ಹೊಸದಿಲ್ಲಿ, ಮೇ 7: ಆರೋಗ್ಯವಂತ ನಾಗರಿಕರು ರಾಜ್ಯದೊಳಗೆ ಪ್ರಯಾಣಿಸಬೇಕಿದ್ದರೆ ಆರ್‌ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಸೂಚನೆಯನ್ನು ಸಂಪೂರ್ಣ ರದ್ದುಗೊಳಿಸಬಹುದಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಹೇಳಿದೆ. ದೇಶದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ತೀವ್ರಗತಿಯಲ್ಲಿ ಹೆಚ್ಚಿರುವುದರಿಂದ ಪ್ರಯೋಗಾಲಯದಲ್ಲಿ ಹೆಚ್ಚಿನ ಒತ್ತಡ ನಿವಾರಿಸುವ ದೃಷ್ಟಿಯಿಂದ ಹೀಗೆ ಮಾಡಬಹುದು ಎಂದು ಐಸಿಎಂಆರ್ ಸಲಹೆ ನೀಡಿದೆ. ಇದರಿಂದ ಅಗತ್ಯದ ಕೆಲಸಗಳಿಗಾಗಿ ರಾಜ್ಯದೊಳಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. ಈ ಮಧ್ಯೆ, ಲಾಕ್‌ಡೌನ್ ಜಾರಿಗೊಳಿಸಿದ …
Read More »ಬಳ್ಳಾರಿ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ, ವ್ಯಕ್ತಿ ಬಂಧನ
ಬಳ್ಳಾರಿ: ನಗರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮ್‌ಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿ, ರೆಮ್‌ಡಿಸಿವಿರ್ ದಂಧೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಅನ್ವಯ ದಾಳಿ ಕಾರ್ಯಾಚರಣೆ ನಡೆಸಿ ಆರು ಡೋಸ್ ರೆಮ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ. ರೆಮ್ ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು. ₹3 …
Read More »ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್
ಬೆಂಗಳೂರು: ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ. ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ …
Read More »ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?
ಬೆಂಗಳೂರು: ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ ಎಂಬುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವಿವರಣೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿಗಳ ಪ್ರಕಾರ ಇವರನ್ನು ಕೆಲವು ದಿನದ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಇವರು ಒಂದು ಸಂಸ್ಥೆಯ ಮೂಲಕ ಬಂದಿರುವ ವ್ಯಕ್ತಿಗಳು. ಕೋವಿಡ್ 19 ವಾರ್ ರೂಂನಲ್ಲಿರುವವರು ಎಲ್ಲ ತಾತ್ಕಾಲಿಕ ಗುತ್ತಿಗೆ ಸಿಬ್ಬಂದಿ …
Read More »ಚಿಂಚೋಳಿ ಆಸ್ಪತ್ರೆಗೆ ಸಚಿವ ಮುರುಗೇಶ ನಿರಾಣಿ ದಿಢೀರ್ ಭೇಟಿ
ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಶುಕ್ರವಾರ ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಪೀಡಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಸೋಂಕಿತರು ಸವಲತ್ತುಗಳಿಂದ ವಂಚಿತರಾಗಬಾರದು. ಅಗತ್ಯವಿರುವುದನ್ನು ಮೊದಲೇ ಸಂಗ್ರಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಸ್ಪತ್ರಗೆ ದಾಖಲಾದವರು ಮತ್ತು ಬಿಡುಗಡೆಯಾದವರ ಸಂಖ್ಯೆ, ಲಭ್ಯವಿರುವ ಔಷಧಿ, ಎಷ್ಟು ಪ್ರಮಾಣದಲ್ಲಿ …
Read More »ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ
ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ. ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು …
Read More »100 ರೂಪಾಯಿ ಗಡಿದಾಟಿದ ಪೆಟ್ರೋಲ್ ಬೆಲೆ!
ನವದೆಹಲಿ:ನಿರೀಕ್ಷೆಯಂತೆ ಐದು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತೈಲ ಬೆಲೆ ಪರಿಷ್ಕರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ್ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಲೀಟರ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಶುಕ್ರವಾರ (ಮೇ 07) ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಬೆಲೆ ಲೀಟರ್ ಗೆ 28ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 31 ಪೈಸೆ …
Read More »ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ. …
Read More »ಸರಕಾರದ ಆರೋಗ್ಯ ಇಲಾಖೆ ಕೊಟ್ಟ ಲೆಕ್ಕ ಸುಳ್ಳು :ಶಿವರಾಮ ಹೆಬ್ಬಾರ್
ಕಾರವಾರ : ಕೋವಿಡ್-೧೯ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ವ್ಯಾಪಾರ-ವಹಿವಾಟಿಗೆ ಈ ಹಿಂದೆ ಮಾಡಲಾಗಿದ್ದ ಬೆಳಿಗ್ಗೆ ೬ ರಿಂದ ೧೨ರ ಸಮಯವನ್ನು ಮತ್ತೆ ಮೇ. ೭ ರಿಂದ ಪ್ರತಿದಿನ ಬೆಳಿಗ್ಗೆ ೬ ರಿಂದ ೧೦ ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ತಿಳಿಸಿದ್ದಾರೆ. ಜೊತೆಗೆ ತಮ್ಮದೇ ಸರಕಾರದ ಆರೋಗ್ಯ ಇಲಾಖೆ ನೀಡಿದ ಒಂದೇ ದಿನ …
Read More »ಮೃತಪಟ್ಟ ಕೋವಿಡ್ ರೋಗಿಯ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋದ ಆಸ್ಪತ್ರೆ
ಸೂರತ್:ಕೋವಿಡ್ ಪಾಸಿಟಿವ್ ರೋಗಿಯ ಶವವನ್ನು ರಸ್ತೆಯಲ್ಲಿ ಬಿಟ್ಟಿದ್ದಕ್ಕಾಗಿ ಸೂರತ್‌ನ ಪಾಂಡೇಸರ ಪ್ರದೇಶದ ಖಾಸಗಿ ಆಸ್ಪತ್ರೆಯ ವಿರುದ್ಧ ದೂರು ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗಿದ್ದು, ಮೃತರು ಒಡಿಶಾ ಮೂಲದವರು ಎಂದು ತಿಳಿದುಬಂದ ನಂತರ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮೃತರು ಪಾಂಡೇಸರದ ಪ್ರಿಯಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಮಗನ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬವು ಒಂದು ಪರೀಕ್ಷೆಗೆ …
Read More »
Laxmi News 24×7