Breaking News

Uncategorized

ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ ಅರವಿಂದ ಲಿಂಬಾವಳಿ

ಚಾಮರಾಜನಗರ (ಫೆ.07)  ಸಚಿವ ಸಂಪುಟ ವಿಸ್ತರಣೆ ನಂತರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲವು ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗಗೊಂಡಿದೆ. ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ಹೊತ್ತು ಕಾಡಿನಲ್ಲಿ ಇರಬೇಕು, ಹಗಲು ವೇಳೆ ನಾಡಿಗೆ ಬರಬೇಕು, ಕಾಡು ನಾಡು ಎರಡನ್ನೂ …

Read More »

ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಕಂಬಳ

ಕೋವಿಡ್ ನಿಯಮಗಳ ನಡುವೆ ಕರಾವಳಿಯಲ್ಲಿ ಕಂಬಳ ಕ್ರೀಡೆ ಅದ್ಧೂರಿಯಾಗಿ ನಡೆಯುತ್ತಿದೆ. ಮಂಗಳೂರು ನಗರ ಹೊರವಲಯದ ಐಕಳದಲ್ಲಿ ಎರಡನೇ ಕಂಬಳ ಕ್ರೀಡೆ ಭಾರೀ ವಿಜೃಂಭಣೆಯಿಂದ ಜರುಗಿದೆ. ಈ ಕಂಬಳ ಕೂಟ ಐತಿಹಾಸಿಕ ದಾಖಲೆಯ ಜೊತೆ ಭಾವನಾತ್ಮಕ ಸನ್ನಿವೇಶಕ್ಕೂ ಸಾಕ್ಷಿಯಾಗಿದೆ. ಹೌದು..ಮಂಗಳೂರು ಹೊರವಲಯದ ಐಕಳ ಎಂಬಲ್ಲಿ ನಡೆದ ಕಂಬಳ ಎರಡು ಘಟನೆಗಳಿಗೆ ಸಾಕ್ಷಿಯಾಯಿತು. ಒಂದು 100 ಮೀ ದೂರವನ್ನು 9.15 ಸೆಕೆಂಡಲ್ಲಿ ಬೈಂದೂರಿನ ವಿಶ್ವನಾಥ್ ಕೋಣಗಳನ್ನು ಓಡಿಸಿ ನೂತನ ದಾಖಲೆ ಮಾಡಿದ್ರೆ, ಇನ್ನೊಂದು …

Read More »

ಪ್ರಧಾನ ಮಂತ್ರಿ ಗಳಿಗೆ ರೈತರ ಬಗ್ಗೆ ಗೌರವ್ ಇದೆಯಾ …?H.D.K.

ರಾಮನಗರ  :  ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಿದ್ದರು‌. ಈ  ಸಂದರ್ಭದಲ್ಲಿ ಮಾತನಾಡಿದ ಹೆಚ್ಡಿಕೆ ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ, ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು‌.ಧಾರ್ಮಿಕ ಗುರುಗಳ ಭಾವನೆಗೂ ಸರ್ಕಾರ ಗೌರವ ಕೊಡಬೇಕು ಆ ನಿಟ್ಟಿನಲ್ಲಿ ಸರ್ಕಾರ ಸೂಕ್ತ …

Read More »

ಅಯೋಧ್ಯೆ ಆಯ್ತು, ಕಾಶಿ, ಮಥುರಾಗಳಲ್ಲಿನ್ನು ಮಂದಿರ ನಿರ್ಮಾಣ ಬಾಕಿ ಇದೆ; ಬಸನಗೌಡ ಯತ್ನಾಳ್

ವಿಜಯಪುರ (ಫೆ. 7): ರಾಮ ಮಂದಿರ ನಿರ್ಮಾಣದ ಕನಸು ಇದೀಗ ನನಸಾಗುತ್ತಿದೆ.  ಇನ್ನು ಕಾಶಿ ಮತ್ತು ಮಥುರಾಗಳಲ್ಲಿ ಮಂದಿರ ನಿರ್ಮಾಣ ಬಾಕಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಚ್ ಪರವಾಗಿ ಆಯೋಜಿಸಲಾಗಿದ್ದ ನಿಧಿ ಸಮರ್ಪಣಾ ಮಹಾ ಅಭಿಯಾನದ ಸಭೆಯಲ್ಲಿ ಅವರು ರಾಮ ಮಂದಿರ ನಿರ್ಮಾಣಕ್ಕೆ ರೂ. 5 ಲಕ್ಷ ದೇಣಿಗೆ ನೀಡಿ ಮಾತನಾಡಿದರು. ಎಲ್ಲವೂ …

