ಬೆಂಗಳೂರು(ಡಿ. 14): ಸಾರಿಗೆ ನೌಕರರ ಮುಷ್ಕರ ನಾಟಕೀಯ ತಿರುವು ಪಡೆಯುತ್ತಲೇ ಇದೆ. ಇವತ್ತು ಸಾರಿಗೆ ನೌಕರರು ಸೇವೆಗೆ ಹಾಜರಾಗುತ್ತಿರುವಂತೆಯೇ ಇದೀಗ ಮುಷ್ಕರ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯುತ್ತೇವೆ ಎಂದು ಹೇಳಿದ್ದ ಕೋಡಿಹಳ್ಳಿ ಚಂದ್ರಶೇಖರ್ ಇದೀಗ ಹೊಸ ಷರತ್ತು ಮುಂದಿಟ್ಟಿದ್ದಾರೆ. ಸಾರಿಗೆ ನೌಕರರು ಮುಂದಿಟ್ಟಿದ್ದ 10 ಬೇಡಿಕೆಗಳ ಪೈಕಿ ಸರ್ಕಾರ ಒಂಬತ್ತನ್ನ ಈಡೇರಿಸಲು ಒಪ್ಪಿದೆ. ಆದರೆ, ಇದು ಬಾಯಿ ಮಾತಿನದ್ದಾಗದೆ ಲಿಖಿತ ರೂಪದಲ್ಲಿರಲಿ. ಸರ್ಕಾರದ ಕಡೆಯಿಂದ …
Read More »ಸಾರಿಗೆ ನೌಕರರ ಪ್ರತಿಭಟನೆ ಗೊಂದಲ, ಇಂದೂ ಕೂಡ ಪ್ರಯಾಣಿಕರ ಪರದಾಟ
ಬೆಂಗಳೂರು, ಡಿ.14- ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆದರೂ ನಿನ್ನೆ ರಾತ್ರಿ ಉಂಟಾದ ಗೊಂದಲ ಹಾಗೂ ಬೆಳಗ್ಗೆ ನೌಕರರ ಸಂಘಟನೆಗಳು ವಿಳಂಬವಾಗಿ ತೆಗೆದುಕೊಂಡ ನಿರ್ಧಾರದಿಂದ ಇಂದೂ ಮಧ್ಯಾಹ್ನದವರೆಗೂ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ನೌಕರರು ಸರ್ಕಾರದೊಂದಿಗೆ ನಡೆಸಿದ ಮಾತುಕತೆ ಫಲ ನೀಡಿದೆ ಎಂದು ಮುಷ್ಕರ ವಾಪಸ್ ಪಡೆಯುತ್ತಿರುವುದಾಗಿ ಸಂಜೆ ಘೋಷಿಸಿದ್ದರು. ಆದರೆ, ರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ …
Read More »ಅನೈತಿಕ ಸಂಬಂಧ ; ಬೆಳಗಾವಿಯಲ್ಲಿ ಇಬ್ಬರು ಏಕಕಾಲಕ್ಕೆ ನೇಣಿಗೆ ಶರಣು
ಬೆಳಗಾವಿ : ಅನೈತಿಕ ಸಂಬಂಧ ಹೊಂದಿದ್ದವರಿಗೆ ಮನೆಯವರು ಹೇಳಿದ ಬುದ್ಧಿವಾದದಿಂದ ಬೇಸರಗೊಂಡು ಏಕಕಾಲಕ್ಕೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಶಿವಾಜಿ ಗಾಡಿವಡ್ಡರ್ (31), ಜಯಶ್ರೀ ಗಾಡಿವಡ್ಡರ್ (35) ಆತ್ಮಹತ್ಯೆಗೆ ಶರಣಾದವರು. ಶಿವಾಜಿ ಜೋಗ್ಯಾನಟ್ಟಿ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದು, ಜಯಶ್ರೀ ಎಂಬ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಮನೆಯವರಿಗೆ ಗೊತ್ತಾಗಿದೆ. …
Read More »ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, B.S.Y.ಸರ್ಕಾರಕ್ಕೆ ಮೊದಲ ಸ್ಥಾನ: ಸತೀಶ್ ಜಾರಕಿಹೊಳಿ
ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ಉಪವಾಸ ಸತ್ಯಾಗ್ರಹ ಆರಂಭಿಸಿ ಸಾರಿಗೆ ನೌಕರರು..!
