ಹುಕ್ಕೇರಿ : ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ – ಅಲಂ ಶಾ ಮಕಾನದಾರ. ಹುಕ್ಕೇರಿ ತಾಲೂಕಿನ ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಕರ್ನಾಟಕ ರಾಜ್ಯ ಸರಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಅದ್ಯಕ್ಷ ಅಲಮಷಾ ಮಕಾನದಾರ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮುಸ್ಲಿಂ ನೌಕರರ ಚಿಕ್ಕೋಡಿ ಜಿಲ್ಲಾ ಸಂಘದ ಸಭೆಯಲ್ಲಿ ನೂತನವಾಗಿ ಹುಕ್ಕೇರಿ ಸಂಘದ ಅದ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು. …
Read More »ಡಾಕ್ಟರ್ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ
ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ರಾಯದುರ್ಗದ …
Read More »ಬಿಮ್ಸ್ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ
ಬಳ್ಳಾರಿ, ಡಿಸೆಂಬರ್ 06: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಒಂಬತ್ತೂ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. IV ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ. ಒಂಬತ್ತೂ ಗರ್ಭಿಣಿಯರಿಗೆ ನವೆಂಬರ್ 09 ರಂದೇ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ಹೆರಿಗೆ ಮಾಡಲಾಗಿತ್ತು. …
Read More »ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ
ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು. ಡಿಸೆಂಬರ್ 6 ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ತಿಥಿ. ಈ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಈ …
Read More »ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್ಎನ್ ಸುಬ್ಬಾರೆಡ್ಡಿ
ಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್ ಕಮಲದಲ್ಲಿ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆಯಿಂದ ಇದ್ದೆ. ಮುಂದೆ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ನಾನು …
Read More »ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್
ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ. ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ …
Read More »ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು
ಡಿಸೆಂಬರ್ 04: ನೊಂದ, ಸಂತ್ರಸ್ತ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬಿ ಅವರ ಬಾಳಿಗೆ ಬೆಳಕಾಗಬೇಕಾದ ಸರ್ಕಾರಿ ಬಾಲಕಿಯರ ಮಂದಿರವೊಂದು (Government Girls Bala Mandira) ಭೂ ಲೋಕದ ನರಕವಾಗಿದ್ದು, ಅಲ್ಲಿರುವ ಮಕ್ಕಳಿಗೆ ಅಲ್ಲಿಯ ಅಧೀಕ್ಷಕಿ ರಾಕ್ಷಸಿಯಂತೆ ನಡೆದುಕೊಳ್ಳುತ್ತಿರುವ ಪ್ರಕರಣ ಬಯಲಾಗಿದೆ. ಬಾಲಮಂದಿರದಲ್ಲಿ ಅಮಾನವೀಯ ಕೃತ್ಯ ಬಯಲು ನಗರದ ಬಿಬಿ ರಸ್ತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿ ಸರ್ಕಾರಿ ಬಾಲಕಿಯರ ಮಂದಿರವೊಂದಿದೆ. ಇದೆ ಬಾಲಕಿಯರ ಮಂದಿರ ಈಗ …
Read More »ಅಕ್ರಮ ಮದ್ಯ ಮಾರಾಟ ಮತ್ತು ಗಾಂಜಾ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ
ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟ ಹಾವಳಿ: ಎಸ್ಪಿಯವರಿಗೆ ಮನವಿ ಸಲ್ಲಿಸಿದ ಬಿಜೆಪಿ ಭಾರತೀಯ ಜನತಾ ಪಾರ್ಟಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಾಂಜಾ ಮತ್ತು ಮದ್ಯ ಮಾರಾಟದ ಹಾವಳಿ ತಡೆಗಟ್ಟಲು ಕ್ರಮ ವಹಿಸಿ ಎಂದು ಮನವಿ ಸಲ್ಲಿಸಿದರು. ಸಮಾಜಕ್ಕೆ ಮಾರಕವಾದ ಅಕ್ರಮ ಗಾಂಜಾ ಮತ್ತು ಮಧ್ಯ ಮಾರಾಟ ಹಾವಳಿಯನ್ನು ತಡೆಗಟ್ಟಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಮನವಿ …
Read More »ಭಗವದ್ಗೀತೆ ಜಿಲ್ಲಾಮಟ್ಟದ ಸ್ಫರ್ಧೆಗಳು ಸಂಪನ್ನ…
ಬೆಳಗಾವಿ : ಭಗವದ್ಗೀತೆ ಅಭಿಯಾನದ ಜಿಲ್ಲಾ ಮಟ್ಟದ ಸ್ಫರ್ಧೆಗಳು ಮಂಗಳವಾರ ಆನಗೋಳದ ಸಂತಮೀರಾ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರೂ, ಸಂತ ಮೀರಾ ಶಾಲೆಯ ಅಧ್ಯಕ್ಷರೂ ಆಗಿರುವ ಪರಮೇಶ್ವರ ಹೆಗಡೆ ಮತ್ತು ಸಮಿತಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಸ್ಫರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು ಭಗವದ್ಗೀತೆಯ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಕಿಶೋರ ಮತ್ತು ಪ್ರೌಢ ಎನ್ನುವ ಎರಡು ವಿಭಾಗಗಳಲ್ಲಿ, ಭಾಷಣ …
Read More »ಮುಡಾ ಹಗರಣರಾತ್ರೋರಾತ್ರಿ 48 ಸೈಟ್ಗಳು ರದ್ದು
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ. ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್ಗಳನ್ನು ದಿನೇಶ್ ಕುಮಾರ್ …
Read More »