Breaking News

Uncategorized

ಬೆಲೆ ಏರಿಕೆ ಖಂಡಿಸಿ ಅಕ್ಕಿ ಮುಕ್ಕಿ ಪ್ರತಿಭಟನೆ

ಮಂಡ್ಯ: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಕಿ ಮುಕ್ಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಒಂದು ಕೈಯಲ್ಲಿ ಅಕ್ಕಿ ಮತ್ತು ಮತ್ತೊಂದು ಕೈಯಲ್ಲಿ ನೀರಿನ ಬಾಟಲಿಯಿಂದ ನೀರು ಕುಡಿದು …

Read More »

ಎಲ್ಲಾ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸ ಮತ್ತು ಮೂರು ದಿನಗಳ ವೇತನ ಸಹಿತ ರಜೆ‌ ?

ಹೊಸದಿಲ್ಲಿ, ಫೆಬ್ರವರಿ10: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಹೊರತರುವ ನಿರೀಕ್ಷೆಯಿದೆ. ಇದು ಕಂಪೆನಿಗಳಿಗೆ ವಾರದಲ್ಲಿ ನಾಲ್ಕು ಕೆಲಸದ ದಿನಗಳ ಜೊತೆಗೆ ರಾಜ್ಯ ವಿಮೆಯ ಮೂಲಕ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಳನ್ನು ಒದಗಿಸುತ್ತದೆ. ಆದರೆ, ವಾರದಲ್ಲಿ 48 ಗಂಟೆಗಳ ಕಾಲ ಕೆಲಸದ ಅವಧಿಯನ್ನು ಒದಗಿಸುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಅವರು, ದಿನಕ್ಕೆ 12 ಗಂಟೆಗಳ ಕೆಲಸದ ಅವಧಿ ಮತ್ತು ಮೂರು ದಿನಗಳ …

Read More »

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು. ‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ …

Read More »

ಕೃಷಿ ಕಾಯ್ದೆ ವಿರುದ್ಧ ನಕಲಿ ರೈತರ ಹೋರಾಟ

ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವುದು ನಕಲಿ ರೈತರ ಹೋರಾಟ. ವಿದೇಶಿ ಶಕ್ತಿಗಳ ಕಪಿಮುಷ್ಠಿಯಲ್ಲಿ ರೈತ ಮುಖಂಡರು ಸಿಲುಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ನಿಜವಾದ ರೈತರು ಹೋರಾಟ ನಡೆಸುತ್ತಿಲ್ಲ. ಕೆಲವು ಹಿತಾಸಕ್ತಿಗಳು ರೈತರ ದಾರಿ ತಪ್ಪಿಸುತ್ತಿವೆ. ಕೃಷಿ ಕಾಯ್ದೆಯಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ರೈತರ ಗೊಂದಲಗಳನ್ನು ನಿವಾರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಸುವ ಭರವಸೆ ನೀಡಿದ್ದಾರೆ …

Read More »

ದಲಿತರು, ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ; ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ …

Read More »

ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ‌.

ಬೆಳಗಾವಿ (ಫೆ. 9); ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ‌. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ …

Read More »

ರಾಜ್ಯ ಸರ್ಕಾರದಿಂದಲೂ ತೆರಿಗೆ ಬರೆ..! ಬಿಎಸ್‌ವೈ ಬಜೆಟ್‌ನಲ್ಲಿ ಕಾದಿದೆ ಶಾಕ್..?

ಬೆಂಗಳೂರು,ಫೆ.10- ಈ ಬಾರಿ ಕೋವಿಡ್-19 ಬಂದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹವಾಗದಿರುವ ಕಾರಣ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸರ್ಕಾರ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹಣೆ …

Read More »

ಮೀಸಲು ಸವಾಲು : ಇನ್ನಷ್ಟು ಜಾತಿಗಳಿಂದ ಮುಖ್ಯಮಂತ್ರಿಗೆ ಹೆಚ್ಚಿದ ಒತ್ತಡ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಕೂಗು ಬಲವಾಗಿದೆ. ಕುರುಬ ಮತ್ತು ಪಂಚಮಸಾಲಿ ಜನಾಂಗದವರು ಪಾದಯಾತ್ರೆ ನಡೆಸಿ ಹೋರಾಟ ತೀವ್ರಗೊಳಿಸಿದ್ದಾರೆ. ಇದರ ಮಧ್ಯೆ ಇನ್ನಷ್ಟು ಜಾತಿಗಳು ವಿವಿಧ ಬೇಡಿಕೆಗಳೊಂದಿಗೆ ಹೋರಾಟಕ್ಕಿಳಿಯಲು ಸಜ್ಜಾಗಿವೆ. ಮೀಸಲಾತಿಯು ರಾಜ್ಯ ಸರಕಾರಕ್ಕೆ ಬಿಡಿಸಲಾರದ ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಯಾರ ಬೇಡಿಕೆ ಏನು? ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಒಂದು ಒಳ ಪಂಗಡ. ಸದ್ಯ 3ಬಿ ಪ್ರವರ್ಗದಲ್ಲಿದೆ. ಈಗ 2ಎಗೆ ಸೇರಿಸಿ ಎಂಬುದು ಆಗ್ರಹ. ಸರಕಾರವು ಈ ಬಗ್ಗೆ ಅಧ್ಯಯನ …

Read More »

BIG NEWS : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15, 16ರಂದು ‘ಭಾರತದಾದ್ಯಂತ ಬ್ಯಾಂಕ್‌ಗಳ ಮುಷ್ಕರ

ನವದೆಹಲಿ: ಒಂಬತ್ತು ಒಕ್ಕೂಟಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಾರ್ಚ್ ನಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಆರಂಭಿಸಲಾಗುತ್ತದೆ ಎಂದು ಯುಎಫ್ ಬಿಯು ತಿಳಿಸಿದೆ. ಮಂಗಳವಾರ ನಡೆದ ಯುಎಫ್ ಬಿಯು ಸಭೆಯಲ್ಲಿ ಬ್ಯಾಂಕ್ ಗಳ ಖಾಸಗೀಕರಣದ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ …

Read More »

ಬನ್ನಿ, ಸೈಬರ್‌ ಸ್ವಯಂ ಸೇವಕರಾಗಿ :ದೇಶದ್ರೋಹಿ ಪೋಸ್ಟ್‌ ಮೇಲೆ ಕಣ್ಣಿಡಲು ಜನರಿಗೆ ಕೇಂದ್ರ ಕರೆ

ಹೊಸದಿಲ್ಲಿ: ಟ್ವಿಟರ್‌, ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್‌ ಕ್ರೈಮ್‌ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್‌ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ …

Read More »