ಟಾಕ್ಸಿಕ್ ಸಿನಿಮಾ ಹಾಗೂ ಯಶ್ ಅವರ ಅಭಿನಯವನ್ನು ಕಾಂತಾರ ನಟ ರಿಷಬ್ ಶೆಟ್ಟಿ ಹಾಡಿಹೊಗಳಿದ್ದಾರೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ನಿಮ್ಮ ಬದ್ಧತೆಯನ್ನು ನಾವು ಗೌರವಿಸುತ್ತೇವೆ ಎಂದು ರಿಷಬ್ ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಿಷಬ್ ಶೆಟ್ಟಿ, ಒಬ್ಬ ಕಲಾವಿದನಾಗಿ, ನೀವು ಒಂದು ಪಾತ್ರವನ್ನು ನಿರ್ವಹಿಸಿದಾಗ, ಅದನ್ನು ನಿಮ್ಮ ಹೃದಯದಿಂದ ಜೀವಂತಗೊಳಿಸಲು ಪ್ರಯತ್ನಿಸುತ್ತೀರಿ. ಇಲ್ಲಿ, ಒಬ್ಬ ಪ್ರಭಾವಿ ವ್ಯಕ್ತಿಯ ಹೋರಾಟವನ್ನು ಚಿತ್ರಿಸಿರುವ ದೃಢವಿಶ್ವಾಸದಿಂದ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ ಎಂದು …
Read More »ಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ
ಮೈಸೂರು: ಈ ಬಾರಿಯ ದಸರಾವನ್ನುಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಮಿಲಿಟರಿ, ಸೇನಾ ಪಡೆ ಮೆರವಣಿಗೆಯಲ್ಲಿ ಬರಲಿದೆ. ಕನ್ನಡದ ಚಿತ್ರ ನಟ, ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಒಂದೇ ಪ್ರಕಾರದ 5 ಜಾನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ ರೂಪವನ್ನ …
Read More »ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು
ಚಿಕ್ಕಮಗಳೂರು: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು …
Read More »2028ಕ್ಕೆ ನಾಗೇಂದ್ರ ಎಲ್ಲಿ ಸ್ಪರ್ಧಿಸುತ್ತಾರೋ, ನಾನು ಅಲ್ಲೇ ನಿಲ್ತೀನಿ: ಸವಾಲು ಸ್ವೀಕರಿಸಿದ ಶ್ರೀರಾಮುಲು
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣಾ ಅಖಾಡಕ್ಕೆ ಬನ್ನಿ ಎಂಬ ನಾಗೇಂದ್ರ ಸವಾಲನ್ನು ಮಾಜಿ ಸಚಿವ ಶ್ರೀರಾಮುಲು ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ನಾಗೇಂದ್ರ ಜನತಾ ನ್ಯಾಯಾಲಯಕ್ಕೆ ಬನ್ನಿ ಅಂದಿದ್ದಾರೆ. ಜನತಾ ನ್ಯಾಯಾಲಯಕ್ಕೆ ಹೋಗಲು ಈಗಲೇ ಯಾಕೆ ಅಷ್ಟೊಂದು ಅವಸರ ಅವರಿಗೆ? ಈಗ ಅವರೇ ರಾಜೀನಾಮೆ ಕೊಟ್ಟು ಅವರೇ ಸ್ಪರ್ಧಿಸಲಿ. ಆದರೆ, 2028 ಕ್ಕೆ ನಾಗೇಂದ್ರ ಎಲ್ಲಿ ಸ್ಪರ್ಧೆ ಮಾಡ್ತಾರೋ, ನಾನೂ ಅಲ್ಲೇ ನಿಲ್ತೇನೆ ಅಂತ ಶ್ರೀರಾಮುಲು …
Read More »ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ
25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸುತ್ತಿರುವ ಗಣನೀಯ ಸೇವೆ, ಆಯುರ್ವೇದದ ಪ್ರಚಾರ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿಯ ಖ್ಯಾತ ಆಯುರ್ವೇದ ತಜ್ಞ ಡಾ. ರೂಪೇಶ್ ಸಾಳುಂಕೆ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಆಗಸ್ಟ್ 23, 2026ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸಿಗ್ನೇಚರ್ ಮೀಡಿಯಾ …
