ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಫೆ.10ರಂದು ನಡೆದಿದ್ದ ಘಟನೆ ಬಳಿಕ ಫೆ.12ರಂದು ಚಿಕಿತ್ಸೆ ಫಲಿಸದೆ ಪತ್ನಿ ರೇಖಾ ಮೃತಪಟ್ಟಿದ್ದರು. ಇದೀಗ, ಇಂದು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆಯ ಪತಿಯೂ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರೆಲ್ಲರೂ ಜಾತ್ರೆಗೆ ತೆರಳಿದ್ದ ವೇಳೆ ದಂಪತಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ …
Read More »ಟೂಲ್‌ಕಿಟ್ ಹಗರಣ ಬಯಲಾಗುತ್ತಿದ್ದಂತೆಯೇ ಹೆಚ್ಚಾಯ್ತು ‘ಮೋದಿಗೋಬ್ಯಾಕ್’ ಟ್ರೆಂಡ್- ಸಂಕಷ್ಟದಲ್ಲಿ ನಟಿ
ಚೆನ್ನೈ: ಭಾರತದ ವಿರುದ್ಧ ಮಹಾ ಷಡ್ಯಂತ್ರ ರಚಿಸಿರುವ ‘ಟೂಲ್‌ಕಿಟ್’ ಹಗರಣ ಬಯಲಾಗುತ್ತಿದ್ದಂತೆಯೇ, ಇತ್ತ ಮೋದಿಗೋಬ್ಯಾಕ್ ಟ್ರೆಂಡ್ ಮತ್ತೆ ಶುರುವಾಗಿದೆ. ರೈತರ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಭಾರತದ ವಿರುದ್ಧ ಮಹಾ ಸಮರ ಸಾರಿರುವ ಕೆಲವು ಕಿಡಿಗೇಡಿಗಳ ಕೃತ್ಯ ಒಂದೊಂದಾಗಿ ಹೊರಕ್ಕೆ ಬರುತ್ತಿದ್ದಂತೆಯೇ ಇತ್ತ ಮೋದಿಗೋಬ್ಯಾಕ್ ಎಂದು ಹಲವರು ಟ್ವೀಟ್ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಹ್ಯಾಷ್‌ಟ್ಯಾಗ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, …
Read More »ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ: ಹೆಬ್ಬಾಳಕರ್
ಬೆಳಗಾವಿ – ಸಿದ್ದರಾಮಯ್ಯ ಇಂದಿಗೂ ನಮ್ಮ ನಾಯಕರು, ದಿನಕ್ಕೆರಡು ಬಾರಿ ಅವರೊಂದಿಗೆ ಮಾತನಾಡುತ್ತೇನೆ ಎನ್ನುವ ಸಚಿವ ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಟಾಂಗ್ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಇಂದಿಗೂ ತಮ್ಮ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯ ಜೊತೆ ದಿನಕ್ಕೆರಡು ಬಾರಿ ಮಾತನಾಡುತ್ತೇನೆ …
Read More »ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು …
Read More »ನಟ ಸುಶಾಂತ್ ಸಹೋದರಿಗೆ ಸಂಕಷ್ಟ: FIR ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ..!
ಸುಶಾಂತ್ ಸಿಂಗ್ ರಜಪೂತ್ ಸಹೋದರಿ ವಿರುದ್ಧ ದಾಖಲಿಸಲಾಗಿದ್ದ ಎಫ್ ಐಆರ್ ರದ್ದಾತಿಗೆ ಬಾಂಬೆ ಹೈಕೋರ್ಟ್ ನಕಾರ ಸೂಚಿಸಿದ್ದು, ಸುಶಾಂತ್ ಸಹೋದರಿ ಪ್ರಿಯಾಂಕ ಸಿಂಗ್ʼಗೆ ಸಂಕಷ್ಟ ಎದುರಾಗಿದೆ. ಅಂದ್ಹಾಗೆ, ಪ್ರಿಯಾಂಕ ಸಿಂಗ್ ವಿರುದ್ಧ ಸುಶಾಂತ್ ಸಿಂಗ್ ರಜಪೂತ್ ಅವ್ರ ಗೆಳತಿ ರಿಯಾ ಚಕ್ರವರ್ತಿ ದೂರು ದಾಖಲಿಸಿದ್ದರು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ರದ್ದುಗೊಳಿಸಲು ಬಾಂಬೆ ಒಪ್ಪಿಗೆ ಸೂಚಿಸಿಲ್ಲ.
