Breaking News

Uncategorized

ದೆಹಲಿ-ಲಖನೌ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶತಾಬ್ದಿ ಎಕ್ಸ್‌ಪ್ರೆಸ್‌ ಶನಿವಾರ ಬೆಳಗ್ಗೆ 6.41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ತಲುಪಿತ್ತು. ಬೆಂಕಿ ಅವಘಡದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ನವದೆಹಲಿ – ಲಖನೌ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಅಕಸ್ಮಿಕ ಅವಘಡ ಸಂಭವಿಸಿದ್ದು, …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದ ಬಳಿಕ ರಾಜ್ಯ ಸರ್ಕಾರಕ್ಕೆ ಹೊಸ ಚೈತನ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ‘ ಬೆಳಗಾವಿ ಲೋಕಸಭೆ, ಮಸ್ಕಿ, ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದಕ್ಕೂ ಮೊದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.   ಸಿಡಿ ಪ್ರಕರಣದ …

Read More »

ಕಮಲ್‍ಹಾಸನ್ ಪಕ್ಷದ ಖಜಾಂಚಿ ಮನೆಯಲ್ಲಿ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ..!

ಚೆನ್ನೈ, ಮಾ.19- ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನಿಧಿ ಮಹಿಮ್ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.  ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ತ್ರಿಪುರಾದ ಪ್ರಮುಖ ಉದ್ಯಮಿಯೂ ಆಗಿರುವ ಪಕ್ಷದ ಖಜಾಂಚಿ ಚಂದ್ರಶೇಖರ್ …

Read More »

‘ವಾಟ್ಸಾಪ್’ ಚಾಟ್ ಯುವತಿ ಸಾವಿಗೆ ಕಾರಣವಾಯ್ತು

ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ …

Read More »

ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;

ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ. ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು …

Read More »

ವರ್ಕ್ ಫ್ರಮ್ ಹೋಂ ಓಕೆ ..! ಸಂಬಳ ಕಡಿತ ಯಾಕೆ..? : ವರದಿ

ನವ ದೆಹಲಿ : ಕೋವಿಡ್ 19 ಭಾರತದ ಮೇಲೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರಿದೆ. ಆರ್ಥಿಕ ಸ್ಥಿತಿ, ಉದ್ಯಮ ಕ್ಷೇತ್ರಗಳ ಮೇಲಂತೂ ಬಾರಿ ಪ್ರಹಾರ ಮಾಡಿರುವುದು ಸುಳ್ಳಲ್ಲ. ಪರಿಸ್ಥಿತಿ ಚೇತರಿಕೆಯಾಗುವತ್ತ ಮುಖ ಮಾಡುತ್ತಿದೆ ಎನ್ನುವಷ್ಟರಲ್ಲೆ ರೂಪಾಂತರಿ ಕೋವಿಡ್ ಮತ್ತೆ ಅಲೆ ಎಬ್ಬಿಸಿದೆ. ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದರೂ ಕೂಡ ಜನರಲ್ಲಿ ಮತ್ತೆ ಲಾಕ್ ಡೌನ್ ಆಗಬಹುದು ಎಂಬ ಭೀತಿ ಆರಂಭವಾಗಿದೆ. ಕೋವಿಡ್ …

Read More »

ಬಾಲಚಂದ್ರ ಜಾರಕಿಹೊಳಿ‌ಗೆ ಉಸ್ತುವಾರಿ ನೀಡುವಂತೆ ಕೆಲ ಮೂಲ ಬಿಜೆಪಿ ಮುಖಂಡರು ಸಲಹೆ

ಬೆಳಗಾವಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಬೈ ಎಲೆಕಗಷನ್​ ಘೋಷಣೆಯಾಗಿದೆ. ಬೆಳಗಾವಿಯಲ್ಲಿ ಸಂಸದೀಯ ಕ್ಷೇತ್ರವೊಂದಕ್ಕೆ ಉಪಚುನಾವಣೆ ನಡೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಅಂದರೆ ರಮೇಶ್​ ಜಾರಕಿಹೊಳಿ ಹೆಗಲಿಗೆ ಜವಾಬ್ದಾರಿ ವಹಿಸುತ್ತಿತ್ತು ಆಡಳಿತಾರೂಢ ಬಿಜೆಪಿ ಪಕ್ಷ. ರಮೇಶ್ ಸಹ ತಣ್ಣಗೆ ತಮ್ಮ ಕಾರ್ಯಭಾರವನ್ನು ನಿರ್ವಹಿಸುತ್ತಿದ್ದರು. ಆದರೆ ಈ ಚಿತ್ರಣ ಬದಲಾಗಿದೆ. ರಾಜಕೀಯವಾಗಿ ಜಾರಕಿಹೊಳಿ ವರ್ಜ್ಯ, ಅಪಥ್ಯ ಅನ್ನುವಂತಾಗಿದೆ ಬಿಜೆಪಿಗೆ. ಇದಕ್ಕೆ ಕಾರಣ ಏನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅದುವೇ ರಮೇಶ್ ಜಾರಕಿಹೊಳಿ‌ ಸಿಡಿ‌ …

Read More »

ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.

ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …

Read More »

ಕೆಪಿಎಸ್‌ಸಿ ಮುಚ್ಚಿಬಿಡಿ: ಪ್ರದೀಪ್‌ ಶೆಟ್ಟರ್‌

ವಿಧಾನಪರಿಷತ್ತು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಾಯಕಲ್ಪ ನೀಡಲು ಸರ್ಕಾರ ಸಿದ್ಧವಿದ್ದು, ವಿವಿಧ ನೇಮಕಾತಿಗಳ ಪರೀಕ್ಷಾ ಪದ್ದತಿಗಳಲ್ಲಿ ಬದಲಾವಣೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್‌ ಶೆಟ್ಟರ್‌ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ವಾಯತ್ತ ಸಂಸ್ಥೆ, ಇದರ ಸ್ಥಾಪನೆಯ ಉದ್ದೇಶ ಒಳ್ಳೆಯದು. ಆದರೆ, ಕಾರ್ಯವಿಧಾನ ಸರಿಯಿಲ್ಲ. ಈ ಸಂಸ್ಥೆ ಹಲವಾರು ವರ್ಷಗಳಿಂದ ತಪ್ಪು …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ

ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …

Read More »