Breaking News

Uncategorized

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

ರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು. ಶುಕ್ರವಾರ (ಫೆ.13) ನಗರದ ಹೊರವಲಯದ ಯರಮರಸ್ ಬಳಿಯ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಒಟ್ಟು 322 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯು …

Read More »

ಬೆಳಗಾವಿ:ಡಿಕೆಶಿಗೆ ಶುಭಕಾಲ ಬರಲಿದೆ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು ಸಂಘಟನೆ ಮೂಲಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪಾತ್ರ ದೊಡ್ಡದಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಆಗಲಿ ಎಂಬುದು ಕಾರ್ಯಕರ್ತರ ಬಯಕೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ  ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರ ಶ್ರಮವಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ಡಿ.ಕೆ.ಶಿವಕುಮಾರಗೆ ಶುಭಕಾಲ ಹತ್ತಿರ …

Read More »

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

ಕೊಪ್ಪಳ: ಸಿದ್ದರಾಮಯ್ಯ  ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ ಇದೆ ಎಂದು ಸಿಎಂ ಆಪ್ತ ಶಾಸಕ ಅಶೋಕ್‌ ಪಟ್ಟಣ್  ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿಎಂ ಬದಲಾವಣೆ ಆಗಲ್ಲ ಅಂತ ಎಲ್ಲರೂ ಹೇಳಿದ್ದಾರೆ. ಸಿಎಂ ಸಹ ಹೈಕಮಾಂಡ್ ಹೇಳಿದ್ರೆ ನಾನು ರಾಜೀನಾಮೆ ಕೊಡತ್ತೇನೆ ಎಂದಿದ್ದಾರೆ. ಹೈಕಮಾಂಡ್ ಹೇಳುತ್ತಿಲ್ಲ, ಅವರು ಬಿಡ್ತಾ ಇಲ್ಲ. ಡಿ.ಕೆ ಶಿವಕುಮಾರ್  ಹಾಗೂ ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಜಗಳ …

Read More »

ಇಂದು ವಿಶ್ವ ರೇಡಿಯೋ ದಿನ..

ವಿಶ್ವ ರೇಡಿಯೋ ದಿನವನ್ನು ಪ್ರತಿವರ್ಷ ಫೆಬ್ರವರಿ 13ರಂದು ಆಚರಿಸಲಾಗುತ್ತದೆ. ಈ ದಿನವನ್ನು UNESCO 2011ರಲ್ಲಿ ಘೋಷಿಸಿದ್ದು, ನಂತರ United Nations General Assembly 2012ರಲ್ಲಿ ಅಧಿಕೃತವಾಗಿ ಅಂಗೀಕರಿಸಿತು. ರೇಡಿಯೋ ಎಂಬ ಮಾಧ್ಯಮದ ಮಹತ್ವವನ್ನು ಜಗತ್ತಿಗೆ ನೆನಪಿಸುವುದು ಮತ್ತು ಜನರ ನಡುವೆ ಮಾಹಿತಿ ಹಂಚಿಕೆಯನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ. ರೇಡಿಯೋ ಒಂದು ಸರಳ, ಸುಲಭ ಮತ್ತು ಅಗ್ಗದ ಸಂವಹನ ಮಾಧ್ಯಮವಾಗಿದೆ. ವಿದ್ಯುತ್ ಇಲ್ಲದ ಪ್ರದೇಶಗಳಲ್ಲಿಯೂ ಬ್ಯಾಟರಿ ಮೂಲಕ ರೇಡಿಯೋ ಕೇಳಬಹುದು. …

Read More »

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ಧರ್ಮಸ್ಥಳಕ್ಕೆ  ಪಾದಯಾತ್ರೆ  ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ …

Read More »

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ  37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ ಪ್ರಾಕೃತಿಕ ವಿಕೋಪ ಯೋಜನೆ ಅಡಿಯಲ್ಲಿ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರ 180 ಕೋಟಿ ಹಣವನ್ನೂ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಯಾವುದೇ ಗುತ್ತಿಗೆ ಕೆಲಸಗಳನ್ನೂ ನೀಡುತ್ತಿಲ್ಲ. …

Read More »

ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ  ತೆರಳುತ್ತಿದ್ದ ರೈಲಿನಲ್ಲಿ  ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್​) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ (ಫೆ.10) ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. …

Read More »

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು. ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ …

Read More »

2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್‌

ಬಳ್ಳಾರಿ: ಸಿಎಂ ಪರವಾಗಿ ಯತೀಂದ್ರ  ಬ್ಯಾಟಿಂಗ್‌ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್‌ ಅಹ್ಮದ್‌ ಸಿದ್ದರಾಮಯ್ಯ ಪರ‌ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌  ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ  ಅವರು ಈಗ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರ ಸಾರಥ್ಯದಲ್ಲಿ 2028ರ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ  ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ …

Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್  ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್  ಮೆಟ್ಟಿಲೇರಿದ್ದಾರೆ. ಬುಧವಾರ (ಜ.11) ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿದ್ದರಿಂದ ಬೈರತಿ ಬಸವರಾಜ್ ಸದ್ಯ …

Read More »