Breaking News

Uncategorized

ಮತದಾರರಿಗೆ ಹಣ ಹಂಚಲು 10 ಕೋಟಿ ರೂ. ಸಂಗ್ರಹ ಆರೋಪ; ಸುಧಾಕರ್ ಪ್ರಕರಣದ ವಿಚಾರಣೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಹಂಚಲು ಸುಮಾರು 10 ಕೋಟಿ ರೂ. ಹಣವನ್ನು ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ವಿರುದ್ಧದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಈ ಹಿಂದೆ ನಡೆದ ವಿಚಾರಣೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ …

Read More »

ಅಯೋಧ್ಯೆ ಶ್ರೀರಾಮ ಮಂದಿರ‌ ಟ್ರಸ್ಟ್‌ ಸಿಇಒ ಹುದ್ದೆಗೆ ಅರ್ಜಿ ಆಹ್ವಾನ – ಆಕರ್ಷಕ ವೇತನ, ಬಂಗಲೆ ಸೌಲಭ್ಯ!

ಅಯೋಧ್ಯೆ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಇತ್ತೀಚೆಗಷ್ಟೇ ಹೊಸ ಸಾರಥಿ ಬಂದಿದ್ದಾರೆ. ರಾಮ ಮಂದಿರದ ಹುಂಡಿ ಹಣ ಲೂಟಿ ಹಗರಣದ ನೈತಿಕ ಹೊಣೆ ಹೊತ್ತು ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ ಬೆನ್ನಲ್ಲೇ ತಾತ್ಕಾಲಿಕ ಪ್ರಧಾನ ಕಾರ್ಯದರ್ಶಿಯನ್ನಾಗಿ ನಿವೃತ್ತ ಐಎಫ್‌ಎಸ್ ಅಧಿಕಾರಿ ಕೃಷ್ಣಮೋಹನ್  ಅವರನ್ನು ನೇಮಕ ಮಾಡಲಾಗಿದೆ. ಇದಾದ ಒಂದೇ ವಾರದಲ್ಲಿ ರಾಮಮಂದಿರ ಟ್ರಸ್ಟ್‌ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮೊದಲ ಬಾರಿಗೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ …

Read More »

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, …

Read More »

ವ್ಯಸನ ಮುಕ್ತ ಕೇಂದ್ರದಲ್ಲಿ ನೇಣಿಗೆ ಶರಣಾದ ಕಾನ್ಸ್‌ಟೇಬಲ್‌

ಕೊಪ್ಪಳ: ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾದ ಘಟನೆ ಕುಷ್ಟಗಿಯಲ್ಲಿ  ನಡೆದಿದೆ. ಶರಣಪ್ಪ ಉಪ್ಪಾರ (49) ನೇಣಿಗೆ ಶರಣಾದ ಪೊಲೀಸ್ ಪೇದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯ ವ್ಯಸನಕ್ಕೆ ದಾಸರಾಗಿದ್ದರು ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಅವರು ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ …

Read More »

ಪತಿ, ನಾದಿನಿಯನ್ನು ಸುಮ್ಮನೆ ಬಿಡಬೇಡ – ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಲ್ಕು ತಿಂಗಳ …

Read More »

ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ  ಅಧ್ಯಕ್ಷ ಶಿವಶಂಕರ್ ಸಾಹುಕಾರ್ ಅವರ ಪುತ್ರಿ ಸುಮಾ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಸರ್ಕಾರಿ ಹುದ್ದೆ ಪಡೆಯಲು ತಂದೆಯ ಪ್ರಭಾವ ಬಳಸಿ ಅತ್ಯಂತ ಕಡಿಮೆ ಆದಾಯದ ನಕಲಿ ಪ್ರಮಾಣಪತ್ರ ಸಲ್ಲಿಸಿದ ಗಂಭೀರ ಆರೋಪ ಇವರ ಮೇಲಿದ್ದು, ಕೆಪಿಎಸ್‌ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್  ದಾಖಲಿಸಿಕೊಂಡಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ  …

Read More »

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ  ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳು ಚಾಲಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಚಾಮರಾಜನಗರ ತಾಲ್ಲೂಕಿನ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿಯೊಬ್ಬರು ಚಾಲಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್‌ ಆಗಿರೋದು ಆರೋಪಕ್ಕೆ ಪುಷ್ಟಿ ನೀಡಿದೆ. ರಾಜ್ಯದ ದಕ್ಷಿಣ ತುದಿಯಲ್ಲಿರುವ ತಾಲ್ಲೂಕಾಗಿರುವುದರಿಂದ ಕೇರಳ ಮತ್ತು ತಮಿಳುನಾಡಿನ  ಕೊಂಡಿಯಾಗಿದೆ. ಇಲ್ಲಿನ ಅರಣ್ಯ ಪ್ರದೇಶ ಎರಡು ರಾಜ್ಯಗಳೊಂದಿಗೆ ವಿಸ್ತರಿಸಿಕೊಂಡಿದೆ. ತಮಿಳುನಾಡಿನ ಕಡೆ ಕೆಕ್ಕನಹಳ್ಳ …

Read More »

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Read More »

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಶಾಶ್ವತ ನಿವಾಸ ಪ್ರಮಾಣ ಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು? ಆ ರೀತಿ ನಿಯಮ ಇದ್ಯಾ ಎಂದು ಬಿಜೆಪಿ  ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ  ತಿರುಗೇಟು ನೀಡಿದ್ದಾರೆ. ಪಿಆರ್‌ಸಿ ಕೊಡಲು ರಾಜ್ಯ ಸರ್ಕಾರ ಮುಂದಾಗಿರೋದಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಾಸ ಮಾಡ್ತಿರೋದಕ್ಕೆ ರಾಜ್ಯ ಸರ್ಕಾರ ಸರ್ಟಿಫಿಕೇಟ್ ಕೊಡುತ್ತಿದೆ. ರಾಜ್ಯ ಸರ್ಕಾರ ಪಿಆರ್‌ಸಿ ಕೊಡಬಾರದು ಅಂತ ಎಲ್ಲಿದೆ. ಬಂಗಾಳದಲ್ಲಿ 1 ಕೋಟಿ ಜನರಿಗೆ …

Read More »

ತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನ

ಚಿಕ್ಕಬಳ್ಳಾಪುರ: ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಹಿಳೆಯೊಬ್ಬರು ಮಾಟಮಂತ್ರ ಮಾಡಿರುವ ಅಚ್ಚರಿಯ ಘಟನೆ ಚಿಕ್ಕಬಳ್ಳಾಪುರ  ನ್ಯಾಯಾಲಯದಲ್ಲಿ ನಡೆದಿದೆ. ಸಿವಿಲ್ ವ್ಯಾಜ್ಯದಲ್ಲಿ ತನ್ನ ಪರ ಅನುಕೂಲಕರ ತೀರ್ಪು ಪಡೆಯುವ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ್ದ ಚಿಕ್ಕಬಳ್ಳಾಪುರ ನಗರ ಪೊಲೀಸರು ಮಂಜುಳಾ (65) ಎಂಬಾಕೆಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿ ನಿವಾಸಿಯಾಗಿರುವ ಮಂಜುಳಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ (JMFC Court) ನ್ಯಾಯಾಧೀಶರ ಡಯಾಸ್ …

Read More »