ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನೂ ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕಿದೆ, ಸಿಗುತ್ತೆ. …
Read More »ಒಟಿಟಿಯಲ್ಲಿ ರಿಲೀಸ್ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್ ಬಜೆಟ್ ನಿರ್ಮಾಪಕರು
ಬೆಂಗಳೂರು: ಕೋವಿಡ್ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್‌ವುಡ್ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ. ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್ ಬಜೆಟ್ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 …
Read More »ಕಿಚ್ಚ ಸುದೀಪ್ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್
ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬವಾಗಿದ್ದು, ಕಿಚ್ಚ ಸುದೀಪ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಲ್ಲಿ ಹೇಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಶುಭ ಕೋರಿದ್ದಾರೆ. ಕವಿ ನಾನಲ್ಲ, ಕವಿತೆಯಂತೂ ನನಗೆ ಗೊತ್ತಿಲ್ಲ. ಕೆಲ ಸಿಂಪಲ್ ವರ್ಡ್ಸ್ ನಳ್ತೀನಿ ಅದರ್ ಮೇಲ್ ನಂಗ್ ಗೊತ್ತಿಲ್ಲ ಎಂದು ಒಂದೇ ಸಾಲಿನ ಕವಿತೆ ಹೇಳಿ. ಬಳಿಕ ಮಡದಿಯೋ, ಗೆಳತಿಯೋ ಏನೆಂದು ಕರೆಯಲಿ ನಿನ್ನ ಎಂದು ಭಾವನಾತ್ಮಕವಾಗಿ ಹೇಳುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್‍ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …
Read More »ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ : BSY
ಬೆಂಗಳೂರು,ಜ.6- ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಯೋಜನೆಗಳ ಲೋಕಾರ್ಪಣೆ, ವಿಪ್ರ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಶಂಕರಾಚಾರ್ಯ, ಮಧ್ವಾಚಾರ್ಯ ಸೇರಿದಂತೆ …
Read More »ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ :ಯತ್ನಾಳ
ಬೆಂಗಳೂರು(ಜ.06): ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಸಿದ್ದೇನೆ. ಅಭಿವೃದ್ದಿ ಬಗ್ಗೆ ಮಾತನಾಡಿದರೆ ಅದು ಪಕ್ಷ ವಿರೋಧಿ ಹೇಳಿಕೆ ಹೇಗಾಗುತ್ತೆ? ನಾನೇನು ಮಂತ್ರಿ ಮಾಡಿ ಅಂತ ಯಡಿಯೂರಪ್ಪನವರ ಮನೆಗೆ ಹೋಗಿಲ್ಲ. ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ತಿರುಗಿ ಬಿದ್ದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧವೂ …
Read More »ಮರುಕಳಿಸಿದೆ ನಿರ್ಭಯಾ ಕೇಸ್: ಕಬ್ಬಿಣದ ರಾಡ್ ನೂಕಿಸಿ ಅತ್ಯಾಚಾರ ಎಸಗಿ ಕೊಲೆ!
