ಬೆಂಗಳೂರು – ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಯುತ್ತಿದ್ದಂತೆ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಲಾವ್ ಬಂದಿದೆ. ಹಾಗಾಗಿ ಡಿಸೆಂಬರ್ 28 ಅಥವಾ 29ಕ್ಕೆ ಅವರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಷ್ಟೆ ಅಲ್ಲ, ಪುನಾರಚನೆ ಖಚಿತ. ಸಧ್ಯಕ್ಕೆ 7 …
Read More »ನೋ ಫೋನ್ pay ನೋ ಗೂಗಲ್ pay only ಪಾಕೆಟ್ ಪೇ
ಮುಂಬೈ: ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ ಪೇದೆ ಸ್ವಾತಿ ಸೋನರ್ ಡ್ಯೂಟಿಗೆ ಹಾಕಲಾಗಿತ್ತು. ಕೊರೊನಾ ಭಯದಿಂದ ನೋಟುಗಳನ್ನ ಕೈಯಲ್ಲಿ ಮುಟ್ಟದ ಸ್ವಾತಿ ಸೋನರ್, ಯುವತಿಗೆ ಜೇಬಿಗೆ ಇಡುವಂತೆ ಹೇಳಿದ್ದಾರೆ. ಈ ಎಲ್ಲ ದೃಶ್ಯಗಳು ಸಾರ್ವಜನಿಕರ ಮೊಬೈಲನಲ್ಲಿ ಸರೆಯಾಗಿದ್ದವು. ವೀಡಿಯೋ ವೈರಲ್ ಬಳಿಕ …
Read More »ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ.
ಬೆಂಗಳೂರು: ಇದೇ ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಯೆಸ್ ಈ ಕುರಿತು ಪೋಸ್ಸ್ ಮಾಡಿರುವ ಪ್ರಶಾಂತ್ ನೀಲ್ ಡಿಸೆಂಬರ್ 21, 2020, ಬೆಳಗ್ಗೆ 10.08 ನಿಮಿಷಕ್ಕಾಗಿ ಕಾಯ್ತಿರಿ ಎಂದು ಹೇಳಿದ್ದಾರೆ. ಕೆಜಿಎಫ್ ಚಾಪ್ಟರ್ -1 ತೆರೆ ಕಂಡು ಡಿಸೆಂಬರ್ 21ಕ್ಕೆ ಮೂರು ವರ್ಷವಾಗಲಿದೆ. ಅಂದುಕೊಂಡಂತೆ ಆಗಿದ್ರೆ ಕೆಜಿಎಫ್ ಇಡೀ ದೇಶದಾದ್ಯಂತ ಅಬ್ಬರಿಸುತ್ತಿತ್ತು. ಕೊರೊನಾದಿಂದ ಶೂಟಿಂಗ್ ಸ್ಥಗಿತಗೊಂಡ ಹಿನ್ನೆಲೆ ಸಿನಿಮಾ ರಿಲೀಸ್ …
Read More »ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರ ವಿರುದ್ಧ ನಿಯಮಾನುಸಾರ ಕ್ರಮ
ಬೆಂಗಳೂರು,ಡಿ.- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಿದ ಮುಷ್ಕರದ ಸಮಯದಲ್ಲಿ ಕರ್ತವ್ಯನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್‍ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಈ ತನಕ ಕ್ರಮ ಕೈಗೊಳ್ಳಲಾಗಿದೆ ಹೊರತು ಇನ್ನಾವುದೇ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ …
Read More »13 ಕಡೆ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್..!
ಬೆಂಗಳೂರು, ಡಿ.18- ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಇಂದು ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ದಾಳಿ ನಡೆಸಿದೆ. ಬಲೆಗೆ ಬಿದ್ದಿರುವ ಅಧಿಕಾರಿಗಳನ್ನು ಮೈಸೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ, ಹಾಸನದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ವಿ.ಎಸ್. ಅಶ್ವಿನಿ ಹಾಗೂ ಬೆಳಗಾವಿಯ ಲೋಕೋಪ ಯೋಗಿ ಬಂದರು ಮತ್ತು ಒಳನಾಡು …
Read More »ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು.
