Breaking News

Uncategorized

ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ : ಅಹಿಂದ ಸಮಾವೇಶಕ್ಕೆ ರಾಹುಲ್‌ ಒಪ್ಪಿಗೆ?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಮುದಾಯವಾರು ಸಮಾವೇಶಗಳನ್ನು ಆಯೋಜಿಸುವ ಸಿದ್ದರಾಮಯ್ಯ ಪ್ರಸ್ತಾವಕ್ಕೆ ರಾಹುಲ್‌ ಗಾಂಧಿ ಹಸುರು ನಿಶಾನೆ ತೋರಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರ ಸಹಿತ ರಾಜ್ಯದ ಎಲ್ಲ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಮಾವೇಶಗಳು ಪಕ್ಷಕ್ಕೆ ಪರ್ಯಾಯ ಎಂಬ ಸಂದೇಶ ರವಾನೆಯಾಗಬಾರದು ಎಂದು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಮುದಾಯಗಳ ನೋವಿಗೆ, ಸಮಸ್ಯೆಗಳಿಗೆ ಧ್ವನಿಯಾಗಿ ಸಮಾವೇಶ ಆಯೋಜಿಸಲು ಅಥವಾ ಆಯೋಜನೆಯಾಗುವ ಸಮಾವೇಶಗಳಲ್ಲಿ …

Read More »

ಕನಸಿನಲ್ಲೂ ಬಿಜೆಪಿ ಹೆಸರು ಕೇಳಿದರೆ ಜನರು ಬೆವರುವಂತಾಗಿದೆ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ – ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೇಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಎಲ್ಲಿದೆ ಬಿಜೆಪಿಯ ಅಚ್ಛೇ ದಿನ್ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೋನಾದಿಂದ ತತ್ತರಿಸಿದ್ದ ಜನರಿಗೆ ಈಗ ಬೆಲೆ ಏರಿಕೆಯ ಬರೆ ಬಿದ್ದಿದೆ. ಜನಸಾಮಾನ್ಯರ ಗೋಳನ್ನು ಕೇಳುವವರಿಲ್ಲ ಎಂದು ಕಿಡಿಕಾರಿದ್ದಾರೆ. ಜನರು ಕೊರೋನಾದಿಂದಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಆದಾಯವಿಲ್ಲದೆ ಹೊತ್ತಿನ ಕೂಳಿಗೆ ಪರದಾಡುತ್ತಿದ್ದಾರೆ. …

Read More »

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.   ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು …

Read More »

ಏರುತ್ತಿದೆ ಕೊರೊನಾ ಪ್ರಕರಣ; ಮುಂಬೈನಲ್ಲಿ ಮತ್ತೊಂದು ಲಾಕ್ ಡೌನ್?

ಮುಂಬೈ, ಫೆಬ್ರುವರಿ 16: ಮುಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಕುರಿತು ಚರ್ಚೆ ನಡೆದಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೀಗೇ ಹೆಚ್ಚುತ್ತಿದ್ದರೆ, ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಬಹುದು ಎಂದು ಎರಡು ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಬೃಹತ್ ಮುಂಬೈ ಮುನಿಸಿಪಾಲ್ ಕಾರ್ಪೊರೇಷನ್ ಮೇಯರ್ ಕಿಶೋರಿ ಪೆಡ್ನೇಕರ್, “ಜನರು …

Read More »

ಮೀಸಲಾತಿ ಹೋರಾಟಗಳು ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು: ಕುಮಾರಸ್ವಾಮಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮೀಸಲಾತಿ ಬೇಡಿಕೆ ಹೋರಾಟಗಳು ಭವಿಷ್ಯದಲ್ಲಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಸಿದರು. ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ. ಅಂಬೇಡ್ಕರ್ ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು. ಇಂದು ಸರ್ಕಾರದ ಸಚಿವರು, ಶಾಸಕರೇ ತಮ್ಮ ಜಾತಿಗಳ ಪರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಂಪುಟ ಸಭೆಯಲ್ಲೇ ನಿರ್ಧರಿಸಬಹುದಾದ ವಿಷಯವನ್ನು ಬೀದಿಗೆ …

Read More »

‘ರಾಬರ್ಟ್’ ಸಿನಿಮಾದ ಟ್ರೈಲರ್ ಔಟ್..!