ಬದೌನ್ (ಉತ್ತರ ಪ್ರದೇಶ): ಕಾಮುಕರ ಅಟ್ಟಹಾಸಕ್ಕೆ, ಕ್ರೌರ್ಯಕ್ಕೆ ಕೊನೆಯೇ ಇಲ್ಲವೇನೋ ಎನ್ನುವಂಥ ಭಯಾನಕ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇದೆ. ಅಂಥದ್ದೇ ಒಂದು ಭಯಾನಕ ಘಟನೆ ಉತ್ತರ ಪ್ರದೇಶ ಬದೌನ್ನಲ್ಲಿ ನಡೆದಿದೆ. ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಗಲ್ಲುಶಿಕ್ಷೆಯಾಗಿದೆ. ಆದರೆ ಅದರ ಬೆನ್ನಲ್ಲೇ ಥೇಟ್ ಇದೇ ಘಟನೆ ನೆನಪಿಸುವ ಅತ್ಯಂತ ಕ್ರೌರ್ಯವಾದ ಅತ್ಯಾಚಾರ ಘಟನೆ ಬದೌನ್ನಲ್ಲಿ ನಡೆದಿದೆ. 50 ವರ್ಷದ ಮಹಿಳೆಯೊಬ್ಬರ ಗುಪ್ತಾಂಗಕ್ಕೆ ರಾಡ್ ಹಾಕಿ ಅತ್ಯಾಚಾರ …
Read More »ಹಾಸನ: ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢ, ಏಳು ಶಾಲೆಗಳಿಗೆ ರಜೆ
ಹಾಸನ: ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡ ಬಳಿಕ ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢಪಟ್ಟಿರುವುದರಿಂದ ಏಳು ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಪ್ರಾಥಮಿಕ ಶಾಲೆಯ ಏಳು ಮತ್ತು ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಸೋಂಕು ತಗುಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಶಾಲೆ ಆರಂಭಕ್ಕೂ ಮುನ್ನ ಮೂವರು ಶಿಕ್ಷಕರಿಗೆ ಪಾಸಿಟಿವ್ ಪತ್ತೆಯಾಗಿತ್ತು. ಹಾಗಾಗಿ ಸೋಂಕಿತ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲ. ‘ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಹಾಸನ ತಾಲ್ಲೂಕಿನ ಇಬ್ಬರು ಹಾಗೂ …
Read More »ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢ
ನವದೆಹಲಿ: ದೇಶದಲ್ಲಿ ಬ್ರಿಟನ್ ಕೊರೊನಾ ಹವಾಳಿ ಹೆಚ್ಚುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಅದ್ರಂತೆ, ಬೆಂಗಳೂರಿನ ನಿಮ್ಹಾನ್ಸ್ʼನಲ್ಲಿ 11 ಪ್ರಕರಣಗಳು ದಾಖಲಾಗಿದ್ರೆ, ಎನ್ʼಐವಿ ಪುಣೆ 30 ಪ್ರಕರಣಗಳು, ಇನ್ನು ಸಿಸಿಎಂಬಿ ಹೈದ್ರಾಬಾದ್‌ನಲ್ಲಿ 3 ಪ್ರಕರಣಗಳು ಹಾಗೂ ಎನ್ಸಿಡಿಸಿ ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ ಎಂದು …
Read More »ಕೊರೊನಾ ಎಫೆಕ್ಟ್: ಖಾಯಂ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಹೋಂಡಾ
ಕೊರೊನಾ ಸಾಂಕ್ರಾಮಿಕದಿಂದಾಗಿ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಹೋಂಡಾ ಮೋಟಾರ್ ಕಂಪನಿ ತನ್ನ ಸಂಸ್ಥೆಯ ಕೆಲ ಖಾಯಂ ನೌಕರರಿಗೆ ಸ್ವಯಂ ಪ್ರೇರಿತ ನಿವೃತ್ತಿಯ ಆಫರ್ ನೀಡುತ್ತಿದೆ. ದೇಶದ ಎರಡನೇ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್ ಸೈಕಲ್ಸ್ ಹಾಗೂ ಸ್ಕೂಟರ್ಸ್ ಇಂಡಿಯಾ ಕೊರೊನಾ ಸಾಂಕ್ರಾಮಿಕದ ಬಳಿಕ ಮಂದಗತಿಯ ಬೇಡಿಕೆ ಹಾಗೂ ಆರ್ಥಿಕ ಕುಸಿತವನ್ನ ಅನುಭವಿಸುತ್ತಿದೆ ಎಂದು ತಿಳಿಸಿದೆ. ಬೇಡಿಕೆ ನಿಧಾನವಾಗುತ್ತಿರೋದ್ರಿಂದ ನೋಯ್ಡಾ ಕಾರು ಪ್ಲಾಂಟ್ನ್ನ ಬಂದ್ ಮಾಡಿದ …
Read More »