ಬೆಂಗಳೂರು – ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಇವರನ್ನು ಬೆಂಗಳೂರು ಮಹಾನಗರದಲ್ಲಿ ಹುಕ್ಕೇರಿ ಹಿರೇಮಠದ ವತಿಯಿಂದ ಶ್ರೀ ಷ ಬ್ರ ಡಾಕ್ಟರ್ ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಶಿವಗಂಗಾ ಕ್ಷೇತ್ರ ಇವರ ದಿವ್ಯಸಾನಿಧ್ಯದಲ್ಲಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಹುಕ್ಕೇರಿ …
Read More »ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಸಹಿಸಲು ಅಸಾಧ್ಯ. : ಸಿದ್ದರಾಮಯ್ಯ
ಮೈಸೂರು (ಡಿ.18): ನನಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಹಾಗೂ ಹೆಚ್ಚು ವೇದನೆ ನೀಡಿದ ಕ್ಷೇತ್ರ ಚಾಮುಂಡೇಶ್ವರಿ. ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಸಹಿಸಲು ಅಸಾಧ್ಯ. ನಾನು ಚಾಮುಂಡೇಶ್ವರಿಯಲ್ಲಿ ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದು ಕೊಂಡಿರಲಿಲ್ಲ. ನಾನು ಬಾದಾಮಿಯಲ್ಲಿ ಗೆಲ್ಲದಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗಿ ಹೋಗುತ್ತಿತ್ತು. ನೀವು ಸೋಲಿಸಿದಂತೆ ಅವರು ನನ್ನನ್ನು ಸೋಲಿಸಿದ್ದರೆ, ಈ ರಾಜ್ಯದ ಭವಿಷ್ಯ ಏನಾಗುತ್ತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವಾನಾತ್ಮಕವಾಗಿ ಮಾತನಾಡಿದ್ದಾರೆ. ಕಳೆದ ವಿಧಾನಸಭಾ …
Read More »ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಸಂಚಾರಿ ಪೊಲೀಸರು
ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಬರೋಬ್ಬರಿ 5,672 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಎರಡು ಗಂಟೆ ಅವಧಿಯಲ್ಲಿ 26,26,800 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ನಗರದ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ 5,672 ಪ್ರಕರಣ ದಾಖಲಾಗಿವೆ. ನಿತ್ಯ ಇರುವ ಸ್ಥಳಗಳನ್ನು ಬಿಟ್ಟು ಬೇರೆ ಸ್ಥಳಗಳಲ್ಲಿ ನಿಂತು. ವಾಹನ ಸವಾರರಿಗೆ ಬಲೆ ಬೀಸಿದ್ದಾರೆ. …
Read More »ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,410ಕ್ಕೆ ಏರಿಕೆ
ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,250 ರೂ. ಇದ್ದ ಚಿನ್ನದ ಬೆಲೆ ಇಂದು 49,320 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 50,410 ರೂ. ಆಗಿದೆ. 22 ಕ್ಯಾರೆಟ್ನ 10 …
Read More »-ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ.
ಬೆಂಗಳೂರು,ಡಿ.17 -ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ. ಸೊರಗಿದ ಸಂಪನ್ಮೂಲ ಕ್ರೋಢೀಕರಣದಿಂದ ಮುಂಬರುವ ಬಜೆಟ್ ಗಾತ್ರವೂ ಕುಗ್ಗಲಿದೆ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಈ ಬಾರಿ ಎದುರಿಸುತ್ತಿದೆ. ಲಾಕ್‍ಡೌನ್‍ನಿಂದ ಆರ್ಥಿಕತೆ ಬುಡಮೇಲಾಗಿದೆ. ಬೊಕ್ಕಸ ತುಂಬಿಸುವ ಆದಾಯ ಮೂಲಗಳೆಲ್ಲವೂ ಸೊರಗಿ ಹೋಗಿದ್ದು, ತೆರಿಗೆ ಸಂಗ್ರಹದಲ್ಲೂ ನಿರೀಕ್ಷಿತ ಚೇತರಿಕೆ ಕಾಣುತ್ತಿಲ್ಲ. ವ್ಯಾಪಾರ-ವಹಿವಾಟು ಕ್ಷೀಣಿಸಿರುವುದರಿಂದ ಸಂಪನ್ಮೂಲ ಸಂಗ್ರಹಕ್ಕೆ ಭಾರೀ ಹೊಡೆತ ಬಿದ್ದಿದೆ. …
Read More »