ಬೆಳಗಾವಿ – ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ. ಈ ದೇಶಕ್ಕೆ ಉದ್ಯೋಗ ಖಾತ್ರಿ ಯೋಜನೆಯ ಕೊಡುಗೆ ನೀಡಿದ್ದು ಕಾಂಗ್ರೆಸ್ ಸರಕಾರ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಗ ಇದೇ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇತಿಹಾಸವನ್ನು ಅರಿತು ಮಾತನಾಡಲಿ …
Read More »ಕಾಂಗ್ರೆಸ್‌ನ ಪ್ರಮುಖರನ್ನೇ ಬಿಜೆಪಿಗೆ ಸೇರಿಸುವೆ
ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ ಯಾರೂ ನಂಬಲು ಆಗದಂಥ ಕಾಂಗ್ರೆಸ್‌ನ ಪ್ರಮುಖ ಐವರು ಶಾಸಕರನ್ನು ಬಿಜೆಪಿಗೆ ತರುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಿಜೆಪಿ ಗ್ರಾಮೀಣ ಕ್ಷೇತ್ರದ ನೂತನ ಗ್ರಾ.ಪಂ. ಸದಸ್ಯರ ಸಮ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಟಾಪ್ 5 ಆ ಶಾಸಕರ ಹೆಸರು ಕೇಳಿದರೆ ಎಲ್ಲರೂ ಬೆರಗಾಗುತ್ತಾರೆ ಎಂದರು. ಬಿಜೆಪಿಯಲ್ಲಿ ತೃಪ್ತಿ : ಬಿಜೆಪಿಯಲ್ಲಿ ಖುಷಿ ಹಾಗೂ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. …
Read More »ಫಾಸ್ಟ್ ಟ್ಯಾಗ್ ಕಡ್ಡಾಯ
ಹೊಸದಿಲ್ಲಿ/ನಾಗ್ಪುರ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫೆ. 16ರಿಂದ ಫಾಸ್ಟ್ಯಾಗ್ ಮೂಲಕ ಟೋಲ್ ಪಾವತಿ ಕಡ್ಡಾಯ. ಫಾಸ್ಟಾಗ್ ಅಳವಡಿಸಿ ಕೊಳ್ಳದಿದ್ದರೆ 2 ಪಟ್ಟು ಟೋಲ್ ಪಾವ ತಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ರವಿವಾರ ಆದೇಶ ಹೊರಡಿಸಿದೆ. ಸೋಮವಾರ ಮಧ್ಯರಾತ್ರಿ ಯಿಂದಲೇ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಗಡುವು ವಿಸ್ತರಣೆ ಇಲ್ಲ : ಈಗಾಗಲೇ 3-4 ಬಾರಿ ಗಡುವು ವಿಸ್ತರಿಸಲಾಗಿದೆ. ಇನ್ನು ವಿಸ್ತರಣೆ ಇಲ್ಲ ಎಂದು …
Read More »ಪ್ರೇಮಿಗಳ ದಿನವೇಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ
ಸವದತ್ತಿ – ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೇಮಿಗಳ ದಿನವೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು. ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »ಮನುಷ್ಯ ಎಷ್ಟೇ ದೊಡ್ಡ ಶ್ರೀಮಂತನಾಗಿರಲಿ,
ಘಟಪ್ರಭಾ: ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಪ್ರೌಢಶಾಲೆಯು ಬಡ ವಿದ್ಯಾರ್ಥಿಗಳ ಪಾಲಿನ ವಿದ್ಯಾ ಕಾಶಿಯಾಗಿದೆ. ಅಕ್ಷರ ಕಲಿಸಿದ ಗುರುವಿನ ಋಣ ತೀರಿಸಿದರೇ ಸಾಲದು. ಪಂಚಋಣ ತೀರಿಸಿದವನೇ ನಿಜವಾದ ಶಿಷ್ಯನ ಕೊಡುಗೆ ಎಂದು ನಿವೃತ್ತ ಶಿಕ್ಷಕ ಎಸ್. ಐ. ಬೆನವಾಡಿ ಹೇಳಿದರು. ರವಿವಾರದಂದು ಅವರು ಸಮೀಪದ ಅರಭಾವಿಮಠದಲ್ಲಿ ಪ್ರಥಮ ಬಾರಿಗೆ ಜರುಗಿದ ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಪ್ರೌಢಶಾಲೆಯ 1980-81ನೇ ಶೈಕ್ಷಣಿಕ ವರ್ಷದ 10ನೇ ತರಗತಿಯ ವಿದ್ಯಾರ್ಥಿಗಳಿಂದ “ಗುರುವಂದನೆ ಹಾಗೂ ಪುನರ್ಮಿಲನ” ಕಾರ್ಯಕ್ರಮದ ಅಧ್ಯಕ್ಷತೆ …
Read More »ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ ಲಕ್ಷ್ಮಣ ಸವದಿ
ಬೆಳಗಾವಿ: ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಮಾನ್ಯ ಸಹ ಸಂಘ ಚಾಲಕರಾದ ಅರವಿಂದ ದೇಶಪಾಂಡೆ ಜಿ. ತಾಲೂಕು ಕಾರ್ಯವಾಹರಾದ ಸಂಜಯ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Read More »ಕೊನೆಗೂ ಮಹಾರಾಷ್ಟ್ರದ ಧ್ವನಿ ಲೋಕಸಭೆಯಲ್ಲಿ ಪ್ರತಿಧ್ವನಿಸಿದೆ! ನಮ್ಮ 28 ಸದಸ್ಯರು ಬಾಯಲ್ಲಿ ಬಡೆದುಕೊಂಡ ಗೂಟ ಕಿತ್ತುಕೊಂಡು ಕರ್ನಾಟಕದ ಪರವಾಗಿ ಘರ್ಜಿಸುವದು ಯಾವಾಗ?
