ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ವಾಟ್ಸ್‌ಆಯಪ್ ಹೊಸ ನೀತಿ: ಕಳವಳ ವ್ಯಕ್ತಪಡಿಸಿದ ಸಂಸದೀಯ ಸಮಿತಿ
ನವದೆಹಲಿ: ವಾಟ್ಸ್ ಆಯಪ್ ನೀತಿಯಲ್ಲಿ ಖಾಸಗಿತನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಸ್ತಾಪಿಸಲಾಗಿರುವ ಬದಲಾವಣೆಗಳ ಕುರಿತು ಸಂಸದೀಯ ಸಮಿತಿಯ ಸದಸ್ಯರು ಕಳವಳ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಎದುರು ವಾಟ್ಸ್‌ಆಯಪ್‌ನ ಪ್ರತಿನಿಧಿ ಹಾಜರಾಗಿದ್ದು, ‘ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಪ್ರಸ್ತಾಪಿಸಲಾಗಿದೆ. ವಾಟ್ಸ್‌ಆಯಪ್ ಚಾಟ್ ಹಾಗೂ ಕರೆಗಳು ಆಗಲೂ ಎಂಡ್-ಟು-ಎಂಡ್ ಎನ್‌ಕ್ರಿಪ್ಟೆಡ್ (ಬೇರೆಯವರು ಸಂದೇಶ ನೋಡಲು ಆಗುವುದಿಲ್ಲ) ಆಗಿರಲಿದೆ ಎಂದಿದ್ದಾರೆ. ಭಾರತೀಯ ಬಳಕೆದಾರರಿಗೆ ಅನುಕೂಲಕರವಲ್ಲದ ಬದಲಾವಣೆಗಳನ್ನು ಪ್ರಸ್ತಾಪಿಸಿರುವ ಬಗ್ಗೆ …
Read More »ಮಗುವಿಗೆ ಜನ್ಮ ನೀಡಿದ ಬಳಿಕ ಮೊದಲ ಬಾರಿಗೆ ಕ್ಯಾಮರಾ ಮುಂದೆ ಕಾಣಿಸಿಕೊಂಡ ನಟಿ ಅನುಷ್ಕಾ ಶರ್ಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿ ಮಗಳು ಜನಿಸಿದ ಸಂತಸದಲ್ಲಿದ್ದಾರೆ. ಮೊದಲ ಮಗುವನ್ನು ಸ್ವಾಗತ ಮಾಡಿದ ವಿರುಷ್ಕಾ ದಂಪತಿ ಮಗಳ ಫೋಟೊವನ್ನು ರಿವೀಲ್ ಮಾಡಿಲ್ಲ. ಕ್ಯಾಮರಾ ಕಣ್ಣಿನಿಂದ ದೂರ ಇರುವ ಅನುಷ್ಕಾ ಮತ್ತು ವಿರಾಟ್ ಇದೀಗ ಮಗಳು ಜನಿಸಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಜನವರಿ 11 ಮಧ್ಯಾಹ್ನ ಅನುಷ್ಕಾ ಶರ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನಿಸಿದ ಬಳಿಕ ವಿರಾಟ್ ಮಗಳು …
Read More »ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಶುಭ ಕೋರಿದ ರಾಹುಲ್ ಗಾಂಧಿ
ನವದೆಹಲಿ: ವಿಶ್ವದ ದೊಡ್ಡಣ್ಣ ಅಮೆರಿಕ ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜೋ ಬೈಡನ್ ಅವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇಂದು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಮೆರಿಕ ಪ್ರಜಾಪ್ರಭುತ್ವದಲ್ಲಿ ಹೊಸ ಅಧ್ಯಾಯದ ಆರಂಭವಾಗಿದೆ ಎಂದು ಅವರು ತಿಳಿಸಿದರು. ಅದುವಲ್ಲದೇ ಭಾರತ ಮೂಲದ ಅಮೆರಿಕದ ಮೊದಲ ಉಪಾಧ್ಯಕ್ಷೆ ಆಗಿ ಪದಗ್ರಹಣ ಮಾಡಿರುವ ಕಮಲಾ ಹ್ಯಾರಿಸ್ ಅವರಿಗೂ ಶುಭಾಶಗಳನ್ನು ಕೋರಿದ್ದಾರೆ. ಅಮೆರಿಕದ …
Read More »ದಾವೂದ್ ಸಹಚರ ಬಂಧನ
