ಬೆಂಗಳೂರು: ರಾಜ್ಯ ಹೈಕೋರ್ಟ್, ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ್ದು, ನಗರದ ಟರ್ಫ್ ಕ್ಲಬ್ RTI ವ್ಯಾಪ್ತಿಗೆ ಬರುತ್ತದೆ ಎಂದು ಮಹತ್ವದ ತೀರ್ಪ ನೀಡಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಏಕಸದಸ್ಯ ಪೀಠ, ‘ರಾಜ್ಯ ಸರ್ಕಾರ ಪರೋಕ್ಷವಾಗಿ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ …
Read More »ದೇಶದ ಪ್ರಮುಖ ನಗರಗಳಲ್ಲಿ ಜನವರಿ 16ರ ಪೆಟ್ರೋಲ್, ಡೀಸೆಲ್ ದರ
ನವದೆಹಲಿ, ಜನವರಿ 16: ಸರ್ಕಾರಿ ತೈಲ ಕಂಪನಿಗಳು ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 84.70 ರೂ. ಮತ್ತು ಡೀಸೆಲ್ ಲೀಟರ್‌ಗೆ 74.88 ರೂ. ನಿಗದಿಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ …
Read More »ಐಆರ್‌ಬಿ ಆಡಳಿತ ಭವನ ಉದ್ಘಾಟನೆಗೆ ಕ್ಷಣಗಣನೆ
ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿರುವ ವರ್ಚ್ಯುವೆಲ್ ವೇದಿಕೆ ಮೂಲಕ, ವಿಜಯಪುರ ಸಮೀಪದ ಅರಕೇರಿಯಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ರಿಸರ್ವ್ ಬಟಾಲಿಯನ್ನ (ಐಆರ್‌ಬಿ) ಆಡಳಿತ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐಆರ್‌ಬಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. 2010ರಲ್ಲಿ ಆರಂಭವಾದ ರಾಜ್ಯದ ಎರಡನೇ ಐಆರ್ ಬಿ ಸೆಂಟರ್ ಇದಾಗಿದ್ದು, 100 ಎಕರೆ …
Read More »ಬಿಜೆಪಿಯ ಡಾ.ಶರ್ಮಾ, ಟಿಎಂಸಿಯ ಆರ್.ಚಟರ್ಜಿ ಲಸಿಕೆ ಪಡೆದ ಮೊದಲ ರಾಜಕಾರಣಿಗಳು
ನವದೆಹಲಿ: ಉತ್ತರ ಪ್ರದೇಶದ ಬಿಜೆಪಿ ಸಂಸದ ಡಾ.ಮಹೇಶ್ ಶರ್ಮಾ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ರವೀಂದ್ರನಾಥ್ ಚಟರ್ಜಿ ಅವರು ಕೋವಿಡ್ ಲಸಿಕೆ ಪಡೆದ ಮೊದಲ ರಾಜಕಾರಣಿಗಳಾಗಿದ್ದಾರೆ. ತರಬೇತಿ ಪಡೆದ ವೈದ್ಯರೂ ಆಗಿರುವ ಡಾ.ಶರ್ಮಾ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ನೋಯ್ಡಾ ಸೆಕ್ಟರ್ 27ರ ಆಸ್ಪತ್ರೆಯೊಂದರಲ್ಲಿ ಲಸಿಕೆ ಹಾಕಿಸಿಕೊಂಡರು. ಬಳಿಕ ಅರ್ಧ ಗಂಟೆ ಅವರ ಆಸ್ಪತ್ರೆ ವೈದ್ಯರ ನಿಗಾದಲ್ಲಿ ಇದ್ದರು ಎಂದು ವರದಿಯಾಗಿದೆ. ‘ಒಬ್ಬ ವೈದ್ಯನಾಗಿ ಕೊರೊನಾ ವೈರಸ್ …
Read More »ಬಿಜೆಪಿ ಜನಸೇವಕ ಸಮಾವೇಶದ ವಿರುದ್ಧ ನ್ಯಾಯಾಲಯಕ್ಕೆ ಹೋಗುವೆ’
ಬೆಳಗಾವಿ: ಕೋವಿಡ್-19 ನಡುವೆಯೂ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿರುವ ‘ಜನಸೇವಕ ಸಮಾವೇಶ ಸಮಾರೋಪ’ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಮತ್ತು ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ‘ಸಮಾವೇಶ ರದ್ದುಪಡಿಸಬೇಕು ಅಥವಾ ಕೋವಿಡ್ ಮಾರ್ಗಸೂಚಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ. ಆದರೆ, ಈವರೆಗೂ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. …
Read More »ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ.
