ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ 25 ವರ್ಷಗಳ ಹಿಂದೆ ಮಾರಾಟ ಮಾಡಿದ ನಿವೇಶನಗಳನ್ನು ಮರಳಿ ವಶಕ್ಕೆ ಪಡೆಯುವ ಗೂಂಡಾ ವರ್ತನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ತಮಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಪೀರನವಾಡಿಯ 265ಕ್ಕೂ ಹೆಚ್ಚು ನಿವೇಶನಗಳ ಅಸಲಿ ಮಾಲೀಕರು ಮತ್ತು ಕುಟುಂಬದವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪೀರನವಾಡಿಯ 265ಕ್ಕೂ ಹೆಚ್ಚು …
Read More »3000 ರೂ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ
ಬೆಳಗಾವಿ: ಚಿಕ್ಕೋಡಿಯ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ನೌಕರ ಚೇತನ್ ಹಂಜಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಥಣಿಯ ಬಾಳಪ್ಪ ಸಿದ್ದಪ್ಪ ಬನ್ನಟ್ಟಿ ಎಂಬುವವರಿಗೆ ಅಥಣಿ ತಾಲೂಕಿನ ಶಿವನೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ನೇದ್ದರ ಹೊಸ ಬೈಲಾ ಅನುಮೋದನೆ ಮಾಡಿ ಸ್ವೀಕೃತಿ ನೀಡಲು ಚೇತನ್ 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಾಳಪ್ಪ ಎಂಬುವವರು ಎಸಿಬಿಗೆ …
Read More »ನರೇಗಾ ಯೋಜನೆ ಲೇವಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು
ವಯನಾಡು: ಪ್ರಧಾನಿ ಮೋದಿ ಅವರು, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ನರೇಗಾ ಯೋಜನೆಯನ್ನು ಅಪಹಾಸ್ಯ ಮಾಡಿದ್ದರು. ಯುಪಿಎ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೋವಿಡ್ ಸಮಯದಲ್ಲಿ ದೇಶದ ಜನರ ‘ಸಂರಕ್ಷಕ’ ಪಾತ್ರವನ್ನು ವಹಿಸಿದೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಪುಥಡಿ ಗ್ರಾಮ ಪಂಚಾಯಿತಿಯಲ್ಲಿ ಕುಟುಂಬಶ್ರೀ ಸಂಗಮಮ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ …
Read More »ನೋಟಿಸ್ ಕೊಟ್ಟರೆ ಅಂಜುವ ಮಗ ನಾನಲ್ಲ:ಕುರ್ಚಿ ಖಾಲಿ ಮಾಡಿಸಬೇಕಾಗುತ್ತೆ; ಸಿಎಂಗೆ ಯತ್ನಾಳ್ ತಿರುಗೇಟು
ಬೆಂಗಳೂರು: ನೋಟಿಸ್ ಕೊಟ್ಟರೆ ಅಂಜುವ ಮಗ ನಾನಲ್ಲ. ನನಗೆ ನೋಟಿಸ್ ಕೊಟ್ಟರೂ ನನ್ನ ಬಾಯಿ ಬಂದ್ ಆಗುವುದಿಲ್ಲ. ನಾನು ಯಾರಿಗೂ ಪಂಪ್ ಹೊಡೆಯೋ ರಾಜಕಾರಣಿ ಅಲ್ಲ. ನನ್ನನ್ನು ಅಂಜಿಸುತ್ತೇನೆ ಎಂದು ತಿಳಿದಿದ್ದರೆ, ಆದಷ್ಟು ಬೇಗ ಕುರ್ಚಿ ಖಾಲಿ ಮಾಡಿಸಬೇಕಾಗುತ್ತೆ ಎಂದು ಶಾಸಕ ಬಸಗೌಡ ರಾ.ಪಾಟೀಲ್ ಯತ್ನಾಳ್ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ನೇರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಬಿಎಸ್ವೈ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2ಎ …
Read More »ವಿದ್ಯಾರ್ಥಿಗಳು ಬಸ್‌ಪಾಸ್ ಇದ್ದರೂ ಹಣ ನೀಡಿ ಟಿಕೆಟ್ ಖರೀದಿಸಬೇಕಾದ ಪರಿಸ್ಥಿತಿ
ಚಿಂತಾಮಣಿ: ಪ್ರಸಿದ್ಧ ವಾಣಿಜ್ಯ ಮತ್ತು ಶೈಕ್ಷಣಿಕ ಕ್ಷೇತ್ರ ಚಿಂತಾಮಣಿಯ ಗ್ರಾಮೀಣ ಮತ್ತು ಪಟ್ಟಣ ವಿದ್ಯಾರ್ಥಿಗಳು ಬಸ್‌ಪಾಸ್ ಇದ್ದರೂ ಹಣ ನೀಡಿ ಟಿಕೆಟ್ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಕೇಂದ್ರ ಹಾಗೂ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ತಾಲೂಕಿನ ಬಸ್ ನಿಲ್ದಾಣಕ್ಕೆಬರುವ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಳಿ ಪಾಸ್ ಇದ್ದರೂ ಹಣ ಪಡೆದು ಟಿಕೆಟ್ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಅಳಲೇನು?: ತಾಲೂಕಿನಿಂದ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರಿಗೆವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ತೆರಳುತ್ತಾರೆ.ಆದರೆ, ಬಸ್ ನಿಲ್ದಾಣದಲ್ಲಿ …
Read More »ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ಷಡ್ಯಂತ್ರ..!
