Breaking News

Uncategorized

ನೀರಾವರಿ ಬಗ್ಗೆ ಚರ್ಚೆ……..?

ನವದೆಹಲಿ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌  ; ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಕೇಂದ್ರ ಜಲಶಕ್ತಿ  ಸಚಿವರ ಕಾರ್ಯಾಲಯದಲ್ಲಿ ಈ ಚರ್ಚೆ ನಡೆಯುತ್ತಿದೆ. ..

Read More »

ಇಂಧನ ದರ ಇಳಿಸುವಂತೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹ

ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …

Read More »

ಬ್ರಾಹ್ಮಣರ ಅವಹೇಳನ ಖಂಡನೀಯ: ಸಚಿವ ಹೆಬ್ಬಾರ

ಕಾರವಾರ: ‘ಪೊಗರು ಚಲನಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದು ಅತ್ಯಂತ ಖಂಡನೀಯ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ‘ಚಲನಚಿತ್ರದಲ್ಲಿ ಮಾತ್ರ ಪೊಗರು ತೋರಿಸಲಿ. ಅದರ ಹೊರತಾಗಿ ಬ್ರಾಹ್ಮಣರ ಮೇಲೆ ಅಥವಾ ಬೇರೆ ಯಾವುದೇ ಸಮಾಜದ ಮೇಲೆ ಪೊಗರು ತೋರಿಸುವುದು ಸರಿಯಲ್ಲ. ರಾಜ್ಯದ ಸಚಿವನಾಗಿಯೂ ನಾನು ಈ ರೀತಿಯ ಕೃತ್ಯವನ್ನು ಖಂಡಿಸುತ್ತೇನೆ. ಬ್ರಾಹ್ಮಣರ ಅವಹೇಳನ ಮಾಡುವ ದೃಶ್ಯಗಳನ್ನು ತೆಗೆದು ಹಾಕಿಯೇ ಚಲನಚಿತ್ರವನ್ನು ಬಿಡುಗಡೆ ಮಾಡಬೇಕು’ ಎಂದು ಅವರು ಪ್ರಕಟಣೆಯಲ್ಲಿ ಚಿತ್ರ …

Read More »

ಯಾರೇನು ಮಾಡಲಿಕ್ಕಾಗುತ್ತದೆ? ಅಂದರೆ ರಾಜೀನಾಮೆ ಕೊಟ್ಟು ಹೋಗಿ! ಡಿಕೆ ಶಿವಕುಮಾರ್ಆಕ್ರೋಶ

ಬೆಂಗಳೂರು, ಫೆ. 23: ಚಿಕ್ಕಬಳ್ಳಾಪುರ ಸ್ಪೋಟ ಘಟನೆ ಕುರಿತು ಸಿಎಂ ಯಡಿಯೂರಪ್ಪ ಅವರ, ನಾವು ನೀವು ಏನ್ ಮಾಡೋಕೆ ಆಗುತ್ತೆ ರೀ..? ನಮ್ಮ ಜಾಗದಲ್ಲಿ ನೀವು ಇದ್ದರೆ ನೀವು ಏನ್ ಮಾಡ್ತಿದ್ರಿ ಹೇಳಿ..? ಬೆಳಗಿನ ಜಾವ ಹೋಗಿ ಅದನ್ನೆಲ್ಲಾ ಮಾಡಿ ಅಂತಾ ನಾವು ಅವರಿಗೆ ಹೇಳಿದ್ವಾ..? ಎಂಬ ಮಾತಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಪದೇ ಪದೆ ಇಂತಹ ಘಟನೆಗಳಿಗೆ ಯಾರು ಹೊಣೆ …

Read More »

ಸರ್ಕಾರಿ ನೌಕರರ ವಿರುದ್ಧ ದೂರು ನೀಡುವವರು ತಮ್ಮ ಮಾಹಿತಿ ನೀಡಲೇಬೇಕು

ಬೆಂಗಳೂರು,ಫೆ.24- ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳು ಕೇಳಿಬಂದಲ್ಲಿ, ದೂರು ನೀಡಿದವರ ಹೆಸರು ಮತ್ತು ಪೂರ್ಣ ವಿಳಾಸವನ್ನೊಳಗೊಂಡ ದಾಖಲೆಗಳಿದ್ದರೆ ಮಾತ್ರ ತನಿಖೆ ನಡೆಸಲು ಅನುವಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದಾರೆ. ದೂರು ನೀಡುವ ವ್ಯಕ್ತಿಗಳ ಪೂರ್ಣ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಪೂರಕ ದಾಖಲೆಗಳನ್ನು ಒದಗಿಸಿದ ನಂತರ ತನಿಖೆಗೆ ಮುಂದಾಗಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದ್ದಾರೆ. ಈ ಸಂಬಂಧ …

Read More »

ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್​ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ …

Read More »

