Breaking News

Uncategorized

ಕಳ್ಳರ ಕೈಚಳಕ, ಹಣದ ಸಮೇತ ಎಂಟಿಎಂ ಯಂತ್ರ ಮಾಯ..!

ತುಮಕೂರು,ಜ.19- ಎಂಟಿಎಂ ಕೇಂದ್ರವೊಂದಕ್ಕೆ ನುಗ್ಗಿರುವ ಕಳ್ಳರು ಹಣದ ಸಮೇತ ಎಟಿಎಂ ಯಂತ್ರವನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಹೆಗ್ಗೆರೆಯಲ್ಲಿ ನಡೆದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಇಂಡಿಯನ್ ಓವರ್‍ಸಿಸ್ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಈ ಕಳ್ಳತನ ನಡೆದಿದೆ. ಮಧ್ಯರಾತ್ರಿ ನಾಲ್ಕು ಚಕ್ರದ ವಾಹನದ ಬಂದಿರುವ ಕಳ್ಳರು ಎಟಿಎಂ ಕೇಂದ್ರಕ್ಕೆ ನುಗ್ಗಿ ಚಾಣಾಕ್ಷತನದಿಂದ ಹಣದ ಸಮೇತ ಎಟಿಎಂ ಯಂತ್ರವನ್ನು ಕದ್ದೊಯ್ದಿದ್ದಾರೆ. ಬ್ಯಾಂಕ್ ಬಳಿಯೇ ಎಟಿಎಂ ಕೇಂದ್ರ ಹಾಗೂ …

Read More »

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.  ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್​ ಇನ್​ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. …

Read More »

ರೈತ ಸಂಘಟನೆ – ಕೇಂದ್ರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. . ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ …

Read More »

ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ …

Read More »

ರಾಜ್ಯದ 25 DYSP ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ  ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21

Read More »

ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್

ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ‌ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …

Read More »

ಮಹಾನಗರಪಾಲಿಕೆ: ಮೀಸಲಾತಿ ಪ್ರಕಟ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ. 2018ರ ಆ.10ರಂದು ಹೊರಡಿಸಲಾಗಿದ್ದ ಅಧಿಸೂಚನೆ ರದ್ದುಪಡಿಸಲಾಗಿದೆ. ಈಗ ಕರಡು ಮೀಸಲಾತಿಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ಲಿಖಿತವಾಗಿ ಕಾರಣಸಹಿತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನಗರಪಾಲಿಕೆಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಹೈಕೋರ್ಟ್ ಈಚೆಗೆ ನಿರ್ದೇಶನ …

Read More »

ಇಂದಿನಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ

ಬೆಂಗಳೂರು,ಜ.18- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಣಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಈ ಆದೇಶ ಹೊರಡಿಸಿದ್ದು, ರಾಜ್ಯಪತ್ರ ಪ್ರಕಟಿಸಲಾಗಿದೆ. ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆಒಂದು ಕಡೆಯಿಂದ ಮತ್ತೊಂದು ಕಡೆಗೆ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ :ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ಮಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-೧೯ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …

Read More »

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ : ಮಹಾರಾಷ್ಟ್ರ ಸಚಿವ ಏಕ್ ನಾಥ್ ಶಿಂಧೆ ಉದ್ಧಟತನ

ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಬೆನ್ನಲ್ಲೇ ಸಚಿವ ಏಕನಾಥ್ ಶಿಂಧೆ ಮತ್ತೆ ಗಡಿ ವಿವಾದವನ್ನು ಕೆಣಕಿದ್ದಾರೆ. ಎಂಇಎಸ್ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉದ್ಧಟತನ ಹೇಳಿಕೆ ನೀಡಿರುವ ಸಚಿವ ಶಿಂಧೆ, ಬೆಳಗಾವಿ ಗಡಿಭಾಗ ಮಹಾರಾಷ್ಟ್ರಕ್ಕೆ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಬೆಳಗಾವಿ ಸೇರಿ ಮರಾಠಿ ಭಾಷಿಕ ಗಡಿ ಪ್ರದೇಶವನ್ನು ಮಹಾರಾಷ್ಟ್ರ …

Read More »