Breaking News
Home / Uncategorized (page 56)

Uncategorized

ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿB.J.P. ಪ್ರಕಟನೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿಯುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಇದೀಗ ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ಹೊರಡಿಸುವ ಮೂಲಕ ಸರಕಾರವನ್ನು ಕೆಣಕಿದೆ. ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ವ್ಯಂಗ್ಯವಾಡಿದೆ. ಅಪರಾಧಿಗಳಿಗೆ ಶ್ರೀರಕ್ಷೆ- ಅಮಾಯಕರಿಗೆ ಶಿಕ್ಷೆ. ರಕ್ತ ಸಿಕ್ತ ಕೈನಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, …

Read More »

ಶಾಲಾರಂಭಕ್ಕೆ ಭರದ ಸಿದ್ಧತೆ

ಉಡುಪಿ: ಉಭಯ ಜಿಲ್ಲೆಗಳಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಬೇಕಾದ ತಯಾರಿಯೂ ಆಗುತ್ತಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಗಳಿಗೆ ಅಗತ್ಯವಿರುವ ಪಠ್ಯಪುಸ್ತಕ ಹಾಗೂ ಸಮವಸ್ತ್ರದ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಅದರಂತೆ …

Read More »

ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

ಬೆಂಗಳೂರು: ಇದೇ ತಿಂಗಳು 20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಒಂದು ವರ್ಷ ಪೂರೈಸಲಿದೆ. ಆದರೆ ಸಂಭ್ರಮಾಚರಣೆ ನಡೆಸುವುದಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಹಲವು ಸವಾಲುಗಳ ಮಧ್ಯೆಯೂ ಸಮರ್ಪಕವಾಗಿ ಅನುಷ್ಠಾನ ಗೊಳಿಸಿರುವ ರಾಜ್ಯ ಸರಕಾರವು ಅದರ ನೆರಳಿನಲ್ಲೇ ಲೋಕ ಸಭಾ ಚುನಾವಣೆ ಯನ್ನು ಎದುರಿಸಿದೆ.   ಈ ಸಾಧನೆಯ ಬಲದಿಂದಲೇ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗಳಿಕೆಯ …

Read More »

ಮೆಂಟಲ್‌ ಗಿರಾಕಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’: ಡಿಕೆಶಿ

ಬೆಂಗಳೂರು: “ದೇವರಾಜೇಗೌಡ ಮಾಡುತ್ತಿರುವ ಆರೋಪಗಳ ಬಗ್ಗೆ ಆತನ ಬಳಿ ಏನೇ ದಾಖಲೆಗಳಿದ್ದರೂ ದೂರು ಕೊಡಲಿ’ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಸವಾಲೆಸೆದಿದ್ದಾರೆ. ಪ್ರಜ್ವಲ್‌ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿಸಿದ್ದು ಮಾಜಿ ಸಿಎಂ ಎಚ್‌ಡಿಕೆ ಎಂದು ಆರೋಪಿಸಲು ತನಗೆ ಡಿಕೆಶಿ 100 ಕೋಟಿ ರೂ. ಆಮಿಷ ಒಡ್ಡಿದ್ದರು ಎಂಬ ದೇವರಾಜೇಗೌಡ ಆರೋಪಕ್ಕೆ ಡಿ.ಕೆ. ಶಿವಕುಮಾರ್‌ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, “ದೇವರಾಜೇಗೌಡ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. …

Read More »

ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಕುಂದಾಪುರ: ಆಕೆ ವಿಶೇಷ ಚೇತನ ಯುವತಿ. ತಾಯಿಯೇ ಆಸರೆ. ಮನೆಯಲ್ಲಿ ಅವರಿಬ್ಬರ ಹೊರತು ಬೇರೆ ಯಾರೂ ಇಲ್ಲ. ಹೆತ್ತಬ್ಬೆ ಕಣ್ಣೆದುರೇ ಕುಸಿದು ಬಿದ್ದು ತಲೆಗೆ ಗಾಯವಾಗಿ ಮೃತಪಟ್ಟರೂ ಏನೂ ಮಾಡಲಾಗದ ಸ್ಥಿತಿ ಆಕೆಯದು. ಮೂರು ದಿನಗಳ ಬಳಿಕ ಈ ವಿಚಾರ ಹೊರಪ್ರಪಂಚಕ್ಕೆ ತಿಳಿಯುವ ವರೆಗೂ ಅಮ್ಮನ ಕೊಳೆತ ಶವದೆದುರು ಇರಬೇಕಾದ ಅನಿವಾರ್ಯ ಆಕೆಯದಾಗಿತ್ತು! ಗೋಪಾಡಿ ಗ್ರಾಮದ ಮೂಡು ಗೋಪಾಡಿಯ ದಾಸನಹಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೇ …

