ನಟ ಶಿವರಾಜ್ಕುಮಾರ್ ಅವರಿಗೆ ಅಮೆರಿಕದಲ್ಲಿ ಇಂದು (ಡಿಸೆಂಬರ್ 24) ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ. ಅವರ ಆರೋಗ್ಯಕ್ಕಾಗಿ ಹಲವು ಕಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್ಕುಮಾರ್ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ …
Read More »ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕಿಳಿದ ಬಿಜೆಪಿ..!
ಬೆಂಗಳೂರು, (ಡಿಸೆಂಬರ್ 24): ಎಂಎಲ್ಸಿ ಸಿ.ಟಿ.ರವಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜಭವನದ ಮೆಟ್ಟಿಲೇರಿದೆ. ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಸಿಟಿ ರವಿ ಅವರನ್ನ ರಾಜ್ಯ ಸರ್ಕಾರ ನಡೆಸಿಕೊಂಡು ರೀತಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇಂದು (ಡಿಸೆಂಬರ್ 24) ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ. …
Read More »ಇ-ಖಾತೆ ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಪಡೆಯುವಾಗ ಪಿಡಿಒ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಇ-ಖಾತೆ ಮಾಡಿಕೊಡಲು 5 ಸಾವಿರ ರೂಪಾಯಿ ಲಂಚ ಪಡೆಯುವಾಗ ಸೊರಬ ತಾಲೂಕು ಇಂಡುವಳ್ಳಿಯ ಪ್ರಭಾರ ಪಿಡಿಒ ಈಶ್ವರಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಗೌಸ್ ಎಂಬುವರು ಇಂಡುವಳ್ಳಿಯಲ್ಲಿ ಜಮೀನು ಹೊಂದಿದ್ದು, ಇದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿದ್ದಾರೆ. ಈ ಮನೆಯ ಮೇಲೆ ಬ್ಯಾಂಕ್ನಲ್ಲಿ ಸಾಲ ಪಡೆಯಲು ಇ-ಖಾತೆ ಬೇಕಾಗಿರುವುದರಿಂದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಪ್ರಭಾರ ಪಿಡಿಒ ಅವರು ಮಹಮ್ಮದ್ ಗೌಸ್ ಅವರ ಮನೆ ಬಳಿ ಬಂದು …
Read More »ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ದರ್ಶನ್
ಮೈಸೂರು: ನಟ ದರ್ಶನ್ ಅವರಿಂದು ನಗರದ ಖಾಸಗಿ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಸ್ ತಮ್ಮ ತೋಟದ ಮನೆಗೆ ಮರಳಿದರು. ಕಾಲು ನೋವಿನಿಂದಾಗಿ ಕಷ್ಟಪಟ್ಟು ದರ್ಶನ್ ನಡೆಯುತ್ತಿರುವ ದೃಶ್ಯ ಕಂಡುಬಂತು. ದರ್ಶನ್ ಆಗಮಿಸುವ ಮಾಹಿತಿ ತಿಳಿದು ಆಸ್ಪತ್ರೆ ಎದುರು ಜಮಾಯಿಸಿದ ಅಭಿಮಾನಿಗಳು, ‘ಡಿ ಬಾಸ್, ಡಿ ಬಾಸ್’ ಎಂದು ಘೋಷಣೆ ಕೂಗಿದರು.ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಪತ್ನಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನಿನ್ನೆ (ಸೋಮವಾರ) ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ …
Read More »ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್ಗೆ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭವಾಯಿತು. ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಹೀಗಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಬಸ್, ಆಟೋ ಸಂಚಾರ …
Read More »ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ 50ನೇ ವರ್ಷದ ಕೇಕ್ ಶೋ ನಡೆಯುತ್ತಿದೆ. ರತನ್ ಟಾಟಾ, ಎಸ್.ಎಂ.ಕೃಷ್ಣ ಅವರ ಕಲಾಕೃತಿಗಳು ಜನರನ್ನು ಆಕರ್ಷಿಸುತ್ತಿವೆ.
ಬೆಂಗಳೂರು: ನಗರದ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಐತಿಹಾಸಿಕ 50ನೇ ವರ್ಷದ ಕೇಕ್ ಶೋ ಈ ಬಾರಿಯ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪುಟಾಣಿಗಳು, ವಯಸ್ಕರನ್ನು ಮತ್ತು ಹಿರಿಯರನ್ನು ಕೇಕ್ ಶೋ ಆಕರ್ಷಿಸಿದೆ. ಪ್ರಮುಖವಾಗಿ, ದಿವಂಗತ ರತನ್ ಟಾಟಾ ಮತ್ತು ಎಸ್.ಎಂ.ಕೃಷ್ಣ ಅವರನ್ನು ಹೋಲುವ ಕೇಕ್ಗಳ ಮುಂದೆ ಜನರು ಸೆಲ್ಫಿ ತೆಗೆಸಿಕೊಳ್ಳುತ್ತಿರುವುದು ವಿಶೇಷವಾಗಿದೆ. ಯಶಸ್ವಿ ಉದ್ಯಮಿಯಾಗಿ ಮಾನವೀಯತೆಯ ಪ್ರತಿರೂಪವಾಗಿ ಬದುಕಿದ ರತನ್ ಟಾಟಾ ಅವರ ಕಲಾಕೃತಿಯನ್ನು ಇನ್ಸ್ಟಿಟ್ಯೂಟ್ …
Read More »ಕ್ರೀಡಾಕೂಟ ಲಾಂಛನ ಬಿಡುಗಡೆ: ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.
ಬೆಂಗಳೂರು : 2025ರ ಕರ್ನಾಟಕ ಕ್ರೀಡಾಕೂಟವನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಜನವರಿ 17ರಂದು ಮಂಗಳೂರಿನಲ್ಲಿ ಉದ್ಘಾಟನೆ ನಡೆಯಲಿದೆ. ಸುಮಾರು …
Read More »ಬಂಟ್ವಾಳ: ಶಾಲಾ ಕೊಠಡಿಯಲ್ಲಿ ಕೂಡಿಹಾಕಿ ಯುವತಿಯ ಅತ್ಯಾಚಾರ –
ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾವೂರ ನಿವಾಸಿ ಜಯಂತ ಬಂಧಿತ . ಡಿ.14ರಂದು ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಈ …
Read More »ಜ.14ರಂದು ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ
ಬೆಳಗಾವಿ: “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲು ಹಾಗೂ ಸರ್ಕಾರದ ದೌರ್ಜನ್ಯ ನೀತಿಯ ವಿರುದ್ಧ ಜನರನ್ನು ಜಾಗೃತಿಗೊಳಿಸಲು, ರಾಜ್ಯದ ಪ್ರತೀ ಗ್ರಾಮಗಳಿಗೂ ಭೇಟಿ ನೀಡುವ ಉದ್ದೇಶದಿಂದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಜ.14ರಂದು ಕೂಡಲಸಂಗಮದಿಂದ ಆರಂಭಿಸಲಾಗುತ್ತದೆ” ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸಂವಾದ, ಸಂಧಾನ, ಸಂಘರ್ಷ …
Read More »ಸಿ ಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ: ಹೆಚ್ಚು ವ್ಯಾಖ್ಯಾನ ಸರಿಯಲ್ಲ- ಡಾ. ಜಿ ಪರಮೇಶ್ವರ್
ಹುಬ್ಬಳ್ಳಿ: ಸಿ ಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸ್ಪೀಕರ್ ಅವರು ತಮ್ಮ ಕೆಲಸ ತಾವು …
Read More »
Laxmi News 24×7