ಮೂಲ ಬಿಜೆಪಿ ಗರನ್ನು ಕಡೆಗಣಿಸಿದ ಸಂಜಯ್ ಪಾಟೀಲ್ ವಿರುದ್ದ ಹರಿಹಾಯ್ದ ದೀಪಾ ಕುಡಚಿ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಮೂಲ ಬಿಜೆಪಿಗರನ್ನು ಕಡೆಗಣಿಸಿ ನಿನ್ನೆ ಮೊನ್ನೆ ಬಂದವರಿಗೆ ಮಣೆ ಹಾಕಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮತ್ತು ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್ ವಿರುದ್ದ ಕರ್ನಾಟಕ ನೀರು ಸರಬರಾಜು ನಿರ್ದೇಶಕಿ ದೀಪಾ ಕುಡುಚಿ ಗಂಭೀರ ಆರೋಪ ಮಾಡಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
Read More »ಚಲಿಸುತ್ತಿದ್ದ ಬಸ್‌ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ
ನವದೆಹಲಿ, ಜ.17- ಚಲಿಸುತ್ತಿದ್ದ ಬಸ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು , 6 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ತಾನದ ಜೊಲೊರೇ ಜಿಲ್ಲೆಯಲ್ಲಿ ನಡೆದಿದೆ. ಮಹೇಶ್‍ಪುರ ಗ್ರಾಮದ ಬಳಿ ಶನಿವಾರ ರಾತ್ರಿ ದುರ್ಘಟನೆ ನಡೆದಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಚಾಲಕ ದಾರಿ ತಪ್ಪಿದ್ದು, ಹಳ್ಳಿಯ ರಸ್ತೆಯಲ್ಲಿ ಬಸ್ ಚಾಲನೆ ಮಾಡಿದ್ದಾನೆ. ಹೊಸ ದಾರಿಯಲ್ಲಿ ವಿದ್ಯುತ್ ತಂತಿ ಇರುವ ಬಗ್ಗೆ ಮಾಹಿತಿ ಇಲ್ಲದೆ ಅವಘಡ ಸಂಭವಿಸಿದೆ. ನೇತಾಡುತ್ತಿದ್ದ ವಿದ್ಯುತ್ ತಂತಿ …
Read More »ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ
ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ …
Read More »BIG NEWS : ಇಂದು ಸಂಜೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ?
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಅಮಿತ್ ಶಾ ಅವರು ದೆಹಲಿಗೆ ವಾಪಸ್ಸಾಗಲಿದ್ದು, ನಂತರ ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. …
Read More »ಪತ್ನಿಯ ಅಶ್ಲೀಲ, ಫೋಟೋ ವಿಡಿಯೋ ತೆಗೆದು ಕಿರುಕುಳ
ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಕಿರುಕುಳ ನೀಡಿ ಬೆದರಿಕೆ ಹಾಕುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಫ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆ ದೂರು ನೀಡಿದ್ದು, ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 2019 ರಲ್ಲಿ ದಂಪತಿಗೆ ಮದುವೆಯಾಗಿದ್ದು ಆರಂಭದಲ್ಲಿ ಅನ್ಯೋನ್ಯವಾಗಿದ್ದ ಪತಿರಾಯ ನಂತರದಲ್ಲಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಲ್ಲೆ ಮಾಡುತ್ತಿದ್ದ ಆರೋಪಿ ಪತ್ನಿ ಅಕ್ರಮ ಸಂಬಂಧ …
Read More »ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’
ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ನಟಿಸಿದ್ದು, ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಲ್ಲಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