Read More »

ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಬೆಳಗಾವಿ: ‘ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲುಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಮೆರವಣಿಗೆ ನಡೆಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು. ‘ಅಂಜಲಿ ಅವರಿಗೆ ಕೊಲೆ ಬೆದರಿಕೆ ಹಾಕಿದ …

Read More »

ಬಾರಿ ಬರಗಾಲದ ನಡುವೆಯೂ ಕಬ್ಬು ರೈತರ ಕೈ ಹಿಡಿದಿದೆ

ಬೆಳಗಾವಿ: ಈ ಬಾರಿ ಬರಗಾಲದ ನಡುವೆಯೂ ಕಬ್ಬು ರೈತರ ಕೈ ಹಿಡಿದಿದೆ. ಇಳುವರಿಯೂ ಹೆಚ್ಚಳವಾಗಿದೆ. ಎಫ್‌ಆರ್‌ಪಿ ಕೂಡ ಏರಿಕೆಯಾಗಿದ್ದರಿಂದ ಬೆಳೆಗಾರರ ಜೇಬು ಭರ್ತಿಯಾಗಿದೆ. ರಾಜ್ಯದಲ್ಲಿ ಈ ಹಂಗಾಮಿನಲ್ಲಿ 76 ಕಾರ್ಖಾನೆಗಳು ಕಬ್ಬು ನುರಿಸಿವೆ. ಏಪ್ರಿಲ್‌ 30ರ ವರೆಗೆ 586 ಲಕ್ಷ ಟನ್‌ ಕಬ್ಬು ನುರಿಸಲಾಗಿದೆ. ಒಟ್ಟು 52.91 ಲಕ್ಷ ಮೆಟ್ರಿಕ್‌ ಟನ್‌ ಸಕ್ಕರೆ ಉತ್ಪಾದಿಸಲಾಗಿದ್ದು, 9.04 ರಿಕವರಿ ಬಂದಿದೆ. 2023ರಲ್ಲಿ 600 ಲಕ್ಷ ಮೆಟ್ರಿಕ್‌ ಟನ್‌ ಮತ್ತು 2022ರಲ್ಲಿ 600 ಲಕ್ಷ …

Read More »

ಬೆಳಗಾವಿ: ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

ಬೆಳಗಾವಿ: ‘ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ. ‘ಪುದುಚೇರಿ- ದಾದರ್ ಎಕ್ಸ್‌ಪ್ರೆಸ್‌ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ …

Read More »

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು ಮಹತ್ವದ ಐಪಿಎಲ್ ಪಂದ್ಯ ನಡೆಯುವ ಸಮಯದಲ್ಲಿ ಮಳೆರಾಯ ಕಾಟ ಕೊಡಲು ಶುರು ಮಾಡಿದ್ದಾನೆ. ಹೀಗಿದ್ದಾಗ ಇಂದು ಆರ್‌ಸಿಬಿ VS ಸಿಎಸ್‌ಕೆ (RCB VS CSK) ಮ್ಯಾಚ್ ನಡೆಯುವುದೇ ಅನುಮಾನ ಎನ್ನುವಂತಾಗಿದೆ. ಇದೇ ಸಮಯದಲ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ಮತ್ತೊಂದು ಆಘಾತದ ಸುದ್ದಿ ಸಿಕ್ಕಿದೆ. ಹೌದು, ಬೆಂಗಳೂರಲ್ಲಿ ಈಗಾಗಲೇ ಮಳೆ ಶುರುವಾಗಿದ್ದು ಇಂದು ಪೂರ್ತಿ ದಿನ …

Read More »

ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಬೆಳಗಾವಿ : ಮಹಾರಾಷ್ಟ್ರದ ಕಾಗಲ್ ಬಳಿ ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾಗಿದ್ದಾರೆ. ಇನ್ನುಳಿದ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದ ಬಳಿ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ. ಜಿತೇಂದ್ರ ವಿಲಾಸ ಲೋಕ್ರೆ (36), ರೇಷ್ಮ ದೀಪಕ ಏಳಮಲೆ (34), ಸವಿತಾ ಅಮರ ಕಾಂಬಳೆ (27) ಹಾಗೂ ಯಶ್ ದಿಲೀಪ ಕಾಂಬಳೆ …

Read More »