ಬೆಂಗಳೂರು: ತೈಲ ದರ ಇಳಿಕೆ, ಇ-ವೇ ಬಿಲ್ ನಿಯಮಾವಳಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮತ್ತು ಟ್ರಕ್ ಸೇರಿದಂತೆ ಸರಕು ಸಾಗಾಣಿಕೆ ವಾಹನ ಮಾಲೀಕರು ದೇಶವ್ಯಾಪಿ ಶುಕ್ರವಾರ ಹಮ್ಮಿಕೊಂಡಿದ್ದ ಮುಷ್ಕರ ಬೆಂಬಲಿಸಿ ನಗರದಲ್ಲೂ ಲಾರಿ ಹಾಗೂ ಟ್ರಕ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು. ಬೆಂಗಳೂರು-ತುಮಕೂರು ಹೆದ್ದಾರಿಯ ಮಾದನಾಯಕನಹಳ್ಳಿ ನೈಸ್ ರಸ್ತೆ ಜಂಕ್ಷನ್‍ನಲ್ಲಿ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘಗಳ ಒಕ್ಕೂಟದ ವತಿಯಿಂದ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಯಿತು. …
Read More »ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ
ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …
Read More »ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ
ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …
Read More »ಮುಷ್ಕರ ಕೈಬಿಡಿ; ಸಚಿವ ಕೆ.ಎಸ್.ಈಶ್ವರಪ್ಪ ಮನವಿ
ಬೆಂಗಳೂರು: “ಡೀಸೆಲ್ ಬೆಲೆ ಇಳಿಕೆಗೆ 6 ತಿಂಗಳಿಂದ ಮನವಿ ಮಾಡುತ್ತಿದ್ದೇವೆ. ಆದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಡೀಸೆಲ್ ಬೆಲೆಯನ್ನು ಏಕೆ ಇಳಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ. ಇಂದು ನೈಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ,” ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮಾಲೀಕರ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ಈ ಮುನ್ನ ಹೇಳಿಕೆ ನೀಡಿದ ರಾಜ್ಯ ಲಾರಿ ಮಾಲೀಕರ …
Read More »ಸಿದ್ದರಾಮಯ್ಯನವರಿಗೆ ತಲೆ ಸರಿ ಇಲ್ಲ:ಈಶ್ವರಪ್ಪ ಟಾಂಗ್
ಚಿಕ್ಕೋಡಿ : ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೂ ಅಯೋಧ್ಯೆಯ ರಾಮ ಮಂದಿರ ವಿವಾದಿತ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ …
Read More »ಮೀನುಗಾರರ ಹೋರಾಟಕ್ಕೆ ಬೆಲೆ ಇಲ್ವಾ?
ಕಾರವಾರ: ಇತ್ತೀಚಿಗೆ ಕೇಂದ್ರ ಸರಕಾರದ ಖಾಸಗೀಕರಣ ನೀತಿ ವಿರುದ್ದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೆ ಎಲ್ಲವೂ ಗೊತ್ತು ಗೊತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೀನುಗಾರಿಕೆಗೆ ತೊಂದರೆ ಆಗುವ ಹಾಗೆ ಖಾಸಗಿ ಕಂಪನಿಯವರು ಪೋರ್ಟ್ ನಿರ್ಮಾಣ ಮಾಡಲು ಹೊರಟಿದ್ದು ಮೀನುಗಾರರ ಆಕ್ರೋಶದ ಕಟ್ಟೆ ಒಡೆದಿದ್ದು ಮೀನುಗಾರರ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ. ಹೊನ್ನಾವರದ ಕಾಸರಕೋಡಿನಲ್ಲಿ ಎಚ್.ಪಿ.ಪಿ.ಎಲ್ ಖಾಸಗಿ ಕಂಪನಿಯವರು ವಾಣಿಜ್ಯ ಬಂದರು ನಿರ್ಮಾಣ ಮಾಡಲು ಹೊರಟಿದ್ದಾರೆ. ಈಗಾಗಲೇ ಕೇಂದ್ರ ಸರಕಾರದ …
Read More »ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕೆಲವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೆಚ್ಛವನ್ನು ಭರಿಸುವ ಸಾಮರ್ಥ್ಯವಿರಲಿಲ್ಲ. ಹಾಗಾಗಿ ಅವರಿಗೆಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿಸಿ, ಅವರವರ ಬ್ಯಾಂಕಿನ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಗುರುವಾರ ಬೆಳಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಸಂಬಂಧಿಸಿದವರಿಗೆ …
Read More »ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ
ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …
Read More »ಭಾರತೀಯ ರೈಲ್ವೆಯಿಂದ ಹೊಸ ಸೇವೆ ಆರಂಭ: ಪ್ರಯಾಣಿಕರಿಗೆ ʼಹೈಟೆಕ್ ಅನುಭವʼ ನೀಡಲು ʼವಿಸ್ಟಾಡೋಮ್ ಬೋಗಿʼಗಳ ಪರಿಚಯ
ನವದೆಹಲಿ: ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಪ್ರಯಾಣದ ಅನುಭವವನ್ನ ಸ್ಮರಣೀಯ ಮತ್ತು ಆರಾಮದಾಯಕ ಆಗಿಸೋಕೆ ಕಾಲಕಾಲಕ್ಕೆ ಹೊಸ ಸೌಲಭ್ಯಗಳನ್ನ ತರುತ್ತಿದೆ. ಸಧ್ಯ ರೈಲ್ವೇ ವಿಸ್ಟಾಡೋಮ್ ಬೋಗಿಗಳನ್ನ ಪರಿಚಯಿಸಿದ್ದು, ಇದು ಯುರೋಪಿಯನ್ ಶೈಲಿಯಲ್ಲಿ ತಯಾರಾಗಿದೆ. ಇದರಲ್ಲಿ ಪ್ರಯಾಣಿಕರು ಆರಾಮದಾಯಕವಷ್ಟೇ ಅಲ್ಲ ಹೈಟೆಕ್ ಪ್ರಯಾಣವನ್ನೂ ಆನಂದಿಸ್ಬೋದು. ಹೊಸ ವಿಸ್ಟಾಡೊಮ್ʼನ್ನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ನಿರ್ಮಿಸಿದ್ದು, ವಿಸ್ಟಾಡೊಮ್ ಪ್ರವಾಸಿ ತರಬೇತುದಾರರು ಯುರೋಪಿಯನ್ ಶೈಲಿಯ ತರಬೇತುದಾರರಾಗಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ತಾಂತ್ರಿಕವಾಗಿ ಸುಧಾರಿತ ಸೌಲಭ್ಯಗಳನ್ನ …
Read More »