Read More »

1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಿತ್ತೂರು- ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ  ದೊಡ್ಡಗೌಡರ  ಸೋಮವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ  ಬೈಲಹೊಂಗಲ ಕಛೇರಿಯಲ್ಲಿ ಸಾರ್ವಜನಿಕ ಭೇಟಿ . 12:30ಕ್ಕೆ ಬೈಲೂರ  ಗ್ರಾಮದಲ್ಲಿ   ಜಲಮಿಷನ್ ಯೋಜನೆಯಡಿ  1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ ಹಾಗೂ ಗಣಪತಿ ದೇವಸ್ಥಾನದ ಹತ್ತಿರ 5 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ  ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 1 ಗಂಟೆಗೆ ದೇಗಲೊಳ್ಳಿ  …

Read More »

ಮೇ.9ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ/ ಜಿಲ್ಲಾ/ ಗಡಿನಾಡು ಘಟಕ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೇ.9ರಂದು ಮತದಾನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ. ಈ ಬಾರಿ ಹೊಸ ಕ.ಸಾ.ಪ ನಿಬಂಧನೆಗಳ ಅನ್ವಯ 28 ವಿಧಾನಸಭಾ ಕ್ಷೇತ್ರಗಳಲ್ಲೂ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಯಾ ಕ್ಷೇತ್ರಕ್ಕೆ ಗುರುತಿಸಲಾಗುವ ಚುನಾವಣಾ ಮತಕ್ಷೇತ್ರಕ್ಕೆ ಅಧಿಸೂಚನೆ ಹಾಗೂ ಕರಡು ಮತದಾನ ಪಟ್ಟಿ ಪ್ರಕಟಿಸಲಾಗುತ್ತದೆ.

Read More »

ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ

ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ. ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

Read More »

ಪತ್ನಿಯ ಎಲ್​ಐಸಿ ಪಾಲಿಸಿ ಮೇಲೆ ಕಣ್ಣು ಹಾಕಿದ ಚಾರ್ಟೆರ್ಡ್ ಅಕೌಂಟೆಂಟ್ ಪತಿ ಮಾಡಿದ್ದೇನು ನೋಡಿ!

ಪಲಂಪುರ್: ಪತ್ನಿ ಮಾಡಿಸಿದ್ದ ಎಲ್​ಐಸಿ ಪಾಲಿಸಿಯ ಹಣವನ್ನು ಪಡೆಯುವುದಕ್ಕೋಸ್ಕರ ಇಲ್ಲೊಬ್ಬ ನೀಚ ಪತಿ ಆಕೆಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಕೊಲೆ ಮಾಡಿ ಅದು ತಿಳಿಯದಂತೆ ರಸ್ತೆ ಅಪಘಾತ ಎಂದು ಕಥೆಯನ್ನು ಸೃಷ್ಟಿಸಿದ್ದಾನೆ. ಸುಪಾರಿ ನೀಡಿ ಅಪಘಾತ ಮಾಡಿಸಿರುವ ಈ ನೀಚ ಪತಿಯ ಕುಕೃತ್ಯ ಬೆಳಕಿಗೆ ಬಂದಿದ್ದು ಇದೀಗ ಹಣವೂ ಇಲ್ಲದೇ, ಪತ್ನಿಯನ್ನು ಕೊಲೆ ಮಾಡಿದ್ದಕ್ಕೆ ಜೈಲು ಸೇರಿದ್ದಾನೆ. ಮೂರು ತಿಂಗಳ ಹಿಂದೆ ಮಾಡಿಸಿದ್ದ ಎಲ್ ಐಸಿ ಪಾಲಿಸಿಯಲ್ಲಿ …

Read More »

ಇನ್ಮೂಂದೆ ಪಡಿತರ ಧಾನ್ಯಗಳನ್ನು ಪಡೆಯುವವರಿಗೆ ಗುಡ್ ನ್ಯೂಸ್ ಏನು.?

ನವದೆಹಲಿ : ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ..! ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಯಾವುದೇ ಪಡಿತರದಾರರಿಗೂ ತೊಂದರೆಯಾಗದಂತೆ ಈಗಾಗಲೇ ಕೆಲ ರಾಜ್ಯಗಳಲ್ಲಿ …

Read More »

ಗೃಹ ಸಚಿವ ಅಮಿತ್‌ ಶಾ ಧೌಲಿಗಂಗಾ ಪ್ರವಾಹ ಸ್ಥಳಕ್ಕೆ ಭೇಟಿ

ಉತ್ತರಾಖಂಡ: ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಪೋನ್‌ ಮೂಲಕ ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ನಾನು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವ್ರ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. …

Read More »