ಸಾರಥಿ, ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ಎಂದೆಲ್ಲಾ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಲ್ಪಡುವ ದರ್ಶನ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬದ ವಿಶೇಷವಾಗಿ ಇಂದು ‘ರಾಬರ್ಟ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆಯಾಗಿ 20 ನಿಮಿಷಗಳ ಅವಧಿಯಲ್ಲಿ ಸುಮಾರು 3.50 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 2:20 ನಿಮಿಷ ಅವಧಿಯ ಟ್ರೇಲರ್​​​ “ನನ್ನನ್ನು ಸಂಹಾರ ಮಾಡ್ತೀನಿ ಅಂತ ಬರೋನು ನನಗಿಂತ ದೊಡ್ಡ ಕ್ರಿಮಿನಲ್ ಆಗಿರಬೇಕು” ಎಂಬ ಧ್ವನಿಯಿಂದ …

Read More »

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ..!

ಬೆಂಗಳೂರು: 2021ನೇ ಜೂನ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು. ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಇವರ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಅದರ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ನಿಯಮವನ್ನು ತಿಳಿಸಲಾಗಿದೆ.

Read More »

ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್!

ಬೆಂಗಳೂರು: ಬೆಂಗಳೂರು ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವ ಮಂದಿಯ ವಿರುದ್ದ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್‌ ಪಂತ್‌ ಅವರು ಅವರು ಆದೇಶಿಸಿದ್ದಾರೆ. ಬೆಂಗಳೂರು ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವ ಮಂದಿಯಿಂದ ಮಂದಿಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು, ಇದರಿಂದ ತೊಂದರೆ ಉಂಟಾಗುತ್ತಿದೆ ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅನೇಕ ಮಂದಿ ಪೊಲೀಸರಿಗೆ ಸೂಚನೆ ನೀಡಿದ್ದರು. ಟ್ರಾಫಿಕ್ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಅಯಾ ವ್ಯಾಪ್ತಿಯ ಟ್ರಾಫಿಕ್‌ …

Read More »

‘ನೀವೇ ಸಿಎಂ ಆದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ’ : ಸಚಿವ ಕತ್ತಿ ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು : ವಿಲಾಸಿ ವಸ್ತು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇಂದು ಸಂಜೆ ( ಫೆ.15 ಸೋಮವಾರ) ಟ್ವಿಟರ್ ನಲ್ಲಿ ಉಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಉಮೇಶ್ ಕತ್ತಿಯವರೇ, ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ. ಈಗ ಕಷ್ಟಪಟ್ಟು …

Read More »

ಅತಿ ದೊಡ್ಡ ಮೇಕ್ ಇನ್ ಇಂಡಿಯಾ ಲಾಂಚನ ಸಿಎಂ ನಿವಾಸದ ಎದುರು

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸ ಕಾವೇರಿ ಮುಂಭಾಗ ದೇಶದ ಅತಿ ದೊಡ್ಡ ಮೇಕ್ ಇನ್ ಇಂಡಿಯಾ ಲಾಂಚನ ನಿರ್ಮಾಣ ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಸುಮಾರು 50 ಲಕ್ಷ ವೆಚ್ಚದಲ್ಲಿ ಈ ಲಾಂಛನ ನಿರ್ಮಾಣವಾಗಲಿದ್ದು, ಲಾಂಛನ ಇಡಲು ಲ್ಯಾಂಡ್ ಸ್ಕೇಪ್ ಕೂಡ ಸಿದ್ಧವಾಗಲಿದೆ. ಘಾಜಿಯಾಬಾದ್ ನಲ್ಲಿ ತಯಾರಾಗುವ ಈ ಲಾಂಛನ ಬೆಂಗಳೂರಿಗೆ ಆಗಮಿಸಲಿದೆ. 1460 ಕೆ.ಜಿ ತೂಕದ ಬೃಹತ್ ಲಾಂಛನ ಇದಾಗಿದ್ದು, 23 ಅಡಿ ಉದ್ದ, 10 ಅಡಿ ಎತ್ತರ, …

Read More »