಟ್ಟಡ ಉದ್ಘಾಟನೆ ಶೀಘ್ರ
ದಾವಣಗೆರೆ: ರೈಲ್ವೆ ನಿಲ್ದಾಣದ ನೂತನ ಕಟ್ಟಡ ಮತ್ತುಡಿಸಿಎಂ ರೈಲ್ವೆ ಗೇಟ್ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ ಅಂತ್ಯ ಇಲ್ಲವೇ ಏಪ್ರಿಲ್ ಮೊದಲ ವಾರದಲ್ಲಿ ನೆರವೇರಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಶುಕ್ರವಾರ ನೂತನ ರೈಲ್ವೆ ನಿಲ್ದಾಣ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೊದಲ ಹಂತದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಕಾಮಗಾರಿ ಶೇ. 80ಕ್ಕಿಂತಲೂ ಹೆಚ್ಚು ಮುಗಿದಿದೆ. ಮಾ. …
Read More »ಬಜೆಟ್ ಪೂರ್ವಭಾವಿ ಸಭೆಗಳು ಮುಕ್ತಾಯ: ಸಿಎಂ ಯಡಿಯೂರಪ್ಪ
ಬೆಂಗಳೂರು, ಫೆ. 19: ಬರುವ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಬಜೆಟ್ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಗಳು ಮುಗಿದಿವೆ ಎಂದು ಅವರು ಹೇಳಿದ್ದಾರೆ. ಗೃಹ ಇಲಾಖೆ ಸೇರಿದಂತೆ ಇನ್ನೆರಡು ಇಲಾಖೆಗಳು ಬಾಕಿ ಇವೆ. ಇನ್ನು ಅರ್ಧ ದಿನ ಸಭೆ ಮಾಡಿದರೆ ಬಜೆಟ್ ಪೂರ್ವ ತಯಾರಿ ಮುಗಿಯುತ್ತದೆ. ಇದಾದ ನಂತರ ಬಜೆಟ್ …
Read More »ಜುಲೈ 7, 8ರಂದು ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು, ಫೆ. 20: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ವೇಳಾಪಟ್ಟಿ ಹೀಗಿದೆ: * 07.07. 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವಶಾಸ್ತ್ರ * 07.07. 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ * 08.07. 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತಶಾಸ್ತ್ರ * …
Read More »