ಮುಂಬೈ, ಜ.21- ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕೂ ಪಠಾಣ್ ಎಂಬುವನನ್ನು ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ನವಿ ಮುಂಬೈ ಬಳಿ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‍ಸಿಬಿ) ತಂಡ ಬಂಧಿಸಿದೆ. ಆರೋಪಿ ಖಾನ್‍ನಿಂದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ಮಾಫಿಯ ಡಾನ್ ಕರೀಂ ಲಾಲಾ ಸಂಬಂಧಿಯೂ ಆಗಿರುವ ಖಾನ್‍ನನ್ನು ಖಚಿತ ಮಾಹಿತಿ ಮೇಲೆ ಎನ್‍ಸಿಬಿ ವಿಭಾಗ ನಿರ್ದೇಶಕ ಸಮೀರ್ ವಾಂಖೆಡೆ ತಂಡ ಬಲೆ ಬೀಸಿ ಬಂಧಿಸಿದೆ.ಖಾನ್ …
Read More »ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಗೃಹ ಸಚಿವ ಬೊಮ್ಮಾಯಿ – ಮಾಜಿ ಸಿಎಂ ಹೆಚ್ಡಿಕೆ ಭೇಟಿ
ಬೆಂಗಳೂರು : ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್.ಟಿ. ನಗರದ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ, ಅರ್ಧ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಕ್ಷೇತ್ರದ ಕೆಲ ಪೋಸ್ಟಿಂಗ್ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜಕೀಯ ಬೆಳವಣಿಗೆ ಬಗ್ಗೆ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ
ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ. ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಇಂತಹ ಮಾಜಿ ಸಚಿವ …
Read More »ರಾಗಿಣಿಗೆ 140 ದಿನಗಳ ಸೆರೆವಾಸದ ಬಳಿಕ ಬಿಡುಗಡೆ ಭಾಗ್ಯ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆ.4, 2021ರಂದು ಬಂಧಿಸಿದ್ದರು. ಸೆ.14ರಂದು ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಲವುಬಾರಿ ಹೈಕೋರ್ಟ್ ಗೆ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಜಾಮೀನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಗಿಣಿ ಪರ …
Read More »ಖಾತೆ ಅದಲು-ಬದಲು ಮಾಡಿ ಶಾಕ್ ಕೊಟ್ಟ ಸಿಎಂ,ಅನೇಕಸಚಿವರು ಅಸಮಾಧಾನ “ಜೆ.ಸಿ.ಮಾಧುಸ್ವಾಮಿ ಸಚಿವ ಸ್ಥಾನಕ್ಕೇ ರಾಜೀನಾಮೆ”?
ಬೆಂಗಳೂರು, ಜ.21- ನಿರೀಕ್ಷಿತ ಖಾತೆಗಳು ಸಿಗದಿರುವುದು ಹಾಗೂ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅತೃಪ್ತಗೊಂಡಿದ್ದು, ಭಿನ್ನಮತ ಸೋಟಗೊಂಡಿದೆ. ಬಿಜೆಪಿ ಸರ್ಕಾರದಲ್ಲಿ ಟ್ರಬಲ್ ಶೂಟರ್ ಎಂದೇ ಹೇಳಲಾಗಿರುವ ಜೆ.ಸಿ.ಮಾಧುಸ್ವಾಮಿ ತಮ್ಮ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಬದಲಾಯಿಸಿದಕ್ಕೆ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದೀಗ ಅವರನ್ನು ಮನವೊಲಿಸುವ ಪ್ರಯತ್ನ ಮುಂದುವರೆದಿದ್ದು, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿಗಣೇಶ್, ಮಸಾಲೆ …
Read More »