ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿದೆ. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟಿದನ್ನು ಓದುತ್ತಾರೆ. ಆದರೆ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಸರ್ಕಾರದ ನಿಲುವು, ಯೋಜನೆಗಳು, ಧ್ಯೆಯ ಧೊರಣೆಗಳು, ಮುನ್ನೋಟ ಇರಬೇಕು. ಆದರೆ, ಈ ಭಾಷಣ ನೋಡಿದಾಗ ಯಾವುದೂ ಕಾಣಿಸುವುದಿಲ್ಲ. ಇದೊಂದು ಸುಳ್ಳಿನ ಕಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಬಾಯಿಯಿಂದ ಸರ್ಕಾರ ಸುಳ್ಳು …
Read More »ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. …
Read More »ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ :
ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು. ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ …
Read More »ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೂ ಮುನ್ನ ಡಿಎ ಹೆಚ್ಚಳಕ್ಕೆ ಸಿದ್ದತೆ
50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ, ಹೋಳಿಗೂ ಮುನ್ನ ಡಿಎಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ಡಿಎ ಶೇಕಡಾ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಲ್ಲದೆ ಕೊರೊನಾ ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಪ್ರಿಯ ಭತ್ಯೆಯನ್ನು ಮತ್ತೆ ಸರ್ಕಾರ ನೀಡುವ ಸಾಧ್ಯತೆ ಹೆಚ್ಚಿದೆ. ಆದ್ರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. …
Read More »ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆ
ಮುಂಬೈ: ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡ ಭಾಷಿಕರು ಕರ್ನಾಟಕದಲ್ಲಿನ ಮರಾಠಿ ಪ್ರಾಬಲ್ಯದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಬಯಸಿದ್ದಾರೆ. ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈಯನ್ನು ಕರ್ನಾಟಕದ ಭಾಗವಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ಸವದಿ ಬುಧವಾರ ಹೇಳಿಕೆ ನೀಡಿದ್ದರು. ಈ ಕುರಿತಂತೆ ಇಂದು …
Read More »ಗಣರಾಜ್ಯೋತ್ಸವ ದಿನದ ಘಟನೆಯಿಂದ ರೈತರ ಹೋರಾಟ ಕೊನೆಯಾಗದು: ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ …
Read More »2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ:
ಬೆಂಗಳೂರು,ಜ.28- ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ರಾಜ್ಯಪಾಲ ವಿ.ಆರ್.ವಾಲ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಇಂದಿನಿಂದ ಆರಂಭವಾದ ಪ್ರಸಕ್ತ ಸಾಲಿನ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಹಂತ-2 …
Read More »ಬ್ಯಾಂಕ್ ಖಾತೆಗೆ ಪಿಂಚಣಿ
ಬೆಂಗಳೂರು: ರಾಜ್ಯ ಸರಕಾರ “ಮನೆ ಬಾಗಿಲಿಗೇ ಮಾಸಾಶನ’ ಎಂಬ ಅಭಿಯಾನ ಆರಂಭಿಸಿದ್ದು, ಇನ್ನು ಮುಂದೆ ಹಿರಿಯ ನಾಗರಿಕರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಮಾಸಾಶನಕ್ಕಾಗಿ ಕಚೇರಿಗಳಿಗೆ ಅಲೆಯಬೇಕಿಲ್ಲ! ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಯಾನ ಹಾಗೂ “ನವೋದಯ’ ಆಯಪ್ ಮತ್ತು ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ 9 ಮಾಸಿಕ ಪಿಂಚಣಿ ಯೋಜನೆ ಹಾಗೂ 3 ಏಕಕಾಲಿಕ ಸಹಾಯಧನ ನೆರವು ಯೋಜನೆ ಜಾರಿಯಲ್ಲಿದೆ. ಈಗಾಗಲೇ ಸೌಲಭ್ಯ ಪಡೆಯುತ್ತಿರುವವರ ಮಾಹಿತಿ ಮರು …
Read More »ಫೇಸ್ ಬುಕ್’ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಡಿಜಿಟಲ್ ಡೆಸ್ಕ್: 500 ಮಿಲಿಯನ್ ಫೇಸ್ ಬುಕ್ ಬಳಕೆದಾರರ ಮಾಹಿತಿಯನ್ನ ಡೇಟಾಬೇಸ್ ಒಳಗೊಂಡಿದೆ ಎಂದು ಸೇವೆಯ ಜಾಹೀರಾತು ನೀಡಿದ ವ್ಯಕ್ತಿಯೊಬ್ಬರು ಮದರ್ ಬೋರ್ಡ್ʼಗೆ ತಿಳಿಸಿದ್ದಾರೆ. ಇನ್ನು ಈ ದತ್ತಾಂಶವು ಮಾರ್ಕ್ ಜುಕರ್ ಬರ್ಗ್ ನೇತೃತ್ವದ ಕಂಪನಿ 2019ರ ಆಗಸ್ಟ್ʼನಲ್ಲಿ ನಿಗದಿ ಮಾಡಿದ ದುರ್ಬಲತೆಗೆ ಸಂಬಂಧಿಸಿದೆ ಎಂದು ವರದಿಯಾಗಿದೆ. ವೈಸ್ ಬಾಟ್ʼನ್ನ ಪರೀಕ್ಷಿಸಿದ ಮತ್ತು ಟೆಲಿಗ್ರಾಂ ಬೋಟ್ʼನಿಂದ ಆರಂಭಿಕ ಫಲಿತಾಂಶಗಳು ರಿಡ್ ಆಕ್ಟೀವಡ್ ಆಗಿರುವುದನ್ನ ಕಂಡುಹಿಡಿಯಲಾಯಿತು. ಆದ್ರೆ, ಕ್ರೆಡಿಟ್ʼಗಳನ್ನ ಖರೀದಿಸುವ ಮೂಲಕ …
Read More »ಆದಾಯ ತೆರಿಗೆ ಕಡಿತಗೊಳಿಸಲು ಈ ಬಾರಿ ಬಜೆಟ್ನಲ್ಲಿ ಚಿಂತನೆ
ನವದೆಹಲಿ: ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆಯಾಗುವ ಸಾಧ್ಯತೆಯಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ ವಾರ್ಷಿಕ 80 ಸಾವಿರ ರೂ. ರೂಪಾಯಿಯವರೆಗೂ ವಿನಾಯಕ ನೀಡುವ ಸಾಧ್ಯತೆ ಇದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ಹೇಳಿವೆ. ಸ್ಟ್ಯಾಂಡರ್ಡ್ ಡಿಡೆಕ್ಷನ್ ಮಿತಿ ಹೆಚ್ಚಳ ಮಾಡಲು ಕಳೆದ ಬಜೆಟ್ನಲ್ಲಿ ಜಾರಿಗೆ ತರಲಾಗಿದ್ದ ತೆರಿಗೆ ವ್ಯವಸ್ಥೆಗಳನ್ನು ಬದಲಾವಣೆ ಮಾಡಬಹುದು ಎಂದು ಹೇಳಲಾಗಿದೆ. …
Read More »
Laxmi News 24×7