Breaking News

Uncategorized

ಶಿವಸೇನೆ ಕಾರ್ಯಕರ್ತರ ಪುಂಡಾಟ ರಿವಾಲ್ವರ್ ತೋರಿಸಿ ಬೆದರಿಕೆ

ಮುಂಬೈ: ಶಿವಸೇನೆ ಕಾರ್ಯಕರ್ತರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ಗನ್ ಹಿಡಿದು ತಮಗೆ ದಾರಿ ಬಿಡುವಂತೆ ಜನರನ್ನು ಬೆದರಿಸಿದ ಘಟನೆ ಮುಂಬೈ ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿವಸೇನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ. ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ …

Read More »

ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್, ಷರತ್ತುಗಳು ಅನ್ವಯ

ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ಮಾರ್ಗಸೂಚಿಯಲ್ಲಿ ಏನಿದೆ? – ಆನ್‍ಲೈನ್  …

Read More »

ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ: ಸಿಎಂ ಇಬ್ರಾಹಿಂ

ರಾಯಚೂರು: ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಸಫಲತೆಗಿಂತ ವಿಫಲತೆನೆ ಜಾಸ್ತಿ. ಕ್ಯಾಬಿನೆಟ್ ಮಾಡುವುದರಲ್ಲೇ ಅವರ ಸಮಯ ಹೋಗುತ್ತಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ವಿಧಾನಸಭೆ ಚುನಾವಣೆ ಬಂದರೂ ನಾವು ಅಚ್ಚರಿ ಪಡಬೇಕಿಲ್ಲ ಅಂತ ಮಾಜಿ ಸಚಿವ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಈ ಹಿಂದೆ ಡಿಸೆಂಬರ್‍ನಲ್ಲಿ ರಾಜಕೀಯ ಕೋಲಾಹಲವಾಗುತ್ತೆ ಅಂತ ಹೇಳಿದ್ದೆ ಅದು ನಿಜವಾಗಿದೆ ಎಂದರು. ಕೂಡಲೇ ಚುನಾವಣೆ ಮಾಡಬೇಕು ಅನ್ನೋದು ಬಿಜೆಪಿ ವರಿಷ್ಠರಲ್ಲೂ ಚಿಂತನೆ ಶುರುವಾಗಿದೆ. …

Read More »

ಮಕ್ಕಳನ್ನು ದತ್ತು ನೀಡಲಿಲ್ಲ ಎಂದು ಅಣ್ಣನ ಕೊಲೆ ಮಾಡಿದ ತಮ್ಮ

ಕೋಲಾರ (ಜ. 31):  ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಲ್ಲೆಂಗುರ್ಕಿ ರೈಲ್ವೆ ಅಂಡರ್ ಪಾಸ್ ಬಳಿ ಕಳೆದ ಜ. 23 ರಂದು  ಸುಟ್ಟು ಕರಕಲಾದ ಸ್ಥಿತಿಯಲ್ಲಿ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ತಮ್ಮನ್ನೇ ಅಣ್ಣನನ್ನು ಕೊಲೆ ಮಾಡಿರುವುದು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಗಾರಪೇಟೆ ನಿವಾಸಿ ರಮೇಶ್ ಕೊಲೆಯಾಗಿದ್ದು, ಆತನ ತಮ್ಮ ರಾಜೇಶ್​ ಈ ಕೃತ್ಯ ಎಸಗಿದವನು. ಮಕ್ಕಳನ್ನು ದತ್ತು ನೀಡದ ಹಿನ್ನಲೆ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿದೆ. …

Read More »

ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ; ಕೇಂದ್ರದ ವಿರುದ್ಧ ರಮೇಶ್​ ಕುಮಾರ್

ಕೋಲಾರ (ಜನವರಿ 29); ಜನವರಿ 26ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಗಲಭೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನೇ ಮರೆ ಮಾಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿರುವ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, “ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೆ ತೋರಿಸ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ …

Read More »

ಯುಗಾದಿಗೆ ಉತ್ತರ ಕರ್ನಾಟಕದವರೇ ಸಿಎಂ :ಯತ್ನಾಳ್ ಹೊಸ ಬಾಂಬ್

ವಿಜಯಪುರ (ಜನವರಿ.30); ಯುಗಾದಿ ಹಬ್ಬದ ವೇಳೆಗೆ ಮಂತ್ರಿ ಸ್ಥಾನವನ್ನು ಕೊಡುವವರ ಜಾಗದಲ್ಲಿ ನಮ್ಮವರೆ ಬರ್ತಾರೆ ಎಂದು ಹೇಳುವ ಮೂಲಕ ಶಾಸಕ ಹಿರಿಯ ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ಸಿಎಂ ಯಡಿಯೂರಪ್ಪ ಸ್ಥಾನ ಬದಲಾಗಲಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, “ಈ ಹಿಂದೆ ಮೂರು ತಿಂಗಳಲ್ಲಿ ಬದಲಾವಣೆಯಾಗಲಿದೆ ಎಂದು ಬೇರೆ ವಿಚಾರವಾಗಿ ಹೇಳಿದ್ದೆ.  ಈಗ ನೋಡ್ತಾ ಇರಿ, ಯುಗಾದಿಗೆ ಎಲ್ಲವೂ ಬದಲಾಗಲಿದೆ. ಮಂತ್ರಿಗಳನ್ನು ಕೊಡುವವರ ಜಾಗದಲ್ಲಿ ನಮ್ಮವರೆ …

Read More »

‘ಕೆಜಿಎಫ್ ಚಾಪ್ಟರ್-2” ರಿಲೀಸ್ ಗೆ ಡೇಟ್ ಫಿಕ್ಸ್..!

ರಾಕಿಂಗ್ ಸ್ಟಾರ್​ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್​-2 ಚಿತ್ರ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದ್ದು, ಚಿತ್ರತಂಡದಿಂದ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಈ ಚಿತ್ರ ಜುಲೈ 16ರಂದು ರಿಲೀಸ್ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಹೊಂಬಾಳೆ ಫಿಲಂಸ್, ಯಶ್ ಹಾಗೂ ಪ್ರಶಾಂತ್ ನೀಲ್​‌​ ಟ್ವಿಟರ್​ ಅಕೌಂಟ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Fasten your seat belt coz the date is set.. ? pic.twitter.com/LsmIvf7SSz – Yash (@TheNameIsYash) January …

Read More »

ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ‌ ಹರ್ಷ

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್‌ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಶುಭಾಶಯ ತಿಳಿಸಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ‘ಶ್ರೀ ರಾಮ ಮಂದಿರ’ ದ ತಳಪಾಯದ ಕೆಲಸ ನಡೆಯುತ್ತದೆ. …

Read More »

ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು

ಬೆಳಗಾವಿ –  ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ

Read More »