Read More »ಜುಲೈ ಅಥವಾ ಆಗಸ್ಟ್‌ನಲ್ಲಿ ಚಾರ್ಲಿ ದರ್ಶನ ಗ್ಯಾರೆಂಟಿ
ಅವನೇ ಶ್ರೀಮನ್ನಾರಾಯಣ’ ಚಿತ್ರದ ನಂತರ ನಟ ರಕ್ಷಿತ್ ಶೆಟ್ಟಿ, “777 ಚಾರ್ಲಿ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಇದರ ನಡುವೆ “ಸಪ್ತಸಾಗರದಾಚೆ ಎಲ್ಲೋ’, “ಪುಣ್ಯಕೋಟಿ’ ಹೀಗೆ ಮೂರ್‍ನಾಲ್ಕು ಚಿತ್ರಗಳು ರಕ್ಷಿತ್ ಶೆಟ್ಟಿ ಕೈಯಲ್ಲಿದೆ. ಸದ್ಯಕ್ಕೆ ರಕ್ಷಿತ್ ಶೆಟ್ಟಿ ಗಮನ “777 ಚಾರ್ಲಿ’ಯ ಕಡೆಗಿರುವುದರಿಂದ, ಸುಮಾರು ಒಂದೂವರೆ ವರ್ಷದಿಂದ ರಕ್ಷಿತ್ ಶೆಟ್ಟಿ ಆಯಂಡ್ ಟೀಮ್ “777 ಚಾರ್ಲಿ’ಯ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆದರೆ ಹಗಲಿರುಳು “777 ಚಾರ್ಲಿ’ಯ ಕೆಲಸಗಳು ನಡೆಯುತ್ತಿದ್ದರೂ, ಈ ಚಿತ್ರ ತೆರೆಗೆ ಯಾವಾಗ …
Read More »ಗದಗ ಜಿಲ್ಲೆಯಲ್ಲಿ ವಿಚಿತ್ರ ರೋಗ ಬಾಧೆ, ಕಾಯಿಲೆಯಿಂದ ಮಲಗಿರುವ ರೋಗಿಗಳು; ಆತಂಕಗೊಂಡ ಗ್ರಾಮಸ್ಥರು
ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ನಿಗೂಢವಾದ ಕಾಯಿಲೆ ಇಲ್ಲಿನ ಜನರ ನಿದ್ದೆಗೆಡಿಸಿದೆ. ಸುಮಾರು 200ಕ್ಕೂ ಹೆಚ್ಚು ಜನರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ ಇಬ್ಬರು, ಮೂವರು ಹಾಸಿಗೆ ಹಿಡಿದಿದ್ದಾರೆ. ಕೈಕಾಲು ಬೇನೆ, ತಲೆ ಸುತ್ತು, ಪ್ರಜ್ಞಾಹೀನತೆ, ಕಣ್ಣು ಉರಿ, ಜ್ವರ ನೆಗಡಿ, ಹೊಟ್ಟೆಯಲ್ಲಿ ಸಂಕಟವಾಗುವುದು ಹೀಗೆ ನಾನಾ ರೀತಿಯ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ 10 ರಿಂದ 12 …
Read More »ಹಿಂದೂಗಳನ್ನು ನಾಶ ಮಾಡುತ್ತೇನೆ ಎನ್ನುವವರಿಗೆ ಹೆಚ್ಚು ಅನುದಾನ; ಹಿಂದೂ ರಕ್ಷಕರಿಗೆ ಭದ್ರತೆ ಹಿಂದಕ್ಕೆ; ಸಿಎಂ ವಿರುದ್ಧ ಮತ್ತೆ ಯತ್ನಾಳ ಕಿಡಿ
ವಿಜಯಪುರ; ತಮಗೆ ನೀಡಲಾಗಿದ್ದ ಭದ್ರತೆ ಹಿಂಪಡೆದ ವಿಚಾರವಾಗಿ ಯತ್ನಾಳ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಫುಲ್ ಗರಂ ಆಗಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆಯ ಪಕ್ಕದಲ್ಲಿರುವ ಕುಡಿಯುವ ನೀರಿನ ನೂತನ ಘಟಕ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಕೇಳಿದರೆ ಹಣ ಇಲ್ಲ ಅಂತಾರೆ. ಆದರೆ, ಜಮೀರ ಅಹ್ಮದ್ ಖಾನ್ ಕೇಳಿದರ ಹಣ ನೀಡುತ್ತಾರೆ. ನಾಲ್ಕೈದು ಜನ …
Read More »ಪುರುಷರಲ್ಲಿ ಹೆಚ್ಚುತ್ತಿರುವ ಲೈಂಗಿಕ ಸಮಸ್ಯೆ, ಪರಿಹಾರವೇನು?
ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಜೀವನಶೈಲಿಯಾಗಿದೆ. ಒತ್ತಡ, ಖಿನ್ನತೆ, ದೈಹಿಕ ವ್ಯಾಯಾಮ ಇಲ್ಲದಿರುವುದು ಈ ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈ ಸಂಬಂಧ ಲೈಂಗಿಕ ತಜ್ಞರನ್ನು ಸಂಪರ್ಕಿಸುವವರ ಪ್ರಮಾಣ ಹೆಚ್ಚುತ್ತಿದೆ. ಲೈಂಗಿಕ ಸಮಸ್ಯೆಯಲ್ಲಿ ಎರೆಕ್ಟೈಲ್ ಡಿಸ್‌ಫಂಕ್ಷ ನ್ ಅಥವಾ ಶಿಶ್ನ ನಿಮಿರುವಿಕೆಯ ಸಮಸ್ಯೆ ಮುಖ್ಯವಾದದ್ದು. ಲೈಂಗಿಕವಾಗಿ ಸಕ್ರಿಯರಾಗಿದ್ದಲ್ಲಿ ವಿವಾಹ ಪೂರ್ವದಲ್ಲಿಯೇ ಈ ತೊಂದರೆ ಕಾಣಿಸಬಹುದು ಅಥವಾ ವಿವಾಹದ ನಂತರ ಲೈಂಗಿಕ …
Read More »