Read More »IOCL Recruitment 2021 : ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನಾಂಕ
ನವದೆಹಲಿ : ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil Corporation Limited IOCL) ತಾಂತ್ರಿಕ ಅಪ್ರೆಂಟಿಸ್ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ (Non-Technical Trade Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ಒಟ್ಟು 505 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCLನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 26 ಫೆಬ್ರವರಿ 2021 ರೊಳಗೆ ಐಒಸಿಎಲ್ …
Read More »ಕುರಿ ಕಾಯಲು ತೋಳ ಬಿಟ್ಟಂತೆ: ಎಚ್‌ಡಿಕೆ ವಾಗ್ದಾಳಿ
ಬೆಂಗಳೂರು: ಭವಾನಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಮೀನು ಹಂಚಿಕೆಯಲ್ಲಿ ₹ 500 ಕೋಟಿ ಮೊತ್ತದ ಅವ್ಯಹಾರ ನಡೆದಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹೇಳುತ್ತಿರುವುದು ಕುರಿ ಕಾಯಲು ತೋಳ ಬಿಟ್ಟಂತೆ ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ವಿಶ್ವನಾಥ್ ಈಗ ಬಿಡಿಎ …
Read More »ಉಮೇಶ ಕತ್ತಿಗೆ ಕ್ಲಾಸ್ ತೆಗೆದುಕೊಂಡ ಸಿಎಂ B.S.Y….!!!
ಬೆಂಗಳೂರು : ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿಕೆಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕ್ಲಾಸ್ ತೆಗೆದುಕೊಂಡಿದ್ದು ಇದರಿಂದ ಕತ್ತಿ ಗರಂ ಆಗಿದ್ದಾರೆ. ಟಿವಿ , ಪ್ರೀಡ್ಜ್, ಬೈಕ್ ಇದ್ದರೆ ಬಿಪಿಎಲ್ ಪಡಿತರ ಕಾರ್ಡ್ ರದ್ದುಗೊಳಿಸಲಾಗುತ್ತದೆ ಎಂಬ ಸಚಿವ ಉಮೇಶ ಕತ್ತಿ ಹೇಳಿಕೆಗೆ ವಿಪಕ್ಷ ಹಾಗೂ ಸ್ವಪಕ್ಷಿಯದಲ್ಲಿ ಮತ್ತು ರಾಜ್ಯದ ಜನರು ವಿರೋಧ ವ್ಯಕ್ತ ಪಡಿಸಿದ್ದರು. ಇದರಿಂದ ಸಚಿವರ ನಿರ್ಧಾರದಿಂದ ಸರ್ಕಾರಕ್ಕೆ ಕಪ್ಪು …
Read More »ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ ಸಿಎಂ ಯಡಿಯೂರಪ್ಪ
ವಿಜಯಪುರ: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಿಂದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದ್ದಾರೆ. ತಾಲೂಕಿನ ಬುರಣಾಪುರ ಮದಭಾವಿ ಗ್ರಾಮಗಳ ಬಳಿ 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 220 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತದಲ್ಲಿ ಕಾಮಾಗಾರಿ ನಡೆಯುತ್ತದೆ. ಮೊದಲ ಹಂತದಲ್ಲಿ 95 ಕೋಟಿ ರೂ. ವೆಚ್ಚದಲ್ಲಿ ಇಂದಿನಿಂದ (ಫೆಬ್ರವರಿ 15) ಕಾಮಗಾರಿ ಆರಂಭವಾಗುತ್ತದೆ. 2010ರಂದು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ …
Read More »ವಾಯುಸೇನೆಗೂ ಕಾಲಿಟ್ಟ ಮುಧೋಳ ನಾಯಿಗಳು..!
ಬಾಗಲಕೋಟೆ: ರಾಜ್ಯದ ಪ್ರಸಿದ್ಧ ಮುಧೋಳ ನಾಯಿಗಳು ಈಗ ಭಾರತೀಯ ವಾಯುಸೇನೆಗೂ ಸೇರ್ಪಡೆಯಾಗಿದ್ದು ಈ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಳ ಮಾಡಿದೆ. ಭಾನುವಾರ ಎರಡು ಹೆಣ್ಣು ಸೇರಿದಂತೆ ನಾಲ್ಕು ಮುಧೋಳ ನಾಯಿಮರಿಗಳನ್ನು ಆಗ್ರಾ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಇವುಗಳನ್ನು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಕೆನಡಿ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ (ಸಿಆರ್ ಐಸಿ) ಪರವಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಶುಕ್ರವಾರ ಐಎಎಫ್ ಗೆ ಹಸ್ತಾಂತರಿಸಿದರು. ಮುಧೋಳ ದಮನಕಾರಿ ನಾಯಿಗಳು …
Read More »