Breaking News
Home / Uncategorized (page 56)

Uncategorized

ಬೆಳಗಾವಿ: ಚುರುಕು ಪಡೆಯದ ದುರಸ್ತಿ ಪ್ರಕ್ರಿಯೆ; ಈ ಸಲವೂ ಶಿಥಿಲ ಕಟ್ಟಡಗಳಲ್ಲೇ ಓದು

ಬೆಳಗಾವಿ: ಮಳೆಗಾಲ ಮತ್ತೆ ಬಂದಿದೆ. 2024-25ನೇ ಸಾಲಿನ ತರಗತಿಗಳ ಆರಂಭಕ್ಕೆ ಒಂದೇ ವಾರ ಬಾಕಿ ಇದೆ. ಈ ಮಧ್ಯೆ, ಮುಂಗಾರು ಪೂರ್ವದಲ್ಲಿ ಜೋರಾಗಿ ಸುರಿಯುತ್ತಿರುವ ಮಳೆ- ಗಾಳಿಯಿಂದ ಶಾಲೆಗಳ ಪತ್ರಾಸ್‌ ಹಾರಿಹೋಗುವುದು, ಗೋಡೆ ಕುಸಿಯುವುದು ಸಾಮಾನ್ಯವಾಗಿದೆ. ಆದರೆ, ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳು ಶಿಥಿಲ ಕೊಠಡಿಗಳಿಂದ ಎದುರಿಸುತ್ತಿರುವ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಈ ವರ್ಷವೂ ವಿದ್ಯಾರ್ಥಿಗಳು ಅದೇ ಕೊಠಡಿಗಳಲ್ಲೇ ಆತಂಕದಿಂದ ಓದುವುದು ತಪ್ಪಿಲ್ಲ. ಇತ್ತೀಚೆಗೆ ಸುರಿದ ಮಳೆ, ಜೋರಾಗಿ ಬೀಸುತ್ತಿರುವ …

Read More »

ಮೂಡಲಗಿ: ಖಾನಟ್ಟಿಯ ಶಿವಲಿಂಗೇಶ್ವರ ರಥೋತ್ಸವ ಇಂದು

ಮೂಡಲಗಿ: ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಸಿದ್ಧಿ ಪುರುಷ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆ ಮತ್ತು ರಥೋತ್ಸವವು ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಅವರ ಸನ್ನಿಧಿಯಲ್ಲಿ ಮೇ 20ರಂದು ಸಂಜೆ 5ಕ್ಕೆ ನಡೆಯಲಿದೆ. ವರ್ಷದಲ್ಲಿ ಮೂರು ಬಾರಿ ಜಾತ್ರೆ ನಡೆಯುವ ವಿಶಿಷ್ಟ ಸಂಪ್ರದಾಯವನ್ನು ಖಾನಟ್ಟಿ ಶಿವಲಿಂಗೇಶ್ವರ ದೇವಸ್ಥಾನ ಹೊಂದಿದೆ. ಶ್ರಾವಣ ಮಾಸ, ಶಿವರಾತ್ರಿ ದಿನಗಳಂದು ಜಾತ್ರೆ ನಡೆಯುತ್ತದೆ. ಬಸವ ಜಯಂತಿ ನಂತರ ಬರುವ ಸೋಮವಾರದಂದು ನಡೆಯುವ ಜಾತ್ರೆಯು ಅವಿಗಳಲ್ಲಿ ಪ್ರಮುಖವೆನಿಸಿದೆ. ಹಿನ್ನೆಲೆ: ಕ್ರಿ.ಶ. …

Read More »

ಕೊಪ್ಪಳ | ವಾಣಿಜ್ಯ ಮಳಿಗೆಗಳಿಗೆ ಬೆಂಕಿ: ದಟ್ಟ ಹೊಗೆ

ಕೊಪ್ಪಳ: ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ನಡೆದಿದೆ. ಪೇಂಟ್ ಮಾರಾಟದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಒಂದೂವರೆ ತಾಸಿನಿಂದ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ …

Read More »

ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ. ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್​ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ …

Read More »

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ …

Read More »

ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್‌ ಶಾಕ್.‌ ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ. ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ …

Read More »

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.   ನಮ್ಮ ಸರ್ಕಾರದ ಯೋಜನೆಗಳು ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾವು ನುಡಿದಂತೆ …

Read More »

ಪ್ರಭಾಕರ ಕೋರೆ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರ್ಣ

ಬೆಳಗಾವಿ: ‘ದಾನ ಪಡೆಯುವ ಕೈಗಳು ಶುದ್ಧವಾಗಿದ್ದರೆ ಮಾತ್ರ ದಾನ ನೀಡುವ ಕೈಗಳು ಮುಂದೆ ಬರುತ್ತವೆ. ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸಂಸ್ಥೆ ವಿಶ್ವಮಟ್ಟಕ್ಕೆ ಬೆಳೆಯಲು ಇಂಥ ಶುದ್ಧ ಕೈಗಳೇ ಕಾರಣ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂಸ್ಥೆಯ ಪರಿವಾರದವರು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬ್ರಿಟಿಷ್‌ ಆಡಳಿತದಲ್ಲಿ ಉನ್ನತ ಶಿಕ್ಷಣ ಪಡೆದಿದ್ದ …

Read More »

ಹಿಂದೂಗಳನ್ನು ರಕ್ಷಿಸುವ ಪಕ್ಷಗಳನ್ನು ಆಯ್ಕೆ ಮಾಡಿ: ದಿಲೀಪ ಪರಾಂಡೆ

ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್‌ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು.   ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. …

Read More »

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು. ‌ ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು. …

Read More »