ಬೆಂಗಳೂರು, ಫೆಬ್ರವರಿ 22: ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ಷಡ್ಯಂತ್ರ..! ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಟಟ್ಟು ದಂಡ ಎಂಬುದು ದಂಡದ ಹೆಸರಿನಲ್ಲಿ ಮಾಡುತ್ತಿರುವ ದಂಧೆ..! ವಾಸ್ತವದಲ್ಲಿ ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ದಂಡ ಹಾಕಲಿಕ್ಕೆ ಕಾನೂನಿನಲ್ಲಿ ಅವಕಾಶವೇ ಇಲ್ಲ! ಸಂವಿಧಾನದತ್ತವಾಗಿ ಪ್ರಜೆಗಳಿಗೆ ಸಿಕ್ಕಿರುವ ಮೂಲಭೂತ ಹಕ್ಕುಗಳ ದಮನ. ಇದರ ವಿರುದ್ಧ ಜನರು ಧ್ವನಿಯೆತ್ತದಿದ್ದರೆ ಭವಿಷ್ಯದ ದಿನಗಳು ಇನ್ನೂ ಕರಾಳವಾಗಲಿವೆ..! ಫಾಸ್ಟ್ಯಾಗ್ ಕಡ್ಡಾಯ, ಫಾಸ್ಟ್ಯಾಗ್ ಇಲ್ಲದಿದ್ದರೆ ದಂಡ ವಿಧಿಸುತ್ತಿರುವ ಖಾಸಗಿ ಕಂಪನಿಗಳ ನೀತಿ, …
Read More »ಮಠಾಧಿಪತಿಗಳೇ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ : ವಾಟಾಳ್ ನಾಗರಾಜ್
ಮೈಸೂರು : ರಾಜ್ಯದಲ್ಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಮಠಾಧೀಶರ ವಿರುದ್ಧ ವಾಟಾಳ್ ನಾಗರಾಜ್ ಗರಂ ಆಗಿದ್ದು, ಇಂದು ಮೈಸೂರಿನ ಹಾಡಿರ್ಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಮೀಸಲಾತಿಗಾಗಿ ಹೋರಾಟ ಮಾಡಿ ರಾಜ್ಯವನ್ನು ಜಾತಿಗೆ ಸೀಮಿತಗೊಳಿಸಬಾರದು. ಮಠಾಧಿಪತಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ಮಠದಲ್ಲಿಯೇ ಇರಿ. ಮೀಸಲಾತಿ ಹಾಗೂ ಜಾತಿಗಾಗಿ ಹೋರಾಟಕ್ಕೆ ಬಂದರೆ ನಿಮ್ಮ ಶಕ್ತಿ ಕುಂದುತ್ತದೆ ಎಂದು ಮನವಿ ಮಾಡಿಕೊಂಡರು. …
Read More »ಪತಂಜಲಿ ಕೊರೊನಿಲ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು
ಪತಂಜಲಿ ಸಂಸ್ಥೆಯು ಕೊರೊನಾ ವೈರಸ್ ಸೋಂಕು ನಿಗ್ರಹಕ್ಕೆಂದು ಹೊರತಂದಿರುವ ಕೊರೊನಿಲ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆಯುರ್ವೇದ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಿಲ್ಗೆ ಮಾನ್ಯತೆ ನೀಡಿದೆ ಎಂದು ವೈರಲ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಕೋವಿಡ್-19 ತಡೆಯಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೊನಿಲ್ ಸಹಕಾರಿ ಎಂದು ಪತಂಜಲಿ ಸಂಸ್ಥೆ ಹೇಳಿತ್ತು. ಇದಕ್ಕೆ ಆಯುಷ್ …
Read More »ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ
ಬೆಳಗಾವಿ: ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ ತೆಗೆಯುತ್ತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮ ಕೂಡ ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ಧಮ್ಕಿ ಹಾಕಿ ಪತ್ರವೊಂದನ್ನು ರವಾನಿಸಿದೆ. ಮಿರಜದ ಶಾಸ್ತ್ರಿ ವೃತ್ತದಲ್ಲಿ ಬಸ್ಸುಗಳ ನಿಲುಗಡೆಯೇ ಇಲ್ಲ. ಅಲ್ಲಿಗೆ ಬರುವ ಕರ್ನಾಟಕದ ” ಪರ್ಮಿಟ್ ಇಲ್ಲದ” ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತವೆ. ಇದರಿಂದಾಗಿ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ …
Read More »ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ …
Read More »
Laxmi News 24×7