ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ (ಬುಧವಾರ ಮಾ .31 ) ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ …
Read More »ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಅಂಗಳಕ್ಕೆ ಒಯ್ಯವುದು ಸರಿಯಲ್ಲ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಮಾತನಾಡಿ, ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಶಿಸ್ತಿನ ಉಲ್ಲಂಘನೆಯಾಗಬಾರದು ಎಂದು ತಿಳಿಸಿದರು. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಿದೆ. ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ …
Read More »CD ಕೇಸ್: ನನ್ನ ಸೋದರಿ ಮೇಲೆ ಡಿ.ಕೆ. ಶಿವಕುಮಾರ್ ಒತ್ತಡ ಇದೆ, ನಮ್ಮ ಬಳಿ 9 ಸಾಕ್ಷಿಗಳಿವೆ- ಸಂತ್ರಸ್ತೆಯ ಸಹೋದರ
ವಿಜಯಪುರ: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಸಹೋದರ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ನನ್ನ ಸಹೋದರಿ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಒತ್ತಡ ಇದೆ ಎಂದು ಅವರು ಆರೋಪಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಪ್ರೂಫ್ ಸಮೇತ ಹೇಳ್ತಿದ್ದೇನೆ.. ಪ್ರಕರಣದ ತನಿಖೆಯಾಗಲಿ, ಎಲ್ಲವೂ ಹೊರ ಬರುತ್ತೆ. ಸತ್ಯ ಮುಚ್ಚಲು ಆಗಲ್ಲ. ಇಂದಿಲ್ಲ ನಾಳೆ ಡಿ.ಕೆ. ಶಿವಕುಮಾರ್ ಹೆಸರು ಹೊರಗೆ ಬಂದೇ ಬರುತ್ತೆ. ನಾವು ಎಲ್ಲ ಸಾಕ್ಷಿಗಳನ್ನ …
Read More »ಹೋಟೆಲ್ ಉದ್ಯಮದಲ್ಲಿ ನಷ್ಟ ; ಆತ್ಮಹತ್ಯೆಗೆ ಶರಣಾದ ಮಾಲೀಕ
ವಿಜಯಪುರ: ಹೋಟೆಲ್ ಉದ್ಯಮದಲ್ಲಿ ನಷ್ಟ ಅನುಭವಿಸಿದ ಕಾರಣಕ್ಕೆ ಹೋಟೆಲ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಗಣೇಶ್ (೪೦) ಎಂದು ಗುರುತಿಸಲಾಗಿದ್ದು ಮಂಗಳೂರು ಮೂಲದವರಾಗಿರುವ ಇವರು ಇಂಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. 30 ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದ ಇವರು ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ಮತ್ತು ಲಾಡ್ಜಿಂಗ್ ಆರಂಭಿಸಿದ್ದರು. ಕೋವಿಡ್ ಕಾರಣದಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದರಿಂದ ಗಣೇಶ್ ಆರ್ಥಿಕ ಸಂಕಷ್ಟದಲ್ಲಿದ್ದರು ಎನ್ನಲಾಗಿದೆ. ಹೋಟೆಲ್ ನಡೆಸಲು ಪಡೆದ …
Read More »ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!
ಬೆಳಗಾವಿ/ರಾಯಚೂರು: ಲೋಕಸಭಾ ಚುನಾವಣೆಗೆ ಬೆಳಗಾವಿ ಕಾಂಗ್ರೆಸ್ಸಿನಲ್ಲಿ ಈಗ ಒಗ್ಗಟ್ಟಿನ ಪ್ರದರ್ಶನ ಆಗ್ತಿದೆ. ಕಳೆದ ಬಾರಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ವೈಮನಸ್ಸು ಹೊಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಈಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ಹೊತ್ತು ಸಮಾಲೋಚನೆ ಮಾಡಿದ್ದಾರೆ. ಬಳಿಕ ಸತೀಶ್ ಜಾರಕಿಹೊಳಿ ಪರ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು. ಪ್ರಚಾರ ಭಾಷಣದ ವೇಳೆಯೂ ಸತೀಶ್ ಜಾರಕಿಹೊಳಿಯರನ್ನೂ …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ : 23 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಸೇರಿದಂತೆ ಒಟ್ಟು 23 ಜನರು ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮ ದಿನವಾದ ಮಂಗಳವಾರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಸೇರಿದಂತೆ 15 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಳೆ ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಪ ಚುನಾವಣೆಗೆ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಮುಕ್ತಾಯವಾದ ನಂತರ ಒಟ್ಟು 23 ಮಂದಿ 33 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕೊನೆಯ ದಿನವಾದ ಮಂಗಳವಾರ …
Read More »ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ಪೋರ್ಟ್ನ ಟ್ಯಾಕ್ಸಿ …
Read More »ಬೆಳಗಾವಿಗೆ ಬನ್ನಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ- ಜಾರಕಿಹೊಳಿಗೆ ಸಿಎಂ ಬುಲಾವ್
ಬೆಳಗಾವಿ: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದುರುದ್ದೇಶಪೂರಿತ ಆರೋಪ ಮಾಡಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಬೇಕೆಂದು ಅವರಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲಾಗುತ್ತಿದ್ದು, ಎಸ್‍ಐಟಿ ಸಮರ್ಪಕವಾಗಿ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಅನಗತ್ಯ, ರಾಜಕೀಯ ದುರುದ್ದೇಶಪೂರಿತ ಆರೋಪಗಳನ್ನು ಮಾಡುತ್ತಿದ್ದಾರೆ. …
Read More »ಬಸವಕಲ್ಯಾಣದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ
ಕಲಬುರಗಿ: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಹುನ್ನಾರವಾಗಿದೆ. ಅಭ್ಯರ್ಥಿ ವಿಷಯದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಅಂತಾ ಹೇಳಿದ್ದೆ. ಅದು ಇದೀಗ ನಡೆಯುತ್ತಿದೆ. ಎಸ್‌ಐಟಿ ಯಿಂದ ಸತ್ಯ ಹೊರಬರಲ್ಲ ಅಂತಲೂ ಹೇಳಿದ್ದೆ. ಹೈಕೋರ್ಟ್ ಮುಖ್ಯ …
Read More »
Laxmi News 24×7