ಮುಖ್ಯಮಂತ್ರಿಗಳು ರಾಜ್ಯದ ಸಂಸದರಿಗೆ ಸೂಕ್ತ ಮಾರ್ಗದರ್ಶನ ಮಾಡಿ ಲೋಕಸಭೆಯಲ್ಲಿ ಬಾಯ್ಬಿಡಲು ಹೇಳಬೇಕು.ಕಳೆದ ಕೆಲವು ತಿಂಗಳುಗಳಿಂದ ನೆರೆಯ ಮಹಾರಾಷ್ಟ್ರದ ಶಿವಸೇನೆ ಸರಕಾರ ಗಡಿವಿವಾದವನ್ನು ಕೆದಕುತ್ತಲೇ ಇದ್ದು ಈಗ ಮತ್ತೊಂದು ಹೆಜ್ಜೆಯನ್ನು ಮುಂದಿರಿಸಿದೆ.ತನ್ನ ಆಟಕ್ಕೆ ಈಗ ಲೋಕಸಭೆಯನ್ನು ಆಯ್ಕೆ ಮಾಡಿಕೊಂಡಿದೆ! ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮೊದಲು ಕರ್ನಾಟಕದ ವಿರುದ್ಧ ಟ್ವೀಟ್ ಮಾಡಿದರು.ಬೆಳಗಾವಿ ಹಾಗೂ ಇತರ ಗಡಿ ಪ್ರದೇಶಗಳನ್ನು ಕರ್ನಾಟಕದ ಆಕ್ರಮಿತ ಪ್ರದೇಶಗಳೆಂದು ಕರೆದದ್ದಲ್ಲದೇ ಅವುಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ತಮ್ಮ ಸರಕಾರ ಬದ್ಧವಾಗಿದೆ …
Read More »ರೈತರ ಅಳಲು ಆಲಿಸಿದ ಜಿಲ್ಲಾಧಿಕಾರಿ
ಬೆಳಗಾವಿ: ಹೊರವಲಯದ ಹಲಗಾ-ಮಚ್ಚೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಜಮೀನು ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸೊದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ರೈತರ ಅಹವಾಲು ಆಲಿಸಿದರು. ‘ಯಾವುದೇ ಕಾರಣಕ್ಕೂ ನಮ್ಮ ಜಮೀನು ಬಿಟ್ಟು ಕೊಡುವುದಿಲ್ಲ. ಕಬಳಿಸಿಕೊಳ್ಳುತ್ತಿರುವುದನ್ನು ತಡೆಯಬೇಕು. ಇದು ಫಲವತ್ತಾದ ಕೃಷಿ ಭೂಮಿ. ಈ ತುಂಡು ಜಮೀನು ಬಿಟ್ಟರೆ ನಮಗೆ ಪರ್ಯಾಯವಿಲ್ಲ. ಪರಿಹಾರದ ವಿಷಯದಲ್ಲಿಯೂ ಕೆಲವರು ಮಧ್ಯವರ್ತಿಗಳಾಗಿ ಬಂದು ಸತಾಯಿಸುತ್ತಿದ್ದಾರೆ. …
Read More »ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ
ಮೀರತ್: ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಬಾಲಕಿ ಕುಟುಂಬದವರು ದೂರು ನೀಡಿದ್ದಾರೆ. ಮೀರತ್ ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು, ಆರೋಪಿಗಳನ್ನು ಈಗ ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ. ಆದರೆ, ಬಂಧಿತ ಯುವಕನ ಪೋಷಕರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಆಧಾರ ರಹಿತ ಆರೋಪ ಇದಾಗಿದ್ದು, ಯುವಕನನ್ನು ಬಿಡುಗಡೆ …
Read More »ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ. ಅಖಂಡ ಬೆಳಗಾವಿ ಎಂದಿಗೂ ನಮ್ಮದೇ. ಈ ವಿಚಾರದಲ್ಲಿ ತಮ್ಮ ತಮ್ಮ ಪ್ರತಿಷ್ಠೆ ಬದಿಗಿಟ್ಟು ಪಕ್ಷಾತೀತವಾಗಿ ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಹೋರಾಟ ನಡೆಸಬೇಕಾಗಿದೆ. ಸುಮಾರು …
Read More »
Laxmi News 24×7