ʼವರ್ಕ್‌ ಫ್ರಮ್‌ ಹೋಂʼ ಬಿಟ್ಟು ಕಛೇರಿಗೆ ಹೋಗಲು ಯುವತಿಯ ತಕರಾರುನಾನು ಮನೆಯಲ್ಲಿ ಪೈಜಾಮಾ ಧರಿಸಿ ಕೆಲಸ ಮಾಡೋದ್ರಲ್ಲೇ ಆರಾಮಾಗಿದ್ದೆ. ಇನ್ನು ಜೀನ್ಸ್ ಧರಿಸಬೇಕೆ

ಕಳೆದ ವರ್ಷ ಕೊರೊನಾ ವೈರಸ್ ​ನ್ನು ನಿಯಂತ್ರಣ ಮಾಡಲು ಲಾಕ್​ಡೌನ್​ ಹೇರಿಕೆ ಮಾಡಿದ ಬಳಿಕ ʼವರ್ಕ್​ ಫ್ರಮ್​ ಹೋಂʼಗೆ ಸೂಚನೆ ನೀಡಲಾಗಿತ್ತು. ಇದಾದ ಬಳಿಕ ಸರಿ ಸುಮಾರು ಒಂದು ವರ್ಷಗಳ ಕಾಲ ಅನೇಕ ಮಂದಿ ವರ್ಕಿಂಗ್​ ಫ್ರಮ್ ಹೋಂ ಮೂಲಕವೇ ಆಫೀಸ್​ ಕೆಲಸ ಮಾಡಿದ್ದಾರೆ. ಆದರೆ ಈಗ ಕೊರೊನಾ ವಿರುದ್ಧ ಲಸಿಕೆ ಪ್ರಯೋಗ ಶುರುವಾಗಿದ್ದು, ಅನೇಕ ಕಂಪನಿಗಳು ತಮ್ಮ ಸಿಬ್ಬಂದಿಯನ್ನ ವಾಪಸ್​ ಕರೆಯಿಸಿಕೊಳ್ತಿವೆ, ಆದರೆ ಇಷ್ಟು ದಿನ ಮನೆಯಲ್ಲೇ ಹಾಸಿಗೆಯ …

Read More »

ಅವಧಿ ಮೀರಿದ ಔಷಧ ಮಾರಾಟ : ಇಬ್ಬರ ಬಂಧನ, 4 ಲಕ್ಷ ‌ಮೌಲ್ಯದ ಔಷಧ ವಶ

ವಿಜಯಪುರ : ಅವಧಿ ಮೀರಿದ ಕಾಫ್ ಸಿರಪ್ ಔಷಧಿ ಬಾಟಲಿಯ ದಿನಾಂಕ ತಿದ್ದಿ, ಅಕ್ರಮವಾಗಿ ಮಾರಾಟಕ್ಕೆ ಮುಂದಾದ ಇಬ್ಬರನ್ನು ಬಂಧಿಸಿರುವ ಜಿಲ್ಲೆಯ ಅಪರಾಧ ವಿಭಾಗದ ವಿಶೇಷ ದಳದ ಪೊಲೀಸರು 4 ಲಕ್ಷ ರೂ. ಮೌಲ್ಯದ ಔಷಧಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಪುಲಕೇಶಿ ನಗರದ ನಿರ್ಜನ ಪ್ರದೇಶದಲ್ಲಿ ಅವಧಿ ಮೀರಿದ ಔಷಧಿ ಮಾರಾಟದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಾಟಲ್ ಗಳನ್ನು ಸ್ಯಾನಿಟೈಸರ್ ಬಳಸಿ ಅವಧಿ ಮೀರಿದ ದಿನಾಂಕ ಅಳಿಸಿ …

Read More »

ಬೆಂಗಳೂರಲ್ಲಿ ಅನಾವರಣಗೊಂಡಿದೆ ಹೊಸ ಪಾನ್​ ಪ್ರಪಂಚ

ಊಟ ಆದ್ಮೇಲೆ ತಿನ್ನೋ ಪಾನ್ ಬೀಡಾ ನಿಮಗಿಷ್ಟವಾ?ಅದೆಷ್ಟು ವೆರೈಟಿ ಪಾನ್ ಗಳನ್ನ ಸವಿಯಬಹುದು ಎನ್ನುವ ಅಂದಾಜು ನಿಮಗಿದೆಯಾ? ಪಾನ್ ಅಂದ್ರೆ ಸಾದಾ ಪಾನ್, ಗುಲ್ಕನ್ ಹಾಕಿರೋ ಸ್ವೀಟ್ ಬೀಡಾ, ಜರ್ದಾ ಇಂಥಾ ಒಂದೈದಾರು ವೆರೈಟಿ ಪರಿಚಯ ಇರ್ಬಹುದು.. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 150ಕ್ಕೂ ಹೆಚ್ಚು ವೆರೈಟಿ ಪಾನ್ ಗಳ ದೊಡ್ಡ ಭಂಡಾರವೇ ತೆರೆದಿದೆ… ಯಾವ್ದಪ್ಪಾ ಇದು ಅಂದ್ಕೊತಿದೀರಾ? ಇಲ್ಲಿದೆ ಫುಲ್ ಡೀಟೆಲ್ಸ್…! ಪಿಸ್ತಾ ಪಾನ್, ಹೇಜಲ್ ನಟ್ ಪಾನ್, …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »