ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …
Read More »ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಮಹಿಳೆಯರು
ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ ಎಚ್ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಬೆಳಗಾವಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಕಂಗ್ರಾಳಿ ಕೆಎಚ್ ಗ್ರಾಮದ ಮಹಾತ್ಮಾ ಪುಲೆ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್(ರಿ) ಬೆಳಗಾವಿ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರದೀಪ …
Read More »ಯಡಿಯೂರಪ್ಪ ಅವರತ್ತ ಪರೋಕ್ಷವಾಗಿ ಗುರಿ ಇಟ್ಟ ಬಿಜೆಪಿ: ಕಾಂಗ್ರೆಸ್ ತಿರುಗೇಟು
ಬೆಂಗಳೂರು, ಮಾ.16: “ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ” ಎನ್ನುತ್ತ ಬಿ.ಎಸ್.ಯಡಿಯೂರಪ್ಪ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ? ಎಂದು ಬಿಜೆಪಿಗೆ ಕಾಂಗ್ರೆಸ್ ಟ್ವಿಟರ್ ನಲ್ಲಿ ತಿರುಗೇಟು ನೀಡಿದೆ. ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ ಬಿಎಸ್ವೈ ಮುಕ್ತ ಬಿಜೆಪಿ ಅಭಿಯಾನ ಮುಂದುವರೆಸುತ್ತಿರುವಿರಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ …
Read More »ಟೋಯಿಂಗ್‌ನಲ್ಲಿ ಅಕ್ರಮ: ಕ್ರಮಕ್ಕೆ ಒತ್ತಾಯ
ಬೆಂಗಳೂರು: ‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು. ‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ವಂಶವಾಹಿ ರಾಜಕಾರಣ ನಾಶ ಖಚಿತ
ದೇಶದಲ್ಲಿ ಈಗ “ಒಂದು ರಾಷ್ಟ್ರ ಒಂದು ಚುನಾವಣೆ’ ಎಂಬ ಪರಿಕಲ್ಪನೆ ಬಗ್ಗೆ ಚರ್ಚೆ ಆರಂಭವಾಗಿದೆ. ಈಚೆಗಷ್ಟೇ ರಾಜ್ಯ ವಿಧಾನಮಂಡಲಗಳಲ್ಲಿ ಈ ಬಗ್ಗೆ ಚರ್ಚೆಗೆ ಸಮಯ ನಿಗದಿಯಾಗಿತ್ತಾದರೂ, ವಿಪಕ್ಷಗಳ ವಿರೋಧದಿಂದ ಚರ್ಚೆ ಸಾಧ್ಯವಾಗಿಲ್ಲ. ಈ ಬಗ್ಗೆ “ಉದಯವಾಣಿ’ಯ ವೇದಿಕೆಯಲ್ಲಿ ರಾಜಕಾರಣಿಗಳು, ವಿಷಯ ತಜ್ಞರು ತಮ್ಮ ವಾದ ಮಂಡಿಸಲಿದ್ದಾರೆ. ದೃಷ್ಟಾರ ಮುಂದಿನ ಪೀಳಿಗೆಯ ಬಗ್ಗೆ ಯೋಚನೆ ಮಾಡಿದರೆ, ರಾಜಕೀಯ ನಾಯಕ ಕೇವಲ ಮುಂದಿನ ಚುನಾವಣೆ ಗೆಲ್ಲುವುದು ಹೇಗೆ ಎನ್ನುವುದನ್ನಷ್ಟೇ ಯೋಚಿಸುತ್ತಾನೆ. ಇದು ರಾಜಕೀಯ …
Read More »ರಾಜ್ಯ ಸರ್ಕಾರದಿಂದ ಬಡ ಜನತೆಗೆ ಬಿಗ್ ಶಾಕ್ : ಹೊಸ `BPL’ ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ
ಬೆಂಗಳೂರು : ರಾಜ್ಯ ಸರ್ಕಾರವು ಬಡ ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕೊರೊನಾ ಕಾರಣ ನೀಡಿ ಒಂದು ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವವರು ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಮತ್ತಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ. ` ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಪಡೆಯಲು ಆನ್ ಲೈನ್ ಅರ್ಜಿಸಲ್ಲಿಸಲು ಅವಕಾಶ ನೀಡಿದ್ದರೂ, ಸರ್ಕಾರ ಆದೇಶ …
Read More »ಗಂಡನ ಕಣ್ಣೆದುರೇ ಹೆಂಡತಿ ಮೇಲೆ ಐವರಿಂದ ಅತ್ಯಾಚಾರ..!
ರಾಜಸ್ಥಾನ : ರಾಜ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ಆಕೆಯ ಪತಿಯ ಕಣ್ಣೆದುರೇ, ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ, ಬರಾನ್ ಎಂಬಲ್ಲಿ ನಡೆದಿದೆ. ಮಹಿಳೆಯ ಮಾಜಿ ಪತಿ ಮತ್ತು ಆತನ ಸಹಾಯಕರು ಸೇರಿದಂತೆ ಐವರು ಪುರುಷರು ಶನಿವಾರ ರಾತ್ರಿ ಬರಾನ್ ಅತ್ರು ರಾಜ್ಯ ಹೆದ್ದಾರಿಯಲ್ಲಿ ದಂಪತಿಗಳನ್ನು ತಡೆದು, ಅತ್ಯಾಚಾರ ಎಸಗಿರುವುದಾಗಿ ಎಸ್ ಪಿ ವಿನೀತ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ದಂಪತಿ …
Read More »ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »ಸಿಡಿ ಪ್ರಕರಣ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ: ಸಿಟಿ ರವಿ
ಚಿಕ್ಕಮಗಳೂರು: ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಯಾಕೆ ತಳುಕು ಹಾಕಲಾಗಿದೆ ಎನ್ನುವುದು ನನಗೆ ತಿಳಿದಿಲ್ಲ. ಪ್ರಕರಣದ ತನಿಖೆಯಾದರೆ ಪ್ರೊಡ್ಯೂಸರ್, ಡೈರೆಕ್ಟರ್ ಯಾರೆಂದು ಗೊತ್ತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಟಿ ರವಿ “ಹಿಂದೆಲ್ಲಾ ಮೌಲ್ಯಾಧಾರಿತ ರಾಜಕೀಯದ ಚರ್ಚೆಯಾಗುತ್ತಿತ್ತು. ಈಗ ಸಿಡಿ ಆಧಾರಿತ ರಾಜಕೀಯದ ಚರ್ಚೆ ಆಗುತ್ತಿದೆ.” ಎಂದರು. “ಮೌಲ್ಯಾಧಾರಿತ ರಾಜಕೀಯವೋ, ಸಿಡಿ ಆಧಾರಿತ ರಾಜಕೀಯವೋ …
Read More »
Laxmi News 24×7