ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …
Read More »ಅಚ್ಛೇದಿನ್? ನಳೀನ್ ಕುಮಾರ ಕಟೀಲು ಎಲ್ಲಿ ಅಡಗಿಕೊಂಡಿದ್ದಾರೆ?: ಲಕ್ಷ್ಮಿ ಹೆಬ್ಬಾಳಕರ್
ಕೊರೋನಾ ನಿಯಂತ್ರಣ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಸಂಪೂರ್ಣ ವಿಫಲವಾಗಿವೆ. ಇಡೀ ದೇಶದಲ್ಲಿ ಬೀದಿ ಬೀದಿಯಲ್ಲಿ ಹೆಣ ಸುಡುವಂತಾಗಿದೆ. ಎಲ್ಲಿ ಹೋಯಿತು ನಿಮ್ಮ ಅಚ್ಛೇ ದಿನ್? ನಮಗೆ ಅಚ್ಛೇ ದಿನ್ ಬೇಡ. 2013ರಲ್ಲಿದ್ದಂತಹ ದಿನಗಳೇ ಇದ್ದರೆ ಸಾಕು ಎಂದು ರಾಷ್ಟ್ರದ ಜನರು ಕೈ ಮುಗಿದು ಬೇಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ …
Read More »ಎಲ್ಲಾ ತಾಯಂದಿರಿಗೆ ವಿಶ್ವ ತಾಯಂದಿರ ದಿನದ ಶುಭಾಶಯಗಳು.
ಅಮ್ಮ ಎಂಬ ಪದ ಮಗು ತನ್ನ ಮೊದಲ ತೊದಲು ನುಡಿಯಲ್ಲೇ ಹೇಳುವ ಪದ. ಏನು ಅರಿಯದ ಸಮಯದಲ್ಲಿ ಒಡಲೊಳಗೆ ಬೆಚ್ಚಗೆ ಇರಿಸಿ ಕಾಪಾಡಿದ ಅಮ್ಮ ಇನ್ನು ಪ್ರಪಂಚಕ್ಕೆ ಲಗ್ಗೆಯಿಟ್ಟ ಮೇಲೆ ಪ್ರತಿ ಹೆಜ್ಜೆಯ ಜೊತೆಯಾದಳು ಅಮ್ಮ. ನಾವು ನಮ್ಮನ್ನು ಅರಿತುಕೊಳ್ಳುವ ಮೊದಲೇ ಅಮ್ಮನನ್ನು ಅವಲಂಬಿಸಿ ಪ್ರತಿ ಅಮ್ಮನ ಭಾವನೆಗಳಿಗೆ ಸ್ಪಂದಿಸಿರುತ್ತೇವೆ. ಜಗತ್ತಲ್ಲಿ ಅಮ್ಮನ ಪ್ರೀತಿ, ತ್ಯಾಗ ಮತ್ತು ವಾತ್ಸಲ್ಯಕ್ಕೆ ಮಿಗಿಲಾದವು ಯಾವುದು ಇಲ್ಲ. ಅವಳ ನಿಷ್ಕಲ್ಮಶದ ಪ್ರೀತಿಗೆ ನಾವು ಪ್ರತಿಯಾಗಿ …
Read More »ಲಾರಿ ಚಾಲನೆ ವೇಳೆ ನಿದ್ರೆ: ಅಪಘಾತದಲ್ಲಿ ಚಾಲಕ ಚಿರನಿದ್ರೆಗೆ
ಪಾಂಡವಪುರ: ಮರಕ್ಕೆ ಲಾರಿ ಡಿಕ್ಕಿ ಹೊಡೆದು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆನ್ನಾಳು ಗ್ರಾಮದ ಗೇಟ್ ಬಳಿ ನಡೆದಿದೆ. ತಮಿಳುನಾಡು ರಾಜ್ಯದ ನಿವಾಸಿ, ಲಾರಿ ಚಾಲಕ ಕರಪಸ್ವಾಮಿ (26) ಮೃತ ವ್ಯಕ್ತಿ. ಕಳೆದ ರಾತ್ರಿ 12 ಗಂಟೆ ಸಮಯದಲ್ಲಿ ನಾಗಮಂಗಲ ಮಾರ್ಗದಿಂದ ತಮಿಳುನಾಡು ರಾಜ್ಯಕ್ಕೆ ಲಾರಿಯಲ್ಲಿ ತೆಂಗಿನ ಚಗರೆಯನ್ನು ತುಂಬಿಕೊಂಡು ತೆರಳುತ್ತಿದ್ದಾಗ ತಾಲ್ಲೂಕಿನ ಕೆನ್ನಾಳು ಗೇಟ್ ಬಳಿ ಚಾಲಕ ಕರಪಸ್ವಾಮಿ ನಿದ್ರೆಗೆ ಜಾರಿದಾಗ ಲಾರಿ ಮರಕ್ಕೆ ಡಿಕ್ಕಿ …
Read More »ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಖ್ಯಾತ ಸರ್ಜನ್ ಅನಿಲ್ ಕುಮಾರ್ ಸಾವು
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಅಬ್ಬರ ಹೆಚ್ಚಾಗುತ್ತಿದ್ದು ಸೋಂಕು ನಿಯಂತ್ರಣಕ್ಕಾಗಿ ಎರಡು ಡೋಸ್ ಲಸಿಕೆ ಪಡೆದಿದ್ದ ಖ್ಯಾತ ಸರ್ಜನ್ ಡಾ. ಅನಿಲ್ ಕುಮಾರ್ ರಾವತ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸರ್ಜನ್ ಅನಿಲ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಸರೋಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಡಾ. ಅನಿಲ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ …
Read More »ತಾಯಿಗಾಗಿ ದೇವಸ್ಥಾನ ನಿರ್ಮಿಸಿದ ಶಾಸಕ ರಾಜೂಗೌಡ
ಯಾದಗಿರಿ: ತಾಯಿ ಭೂಮಿ ಮೇಲಿರುವ ಏಕೈಕ ನಡೆದಾಡುವ ದೈವ. ಜಗತ್ತಿನಲ್ಲಿ ತಾಯಿ ಪ್ರೀತಿ ಮತ್ತು ತ್ಯಾಗಕ್ಕೆ ಯಾರು ಕೂಡ ಸರಿಸಮಾನರಲ್ಲ. ಯಾರು ಎಷ್ಟೇ ಎತ್ತರಕ್ಕೆ ಬೆಳೆದರೂ ತಾಯಿಯ ಮುಂದೆ ಅವರು ಮಕ್ಕಳೇ. ರಾಜಕೀಯದವರು ಕುಟುಂಬಕ್ಕೆ ಸಮಯ ಕೊಡುವುದಿಲ್ಲ ಎಂಬ ಮಾತಿದೆ. ಅಲ್ಲದೇ ಎಷ್ಟೋ ರಾಜಕಾರಣಿಗಳು ಅವರ ತಂದೆ-ತಾಯಿಯರನ್ನು ವಯಸ್ಸಾದ ಬಳಿಕ ಕೈಬಿಟ್ಟ ಪ್ರಕರಣ ನಮ್ಮ ಕಣ್ಣ ಮುಂದಿವೆ. ಇವುಗಳ ಮಧ್ಯೆ ಯಾದಗಿರಿ ಸುರಪುರದ ಶಾಸಕ ರಾಜೂಗೌಡ ಮಾತ್ರ ವಿಭಿನ್ನವಾಗಿದ್ದಾರೆ. ಅವರ …
Read More »ಯಡಿಯೂರಪ್ಪರನ್ನು ಕುರ್ಚಿಯಿಂದ ಇಳಿಸಲು ಸದ್ದಿಲ್ಲದೇ ನಡೆಯುತ್ತಿದೆಯೇ ತಂತ್ರ ?!
ಬೆಂಗಳೂರು:ವಿನಾಶಕಾರಿ ಕೋವಿಡ್ -19 ಎರಡನೇ ತರಂಗದೊಂದಿಗೆ ಕರ್ನಾಟಕವು ಹಿಡಿತ ಸಾಧಿಸುತ್ತಿದ್ದಂತೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸುವಲ್ಲಿ ಬಿಜೆಪಿ ದಾಳ ಉರುಳಿಸಿದೆ ಎಂಬ ಊಹಾಪೋಹಗಳು ಶುಕ್ರವಾರ ಹೆಚ್ಚಾಗಿದ್ದವು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಪುತ್ರ ಬಿಜೆ ವಿಜಯೇಂದ್ರ ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ನವದೆಹಲಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ …
Read More »ಬಿಗ್ ಬಾಸ್ ನಾಳೆಗೆ ಕ್ಲೋಸ್! – ಇದು ಕೊರೊನಾ ಲಾಕ್‍ಡೌನ್ ಎಫೆಕ್ಟ್
ಬೆಂಗಳೂರು: ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪರಮೇಶ್ವರ್ ಗುಂಡ್ಕಲ್ ಹೇಳಿದ್ದೇನು..? ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು …
Read More »ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ: ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ರಾಜ್ಯಕ್ಕೆ ಒಟ್ಟು 40 ಸಾವಿರ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದ್ದರೂ ಬೆಳಗಾವಿ ಜಿಲ್ಲೆಗೆ ಕಳೆದ 3 ದಿನಕ್ಕೆ ಕೇವಲ 400 ನೀಡಲಾಗಿದೆ. ಜಿಲ್ಲೆಯಲ್ಲಿ ಈಗ ಬರುತ್ತಿರುವ ಕೋವಿಡ್ ಸೋಂಕು ಪ್ರಕರಣದ ಪ್ರಮಾಣ ನೋಡಿದರೆ ದಿನಕ್ಕೆ ಕನಿಷ್ಠ …
Read More »ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆಗೆ ಬಂದಿದ್ದ 32 ಜನರಿಗೆ ಕೊರೊನಾ
ಶಿರಸಿ: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಉಪಸ್ಥಿತರಿದ್ದರು ಎನ್ನಲಾದ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು. ತದನಂತರ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಕಳೆದ 2 ದಿನದಿಂದ ಅದೇ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಆದರೆ …
Read More »
Laxmi News 24×7