ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ಕಷ್ಟಸಾಧ್ಯ. ಒಂದು ವೇಳೆ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಸಿದರೆ ಕೃತಜ್ಞತೆ ಸಲ್ಲಿಸುವುದಾಗಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಾದರೆ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ …
Read More »ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’
ಬೆಂಗಳೂರು: ‘ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಮಹಾರ್ಯಾಲಿ ನಂತರ ಧರಣಿ, ಸತ್ಯಾಗ್ರಹ ಮಾಡಬಾರದು ಎಂದು ನಿರ್ಧಾರವಾಗಿತ್ತು. ಆದರೆ, ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ‘ಸಮಾವೇಶದಲ್ಲಿಯೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ ಗಲಾಟೆ ಆಗುತ್ತಿತ್ತು. ಇದರಿಂದ ಸಮುದಾಯದ ಘನತೆಗೆ ಚ್ಯುತಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಆದರೆ, ಸಮುದಾಯಕ್ಕೆ 2ಎ ಮೀಸಲಾತಿ ಬೇಕು …
Read More »ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್..!
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಿಂದ ಅರುಣಾರನ್ನು ಕೈಬಿಡುವಂತೆ ಆದೇಶ ಹೊರಡಿಸಿದೆ. ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ. ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು. ಇದನ್ನು ಪ್ರಶ್ನಿಸಿ …
Read More »ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು
ದೆಹಲಿ: ‘ಭಾರತಕ್ಕೆ ಅಪಖ್ಯಾತಿ ತರಲು, ರೈತರ ಪ್ರತಿಭಟನೆಯ ನೆರಳಿನಲ್ಲಿ ಶಾಂತಿ ಕದಡುವ ಜಾಗತಿಕ ಸಂಚಿನಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾದ ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ನ್ಯಾಯಾಲಯ ಜಾಮೀನು ನೀಡಿದೆ. ಇನ್ನೋರ್ವ ಆರೋಪಿ ಶಾಂತನು ಮುಲುಕ್ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಾಳೆ (ಫೆಬ್ರವರಿ 24) ನಡೆಯಲಿದೆ. ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್ ಕಾರ್ಮಲ್ ಕಾಲೇಜಿನ …
Read More »ಕುಂದಾ ಬೇಡ, ಗೋಕಾಕ್ ಕರದಂಟು ಬೇಕು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಇದು ಸತ್ಯಕ್ಕೆ ದೂರವಾದ ಸಂಗತಿ. ನಿರಾಣಿ ಅಣ್ಣ ಅಧಿಕಾರದಲ್ಲಿ ಇದ್ದು ಸಿಎಂ ಒತ್ತಡದಿಂದ ಹೇಳಿದ್ದಾರೆ. ಅವರು ಸಹ ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸಿದ್ದರು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ‘ಬಿ’ ಟೀಮ್ ನಿರಾಣಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹೋರಾಟ ಸಮಾಜದ ಕೆಲಸ ಇದು ಪಕ್ಷ ಪರ ವಿರುದ್ಧ ಇರೋ ಹೋರಾಟ …
Read More »ಅವಮಾನ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ ಹಿರಿಯ ನಟ ಜಗ್ಗೇಶ್..!