Read More »ಅ.3 ಮತ್ತು 4ರಂದು ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್ ಸೀಸನ್–04’: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ನಾಲ್ಕನೇ ಬಾರಿಗೆ ‘ಸತೀಶ್ ಅಣ್ಣಾ ಚೆಸ್ ಟೂರ್ನಾಮೆಂಟ್’ ಆಯೋಜಿಸಲಾಗುತ್ತಿದ್ದು, ಅಕ್ಟೋಬರ್ 3 ಮತ್ತು 4ರಂದು ನಗರದ ಮರಾಠಾ ಮಂದಿರದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಚೆಸ್ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ …
Read More »ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್, ಬಸರಿಕಟ್ಟಿಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಹಿಂಡಲಗಾದಲ್ಲಿ ರೇಣುಕಾ ಮಂದಿರದ ಕಾಂಪೌಂಡ್ ವಾಲ್‌ಗೆ ಭೂಮಿಪೂಜೆ ಹಿಂಡಲಗಾ ಗ್ರಾಮದ ಶ್ರೀ ರೇಣುಕಾ ಮಂದಿರದ ಆವರಣಕ್ಕೆ ಕಾಂಪೌಂಡ್ ವಾಲ್ ನಿರ್ಮಿಸುವ ಕಾಮಗಾರಿಗೆ …
Read More »ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ಗೊತ್ತಿದೆ: ಡಿಸಿ ವಿರುದ್ಧ ರೇವಣ್ಣ ಗರಂ
ಹಾಸನ: ದಬ್ಬಾಳಿಕೆ ಮಾಡಲಿ ಯಾವ ರೀತಿ ರಿಪೇರಿ ಮಾಡಬೇಕು ಗೊತ್ತಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೀಸಲು ನಿಗದಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಡಿಸಿಯವರು ಮೀಸಲು ನಿಗದಿ ಸಂಬಂಧ ಯಾಕೆ ತಹಸೀಲ್ದಾರ್‌ಗೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? …
Read More »ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ಪತಿ
ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಗುರುವಾರ …
Read More »ಪಾಕ್‌ನ ಐಎಸ್‌ಐಗೆ ಸೂಕ್ಷ್ಮ ಮಾಹಿತಿ, ಸಿಮ್‌ಗಳನ್ನು ರವಾನಿಸುತ್ತಿದ್ದ ದಂಪತಿ ಅರೆಸ್ಟ್
ನವದೆಹಲಿ: ಪಾಕಿಸ್ತಾನದ ಐಎಸ್‌ಐ (ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಪರ ಬೇಹುಗಾರಿಕೆ ನಡೆಸುತ್ತಿದ್ದ ದಂಪತಿಯನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್ (25) ಮತ್ತು ಆತನ ಪತ್ನಿ ಸಮೀರಾ (21) ಬಂಧಿತ ಆರೋಪಿಗಳು. ಇಬ್ಬರು ಪಾಕಿಸ್ತಾನ ಮೂಲದ ಗುಪ್ತಚರ ಸಂಸ್ಥೆಯ ಸಿಬ್ಬಂದಿ ಜೊತೆ ಸಂಪರ್ಕದಲ್ಲಿದ್ದರು. ಅವರೊಂದಿಗೆ ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಇಬ್ಬರು ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಇಬ್ಬರನ್ನೂ ಭಾರತದ ಸಿಮ್ ಕಾರ್ಡ್ ಪೂರೈಸಲು, ಕಾರ್ಯಕರ್ತರನ್ನು ನೇಮಿಸಿಕೊಳ್ಳಲು ಮತ್ತು ಸೂಕ್ಷ್ಮ ಮಾಹಿತಿಯನ್ನು …
Read More »
Laxmi News 24×7