Breaking News

Uncategorized

ಲೊಂಡಾ ರೈಲು ನಿಲ್ದಾಣದ ಯಾರ್ಡ್’ನಲ್ಲಿ ಕಾಮಗಾರಿ: ರೈಲುಗಳ ಸಂಚಾರ ರದ್ದು

ಬೆಳಗಾವಿ: ಲೊಂಡಾ ರೈಲು ನಿಲ್ದಾಣದ ಯಾರ್ಡ್’ನಲ್ಲಿ  ಹಮ್ಮಿಕೊಂಡಿರುವ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುವುದು ಮತ್ತು ನಿಯಂತ್ರಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ದಿನಾಂಕ 24.07.2026 ರಿಂದ 27.07.2026 ರವರೆಗೆ ರೈಲು ಸಂಖ್ಯೆ 56931 ಮಿರಜ್–ಲೊಂಡಾ ಡೈಲಿ ಪ್ಯಾಸೆಂಜರ್ ರೈಲು ಬೆಳಗಾವಿ ಮತ್ತು ಲೊಂಡಾ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಲೊಂಡಾ ಬದಲಿಗೆ ಬೆಳಗಾವಿಯಲ್ಲಿಯೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ದಿನಾಂಕ 25.07.2026 ರಿಂದ 28.07.2026 …

Read More »

ಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದ ಜನರು ವಾಸವಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಲ್ಲಿನ ಕುಟುಂಬಗಳ ಸಮಸ್ಯೆಗಳು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಮುದಾಯದ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದAತೆ …

Read More »

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌

ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು  ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. ನಗರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ರಾಹುಲ್‌ ಗಾಂಧಿಯವರು ದೇಶದ ಯುವಜನತೆಗೆ ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಇತಿಹಾಸದ ಸಂದೇಶವನ್ನು ತಲುಪಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3 …

Read More »

ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆ

ಬೆಂಗಳೂರು: ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇಂದು ಬಿಡದಿ ಟೌನ್‌ಶಿಪ್‌  ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್‌ಡಿಡಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕೇಳಲಾದ ಪ್ರಶ್ನೆಗೆ, “ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ …

Read More »

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

ರಾಯಚೂರು: ಮಣ್ಣೆತ್ತಿನ ಅಮವಾಸ್ಯೆ  ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದೆ. ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ  ಜನ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಎತ್ತುಗಳನ್ನ ಮಣ್ಣಿನಿಂದ ತಯಾರಿಸಿ ದೇವರ ಜಗಲಿಯಲ್ಲಿಟ್ಟು ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುತ್ತಾರೆ. ಈ ಬಾರಿ ಮಣ್ಣೆತ್ತಿನ ವ್ಯಾಪಾರ ಜೋರಾಗಿದ್ದು, ಜೋಡೆತ್ತಿನ ಬೆಲೆ ಕೂಡ ಹೆಚ್ಚಾಗಿದೆ. 80 ರೂ.ಯಿಂದ 100 ರೂ.ವರೆಗೆ ಮಣ್ಣಿನ ಜೋಡೆತ್ತುಗಳ …

Read More »

ಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹ

ಬೆಂಗಳೂರು: ಬಿಡದಿ ಟೌನ್‌ಶಿಪ್  ಹೋರಾಟಗಾರರ ಮೇಲೆ ಸರ್ಕಾರ ಹಾಕಿರೋ FIR ಕೂಡಲೇ ರದ್ದು ಮಾಡಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಆಗ್ರಹ ಮಾಡಿದ್ದಾರೆ. ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಬಿಡದಿ ಟೌನ್‌ಶಿಪ್ ನೆಪದಲ್ಲಿ ಅಮಾಯಕ ರೈತರ ಮೇಲೆ FIR ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ರೈತರ ಭೂಮಿಗೆ ನುಗ್ಗಿ ಜಂಟಿ …

Read More »

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ

ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ  ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ನಾಟಕವನ್ನು `ಎಐ-ನೇಟಿವ್’  ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ …

Read More »

ಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ

ನವದೆಹಲಿ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ  ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್( ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜಾರ್ಖಂಡ್ ಹೈಕೋರ್ಟ್ ಮೇವು ಹಗರಣದಲ್ಲಿ ಲಾಲೂ ಅವರ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ …

Read More »

50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲು

ಬೆಂಗಳೂರು: ಕಾನೂನು ರಕ್ಷಿಸುವವನೇ ರಾಕ್ಷಸನಾಗಿ ಬದಲಾಗಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ  ಬೆಳಕಿಗೆ ಬಂದಿದೆ. ಉದ್ಯಮಿಯೊಬ್ಬರಿಗೆ 50 ಲಕ್ಷ ರೂ. ಬೇಡಿಕೆಯಿಟ್ಟು ಲೋಕಾಯುಕ್ತ ಟ್ರ‍್ಯಾಪ್‌ಗೆ ಒಳಗಾಗಿ ಸಸ್ಪೆಂಡ್ ಆಗಿದ್ದ ಪಿಎಸ್‌ಐ ಇದೀಗ ಪತ್ನಿ ಮತ್ತು ಮಾವನ ಮೇಲೆಯೇ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪಿಎಸ್‌ಐ ಬೈರಪ್ಪ ವಿರುದ್ಧ ವಕೀಲೆಯಾಗಿರುವ ಪತ್ನಿ ಗಂಭೀರ ಆರೋಪಗಳನ್ನು ಮಾಡಿದ್ದು, ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿಗೆ ದೂರು ನೀಡಲು ಮುಂದಾಗಿದ್ದಾ ಐದು ವರ್ಷದ …

Read More »

ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಡಿಕೆ ಶಿವಕುಮಾರ್‌ ಬಿಡದಿ ಟೌನ್‌ಶಿಪ್‌ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು  ಸ್ಫೋಟಕ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್  ಯೋಜನೆಗೆ ಸಂಬಂಧಿಸಿದಂತೆ ರೈತರ ಮೇಲಿನ ದೌರ್ಜನ್ಯ ಹಾಗೂ ಜೆಎಂಸಿ ಸರ್ವೆ ವಿವಾದ ಈಗ ರಾಜಕೀಯವಾಗಿ ಭಾರೀ ಸ್ಫೋಟಗೊಂಡಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಜೆಪಿ ಭವನದಲ್ಲಿ …

Read More »