ಬೆಂಗಳೂರು, ಫೆ.23- ನನ್ನನ್ನು ಹೀಯಾಳಿಸುವ ಮೂಲಕ 40 ವರ್ಷದ ಕಲಾಸೇವೆಯನ್ನು ಅಪಮಾನ ಮಾಡಿದ್ದೀರಾ, ನಾನು ಏನೂ ತಪ್ಪು ಮಾಡಿಲ್ಲ, ಯಾರಿಗೂ ಹೆದರಿ ಓಡಿ ಹೋಗುವುದಿಲ್ಲ. ಚಿತ್ರರಂಗದಲ್ಲಿ ರೌಡಿಸಂ ಅನ್ನು ಪ್ರೋತ್ಸಾಹಿಸುವ ಕೆಲಸ ಬೇಡ ಎಂದು ಹಿರಿಯ ನಟ ನವರಸನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುಮಾರು 14 ನಿಮಿಷ 47 ಸೆಕೆಂಡ್ನ ವಿಡಿಯೋ ಮೂಲಕ ತಮಗಾದ ಅವಮಾನ, ನೋವುಗಳನ್ನು ಹೊರಹಾಕಿದ್ದಾರೆ.ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ …
Read More »ತನ್ನ ಪ್ರಾಣ ಪಣಕ್ಕಿಟ್ಟು ಚಿರತೆಯೊಂದಿಗೆ ಸೆಣಸಾಡಿ ಅಮ್ಮನ ಪ್ರಾಣ ಕಾಪಾಡಿದ ‘ಸಾಹಸಿ ಯುವಕ’
ಹಾಸನ : ಮಲೆನಾಡಿನಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಸಾಹಸಿ ಯುವಕನೊಬ್ಬ ತನ್ನ ಜೀವ ಲೆಕ್ಕಿಸದೇ ಚಿರತೆಯೊಂದಿಗೆ ಸೆಣಸಾಡಿ ತನ್ನ ತಾಯಿಯ ಪ್ರಾಣ ಉಳಿಸಿದ್ದಾನೆ. ಹೌದು, ಹಾಸನ ಜಿಲ್ಲೆಯ ಅರಸೀಕೆರೆಯ ಬೈರಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಲ್ಲಿ ಗಾಯಗೊಂಡ ಮಗ ಹಾಗೂ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ತಾಯಿ ಚಂದ್ರಮ್ಮ ತಮ್ಮ ಜಮೀನಿಗೆ ಹೋಗುತ್ತಿದ್ದರು. ಈ …
Read More »ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕ ಅಂದರ್
ಬೆಂಗಳೂರು : ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕನೋರ್ವ ಕೊನೆಗೂ ಅಂದರ್ ಆಗಿದ್ದಾನೆ. ಹೌದು, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಕಳೆದ 6 ವರ್ಷಗಳಿಂದ ಲ್ಯಾಬ್ ಟೆಕ್ನಿಶಿಯನ್ ಆಗಿರುವ 29 ವರ್ಷದ ಮಾಲತೇಶ್ ಎಂಬುವವನೇ ಈ ಕೆಲಸ ಮಾಡಿದ್ದು.. ಮಾಲತೇಶ್ ಆಸ್ಪತ್ರೆಯ ಆಪರೇಷನ್ ರೂಂ ನಲ್ಲಿ ಮಹಿಳೆ ಬಟ್ಟೆ ಬದಲಾಯಿಸುವ ಸಮಯಕ್ಕಾಗಿ ಕಾಯುತ್ತಿರುತ್ತಿದ್ದನಂತೆ. ಆ …
Read More »ಪ್ರತಿ ಕ್ಷೇತ್ರದಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದೆ: ಸತೀಶ್ ಜಾರಕಿಹೊಳಿ
ಬೆಳಗಾವಿ, : ದೇಶದ ಎಲ್ಲ ಕ್ಷೇತ್ರಗಳಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದ್ದು, ಪ್ರಸ್ತುತ ದಿನದಲ್ಲಿ ಪ್ರಾಮಾಣಿಕರನ್ನು ಪತ್ತೆ ಹಚ್ಚುವುದು ಕಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಅಧಿಕಾರ ನಡೆಸುತ್ತಿರುವ ಆಡಳಿತ ಪಕ್ಷದ ವೈಫಲ್ಯ ಎತ್ತಿ ತೋರಿಸುವ ಬದಲು ಕಾಂಗ್ರೆಸ್ ಪಕ್ಷದ ತಪ್ಪನ್ನೇ ಹುಡುಕುತ್ತಾರೆ. ಹೀಗಾಗಿ, ಕಾಂಗ್ರೆಸ್ ಸಣ್ಣ ತಪ್ಪು ಮಾಡಿದರೂ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಜಾತಿ, …
Read More »ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡ್ತೇನೆ :ಸಿದ್ದರಾಮಯ್ಯ
ಮಂಗಳೂರು: ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ ಮೂರುಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ …
Read More »