Breaking News

Uncategorized

ಕೊರೊನಾ ಹೆಚ್ಚಳ: ಕೇರಳದಲ್ಲಿ ಮೇ 23ರವರೆಗೆ ಲಾಕ್‌ಡೌನ್ ವಿಸ್ತರಣೆ

ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು. ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ …

Read More »

ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣ; 52 ಮಂದಿ ಬಲಿ

ಮುಂಬೈ: ಒಂದೆಡೆ ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರವಾಗುತ್ತಿದೆ ಇನ್ನೊಂದೆಡೆ, ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದ್ದು, ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರೊಂದಿಗೆ ಈ ರೋಗದಿಂದ 52 ಮಂದಿ ಮೃತಪಟ್ಟಿದ್ದಾರೆಂದು …

Read More »

ಬೆಳಗಾವಿ ನಗರದಲ್ಲಿ  ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿ

ಬೆಳಗಾವಿ – ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಗುರುವಾರ (ಮೇ 13) ಬೆಳಗಾವಿ ನಗರದಲ್ಲಿ   ಪತ್ರಿಕಾಗೋಷ್ಠಿ ನಡೆಸಿದರು. ಅದರ ಪ್ರಮುಖಾಂಶಗಳು ಇಲ್ಲಿವೆ- * ನಗರ ಮತ್ತು ಗ್ರಾಮಗಳಲ್ಲಿ ಸ್ಮಶಾನ ಜಾಗ ಒದಗಿಸಲು ತಕ್ಷಣವೇ ಕ್ರಮ‌ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ. ತಹಶೀಲ್ದಾರರ ಮೂಲಕ ತ್ವರಿತ ಕ್ರಮಕ್ಕೆ ನಿರ್ದೇಶನ. * ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣ ಆರಂಭಿಸಲು ಡಿ.ಎಚ್.ಓ. ಅವರಿಗೆ ಸೂಚನೆ. * ಜನಪ್ರತಿನಿಧಿಗಳ …

Read More »

ಸುಮಾರು 50 ಲಕ್ಷ ರೂಪಾಯಿಗಳಲ್ಲಿ 60 ಬೆಡ್ ಗಳ ಉಚಿತ ಕೋವಿಡ್ ಕೇರ್ ಸೆಂಟರ್

ಬೆಳಗಾವಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ತಿಳಿಸಿದರು. ಕೊರೊನಾ ಮಹಾಮಾರಿಯಿಂದ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ …

Read More »

ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ

ಹೊಸದಿಲ್ಲಿ: ಟೀಮ್‌ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್‌ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿದ್ದಾರೆ. ಚೋಪ್ರಾ ತಂಡ: ಶಿಖರ್‌ ಧವನ್‌ (ನಾಯಕ), ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ …

Read More »

She for Society: ಕೊರೋನಾ ವಾರಿಯರ್ಸ್ ಆದ ಬೆಂಗಳೂರಿನ ಮಹಿಳಾ ಬೈಕರ್ಸ್; ಸೋಂಕಿತರಿಗೆ ಉಚಿತ ಆಂಬುಲೆನ್ಸ್ ಸೇವೆ…

ಕೊರೋನಾ ವಿರುದ್ಧದ ಹೋರಾಟಕ್ಕೆ ಹಲವಾರು ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಅವುಗಳಲ್ಲಿ ಬೆಂಗಳೂರಿನ ಮಹಿಳಾ ಬೈಕರ್‌ಗಳ ತಂಡ ಕೂಡ ಒಂದು. ಹೌದು, ಕಳೆದ ಒಂದು ವಾರದಿಂದ ಉಚಿತ ಆಂಬುಲೆನ್ಸ್ ಸೇವೆ ನೀಡುತ್ತಿರುವ ಈ ಲೇಡಿ ಬೈಕರ್ಸ್ ಗ್ಯಾಂಗ್ ಎಲ್ಲರಿಗೂ ಮಾದರಿಯಾಗಿದೆ. ‘ಶೀ ಫಾರ್ ಸೊಸೈಟಿ’ ಸೈನಿಕರ ಹಾಗೂ ಸೈನಿಕರ ಕುಟುಂಬಗಳಿಗೆ ನೆರವಾಗಲು ಕೆಲ ವರ್ಷಗಳ ಹಿಂದೆ ಪ್ರಾರಂಭವಾದ ತಂಡ. ಹರ್ಷಿಣಿ ವೆಂಕಟೇಶ್ ಸಾರಥ್ಯದಲ್ಲಿ ಹತ್ತು ಜನರ ಮಹಿಳಾ ಬೈಕರ್‌ಗಳು ಸೇರಿ …

Read More »

ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟ ಸ್ಥಗಿತ

ಪಣಜಿ, : ಗೋವಾ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.ಗೋವಾದಲ್ಲಿರುವ ಏಕಮಾತ್ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಾಬೊಲಿಮ್‌ನಲ್ಲಿ ಸೆಪ್ಟೆಂಬರ್ ವರೆಗೆ ರಾತ್ರಿ ಹೊತ್ತು ವಿಮಾನ ಸಂಚಾರ ನಿಷೇಧಿಸಲಾಗಿದೆ. ಟಾಟಾ ಪವರ್ ಎಸ್‌ಡಿ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ, ಸಂಜೆಯ ಸಮಯದಲ್ಲಿ ಕಾಮಗಾರಿಯನ್ನು ನಡೆಸುತ್ತಿದೆ. ರಾತ್ರಿ ಹೊತ್ತು ವಿಮಾನ ಹಾರಾಟ ನಿಷೇಧಿಸುವುದರಿಂದ ನಾಗರಿಕ ವಿಮಾನ ಕಾರ್ಯಾಚರಣೆಗೆ ಅಷ್ಟೊಂದು ತೊಂದರೆಯಾಗುವುದಿಲ್ಲ ಎಂದು ಗೋವಾ ಏರ್‌ಪೋರ್ಟ್ ನಿರ್ದೇಶಕ ಗಗನ್ ಮಲಿಕ್ ಹೇಳಿದ್ದಾರೆ. ನವೀಕರಣ ನಡೆಯುತ್ತಿರುವ …

Read More »

ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ

ವಿಜಯಪುರ: ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರು ಈ ಹಿಂದೆ ಯಾವ ಮಹಾರಾಜರು ಮಾಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ‌. …

Read More »

ಇಂದಿರಾ ಕ್ಯಾಂಟೀನ್’ನಲ್ಲಿ ‘ಉಚಿತ ಊಟ’ ಕೊಡ್ತಾರೆ ಅಂತ ಹೋದವರಿಗೆ ಕಾದಿತ್ತು ಶಾಕ್ : ‘ಕಟ್ಟಿಕೊಟ್ಟ ಪೊಟ್ಟಣ’ದಲ್ಲಿ ಇದ್ದ ಊಟ ಎಷ್ಟು ಗೊತ್ತಾ.?

ಬೆಂಗಳೂರು : ಇಂದಿನಿಂದ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಉಚಿತ ಊಟದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಬೆಳಿಗ್ಗೆ ತಿಂಡಿಗಾಗಿ ಇಂದಿರಾ ಕ್ಯಾಂಟೀನ್ ಮುಂದೆ ನೂರಾರು ಜನರು ಕ್ಯೂ ಕೂಡ ನಿಂತು ಇಂದಿರಾ ಕ್ಯಾಂಟೀನ್ ನೀಡುವಂತ ಆಹಾರದ ಪೊಟ್ಟಣವನ್ನು ಪಡೆದು, ಖುಷಿಯಿಂದ ತೆರಳಿ, ಓಪನ್ ಮಾಡಿದ ಅನೇಕರಿಗೆ, ಶಾಕ್ ಕಾದಿತ್ತು. ಅದೇನ್ ಅಂತ ಮುಂದೆ ಓದಿ.. ನಗರದಾಧ್ಯಂತ …

Read More »

ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ

ಮಂಗಳೂರು: ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಹಬ್ಬ ಆಚರಿಸುವಂತೆ ಉಳ್ಳಾಲ ಖಾಜಿ ಸೈಯದ್​ ಕೂರತ್ ತಂಗಲ್ ಘೋಷಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು ರಂಜಾನ್ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಕೊವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕಾರಣ ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸಬೇಕು. ಅತ್ಯಂತ ಸರಳವಾಗಿ ಆಚರಿಸಬೇಕು. ಬಡವರಿಗೆ ಹೆಚ್ಚಿನ ದಾನ ನೀಡಬೇಕು …

Read More »