ಬಾಗಲಕೋಟೆ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗಡಿಭಾಗದ ಬೆಳಗಾವಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಅವರು ಕಲಾದಗಿಯ ಸಂಘದ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ಮನೆಗೆ ಭೇಟಿ ನೀಡಿ ಗಮನ ಸೆಳೆದರು. ದೇಶದ ಅತ್ಯುನ್ನತ ಝೆಡ್ ಪ್ಲಸ್ (Z+) ಭದ್ರತಾ ಚೌಕಟ್ಟನ್ನು ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ …
Read More »CWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಆದರೆ ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಕಾರಣ ಕುಡಿಯುವ ನೀರಿಗೂ ಆದ್ಯತೆ ನೀಡಬೇಕಾದ ಪರಿಸ್ಥಿತಿ ಇದೆ ಎಂದರು. ಜಿಲ್ಲೆಯ ಎಲ್ಲಾ ಶಾಸಕರು ಈಗಾಗಲೇ ಮುಖ್ಯಮಂತ್ರಿ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. …
Read More »ಮದರಸಾ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಶಾಲೆಗೆ ನುಗ್ಗಿ ದಾಂಧಲೆ
ಬೆಂಗಳೂರು: ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ಪುಂಡರು ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ನಾರಾಯಣಪುರದಲ್ಲಿ ನಡೆದಿದೆ. ಸಾಮರ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ನುಗ್ಗಿದ ಕೆಲವರು, ಕಿಟಕಿ ಗಾಜುಗಳನ್ನು ಒಡೆದು ಒಳನುಗ್ಗೋಕೆ ಪ್ರಯತ್ನಿಸಿದ್ದಾರೆ. ಈ ವೇಳೆ ಒಳಗಿದ್ದ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿ ಖಾರದ ಪುಡಿ ಬೆರಸಿದ ನೀರು ಎರಚಿ ಅವರನ್ನು ಹಿಮ್ಮೆಟ್ಟಿಸೋ ಕೆಲಸ ಮಾಡಿದ್ದಾರೆ. ನೋಡು ನೋಡುತ್ತಿದ್ದಂತೆ ಇಡೀ ಕಾಲೇಜು ರಣರಂಗವಾಗಿ ಮಾರ್ಪಟ್ಟಿದೆ. ಮಸೀ ಅಹಮದ್ ಎಂಬುವವರು 1988ರಲ್ಲಿ ಮದರಸಾಗೆ …
Read More »ತೆಲಂಗಾಣದಲ್ಲಿ 6 ಜನರನ್ನು ಕಗ್ಗೊಲೆ ಮಾಡಿದ್ದ ಪೋಕ್ಸೋ ಆರೋಪಿ ಆತ್ಮಹತ್ಯೆ
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಪತ್ನಿ ಮತ್ತು ಮಕ್ಕಳು, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸೇರಿದಂತೆ 6 ಜನರನ್ನು ಹತ್ಯೆ ಮಾಡಿದ್ದ ಪೋಕ್ಸೋ ಆರೋಪಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜು.10 ರಂದು ಆರೋಪಿ ರಾಜ್‌ಕುಮಾರ್ ತನ್ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಆತನ ಮೇಲೆ ಅತ್ಯಾಚಾರ ಕೇಸ್ ದಾಖಲಿಸಿದ್ದ ಅಪ್ರಾಪ್ತೆ ಹಾಗೂ ಆಕೆಯ ಅಜ್ಜಿ ಮತ್ತು ತಾಯಿಯನ್ನು ಕೊಲೆಗೈದಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಆತನ ಪತ್ತೆಗೆ 12 ತಂಡಗಳನ್ನು ಮಾಡಿ …
Read More »ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಂದಾಯ ಅಧಿಕಾರಿಗಳು ನೀಡಿದ ಅಧಿಕೃತ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿಡದಿ …
Read More »ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಅಗತ್ಯ; ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರತಿಯೊಂದು ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ. ಆದರೆ, ಮೂಲ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ಆರೋಪಗಳಿಗೆ ಸಾಕಷ್ಟು …
Read More »ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಮಂಡಲಹಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಬಳಿಕ ಮಾತನಾಡಿದ ಎಸ್ಪಿ ಶ್ರೀನಿವಾಸ್ ಗೌಡ, ಇಂದು ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ಸರ್ವೆ ಮುಂದುವರಿಸಲು …
Read More »10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ – ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ.
ಬೆಂಗಳೂರು: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲು ಘೋಷಣೆ ಮಾಡಿದಂತೆ ರಾಜ್ಯಾದ್ಯಂತ 10 ಸಾವಿರ ʻಭಾರತ್ ಜೋಡೋ ಯುವ ಸಂಘಗಳʼ ಸ್ಥಾಪನೆಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ಆದೇಶಿಸಿದೆ. ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ 10 ಲಕ್ಷ ರೂ. ನಂತೆ 1,000 ಕೋಟಿ ರೂ. ಅನುದಾನ ನೀಡುವುದಾಗಿಯೂ …
Read More »ಆ.6ರಿಂದ ಮುಂಗಾರು ಅಧಿವೇಶನ; ಮೂರ್ನಾಲ್ಕು ದಿನದಲ್ಲಿ ಹೈಕಮಾಂಡ್ ದೆಹಲಿಗೆ ಕರೆಯಬಹುದು: ಡಿಕೆಶಿಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ (Monsoon Session) ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ (DK Shivakumar) ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Delhi Riots 2020 | ಐಬಿ ಅಧಿಕಾರಿ ಹತ್ಯೆ ಕೇಸಲ್ಲಿ ಆಪ್ ಮಾಜಿ ಕೌನ್ಸಿಲರ್ ತಾಹಿರ್ ಸೇರಿ ಐವರು ದೋಷಿ ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗಿದ್ದು, ಶಾಸಕರಿಗೂ ಅವಕಾಶ ಕೊಡುವ ಬಗ್ಗೆ ಮಾತನಾಡಿದ ಅವರು, ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು. ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗಿದ್ದು, ಶಾಸಕರಿಗೂ ಅವಕಾಶ ಕೊಡುವ ಬಗ್ಗೆ ಮಾತನಾಡಿದ ಅವರು, ತಿರುಪತಿಯಲ್ಲಿ …
Read More »ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಬಾಂಗ್ಲಾದೇಶಿಗರು ಮಂಗಳೂರು ಪೊಲೀಸರ ವಶಕ್ಕೆ
ಮಂಗಳೂರು: ನಗರದ ಉರ್ವಾ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದ ಮೂವರು ಬಾಂಗ್ಲಾದೇಶಿಗರನ್ನುವಶಕ್ಕೆ ಪಡೆದಿದ್ದಾರೆ. ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ರಾಜ್‌ಶಾಹಿ ಜಿಲ್ಲೆಯ ನೂರ್ ಅಮೀನ್, ಮಹಮ್ಮದ್ ಕೌಸರ್ ಹಾಗೂ ಇಮ್ರಾನ್ ಅಲಿ ಬಂಧಿತ ಬಾಂಗ್ಲಾದೇಶಿಗರು. ಇವರು ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಕಳೆದ ಎರಡು ತಿಂಗಳಿಂದ ಮಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂದು …
Read More »
Laxmi News 24×7