ಪುಣೆ: ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಿ ಲಸಿಕೆಗಾಗಿ ಬರುವ ಜನರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಭಾರತವು ಅತೀ ದೊಡ್ಡ ಲಸಿಕಾ ದಿನವನ್ನು ಆಚರಿಸಲು ಮುಂದಾಗುತ್ತಿದ್ದಂತೆ ಪುಣೆಯ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಮುಂಭಾಗ ನೀಲಿ ಮತ್ತು ಬಿಳಿ ಬಣ್ಣದ ಹೂವಿನ ರಂಗೋಲಿ ಬಿಡಿಸಿ ಮಧ್ಯದಲ್ಲಿ ಸ್ವಾಗತ ಎಂದು ಬರೆದು ಲಸಿಕೆ ಹಾಕಿಸಿಕೊಳ್ಳಲು ಬರುವ ಎಲ್ಲರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. …
Read More »ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ
ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ ಬೆಂಗಳೂರು: ಯಡಿಯೂರಪ್ಪ ಅವರು ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿಲ್ಲ. ಆಪೆರೇಷನ್ ಕಮಲ, ಹಣದ ಪ್ರಭಾವದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ಆಪರೇಷನ್ ಕಮಲದ ಜನಕರಾಗಿದ್ದಾರೆ. ಬಿಎಸ್‍ವೈ ಸುಳ್ಳು ಹೇಳಿ, ಎಂಎಲ್‍ಎಗಳನ್ನು ಕೊಂಡುಕೊಂಡು, 9 ಕೋಟಿ ಹಣವನ್ನು ಖರ್ಚು ಮಾಡಿ ಮುಖ್ಯಮಂತ್ರಿ ಆಗಿದ್ದಾರೆ. ಸ್ವತಃ ಅವರ ಪಕ್ಷದವರೇ ಹಣ …
Read More »ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಸಫಾರಿ ವಾಹನದ ಮೇಲೆ ಬಂಗಾಳ ಹುಲಿ ದಾಳಿ; ಬೆದರಿದ ಪ್ರವಾಸಿಗರು
ಆನೇಕಲ್: ಅವರು ಕಾನನ ನಡುವೆ ವನ್ಯಜೀವಿಗಳನ್ನು ಕಂಡು ಖುಷಿಪಡಲು ಅಲ್ಲಿಗೆ ತೆರಳಿದ್ದರು. ಆನೆ, ಜಿಂಕೆ, ಕಾಡೆಮ್ಮೆ, ಕರಡಿ ಸಿಂಹ ಸೇರಿದಂತೆ ಅಪರೂಪದ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಮುಂದೆ ಸಾಗಿದ್ದರು. ಅಷ್ಟರಲ್ಲಿ ಎದುರಾಯ್ತು ನೋಡಿ ವ್ಯಾಘ್ರ ಹುಲಿ. ಎಂತಹವರನ್ನು ಒಂದು ಕ್ಷಣ ತನ್ನತ್ತ ಸೆಳೆಯುವ ವನ್ಯಜೀವಿ. ಹಾಗಾಗಿ ಹುಲಿಯನ್ನು ಸಮೀಪದಿಂದ ನೋಡಲು ಅವರು ವಾಹನ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಎಷ್ಟೇ ಪ್ರಯತ್ನಪಟ್ಟರು ವಾಹನ ಸ್ಟಾರ್ಟ್ ಆಗಲಿಲ್ಲ. ಇದನ್ನು ಕಂಡು ವ್ಯಾಘ್ರಗೊಂಡ ಹುಲಿರಾಯ ವಾಹನದ …
Read More »ಲಸಿಕೆ ಬಗ್ಗೆ ವದಂತಿ ಹಬ್ಬಿಸಿದರೆ ಹುಷಾರ್ : ಪ್ರಧಾನಿ ಮೋದಿ ಎಚ್ಚರಿಕೆ
ನವದೆಹಲಿ,ಜ.16- ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಇದು ವಿಜ್ಞಾನಿಗಳು ಕಳೆದ ಹಲವು ತಿಂಗಳುಗಳಿಂದ ಅಹೋರಾತ್ರಿ ಕಠಿಣ ಪರಿಶ್ರಮ ವಹಿಸಿ ಲಸಿಕೆಯನ್ನು ಆವಿಷ್ಕಾರ ಮಾಡಿದ್ದಾರೆ. ನಾನು ದೇಶದ ಜನತೆಯಲ್ಲಿ ಸ್ಪಷ್ಟವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಗತ್ಯವಿರುವವರು ಲಸಿಕೆಯನ್ನು ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಿ ಎಂದು …
Read More »ಸಿಡಿ ಬೆದರಿಕೆ ಸರಿಯಲ್ಲ” : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಜ.16- ಸಿಡಿ ವಿಚಾರ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೆದರಿಸುವುದು ಸರಿಯಲ್ಲ. ಅವರಲ್ಲಿ ಸಿಡಿ ಇಲ್ಲ. ಸುಖಾಸುಮ್ಮನೆ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸ್ಥಾನ ಸಿಗದೆ ಇರುವವರು ತಮ್ಮ ಅಭಿಪ್ರಾಯವನ್ನು ಪಕ್ಷದ ಉಸ್ತುವಾರಿ, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಇದನ್ನು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಡಿ ಎಂಬುದು ಇಲ್ಲವೇ …
Read More »