ಬೆಂಗಳೂರು, ಡಿ.13- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಇತ್ತ ಸರ್ಕಾರ ಮುಷ್ಕರ ನಿರತರ ಮನವೊಲಿಕೆಯ ಪ್ರಯತ್ನ ಮುಂದುವರೆಸಿದ್ದು , ಕಾರ್ಯ ಸಾಧು ಬೇಡಿಕೆಗಳ ಈಡೇರಿಕೆಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಾರಿಗೆ ನಿಗಮಗಳ ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸುವ …
Read More »ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆ
ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ. 2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಆದರೀಗ ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.
Read More »ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತ ಸೌಲಭ್ಯ:ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಮುಂಬೈ: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮುಂದುವರೆದಿರುವಂತೆ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ಇಂದಿನಿಂದಲೇ ಈ ಸೇವೆ ಸಾರ್ವಜನಿಕರಿಗೆ ದೊರೆಯಲಿದೆ. ಡಿಸೆಂಬರ್ 12 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತವಾಗಿ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಗುರುವಾರ ಆರೋಗ್ಯ ಸಚಿವ …
Read More »ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.
ಚೆನ್ನೈ: ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಜನಿಕಾಂತ್ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಷಗಳು. ಆರೋಗ್ಯದಿಂದ ದೀರ್ಘಾಯುಷ್ಯರಾಗಿ ಬಾಳಿ ಎಂದು ಹಾರೈಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಲೆಂದು ಆಗಮಿಸಿರುವ ಸಾವಿರಾರು ಅಭಿಮಾನಿಗಳು ರಜನಿಕಾಂತ್ ಅವರ ಚೆನ್ನೈ ನಿವಾಸದ ಎದುರು …
Read More »ಆನ್ ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದ ಪತ್ರಕರ್ತನೊಬ್ಬನನ್ನುಗಲ್ಲಿಗೇರಿಸಿದೆ.
ಟೆಹ್ರಾನ್: ಇರಾನ್ ನಲ್ಲಿ 2017ರಲ್ಲಿ ಉಂಟಾಗಿದ್ದ ಆರ್ಥಿಕ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದ ಪತ್ರಕರ್ತನೊಬ್ಬನನ್ನು ಇರಾನ್ ಸರ್ಕಾರ ಗಲ್ಲಿಗೇರಿಸಿದೆ. ಆನ್ ಲೈನ್ ಮುಲಕ ಪ್ರಚಾರ ಮಾಡಿ, ಜನರನ್ನು ಪ್ರಚೀದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಪತ್ರಕರ್ತ ರುಹೊಲ್ಲಾಹ್ ಝಾಮ್ ಜೈಲುಶಿಕ್ಷೆಗೆ ಗುರಿಯಾಗಿದ್ದ. ಕಳೆದ ಜೂನ್ ನಲ್ಲಿ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. ಇದೀಗ ಝಾಮ್ ನನ್ನು ಗಲ್ಲಿಗೇರಿಸಲಾಗಿದೆ. ಝಾಮ್ ವೆಬ್ ಸೈಟ್ ಹಾಗೂ …
Read More »ವೇತನ ಕೊಡದ ಕಂಪೆನಿ ವಿರುದ್ಧ ಕಾರ್ಮಿಕರ ಆಕ್ರೋಶ
ಕೋಲಾರ,ಡಿ.12- ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ನೀಡಿಲ್ಲ ಎಂದು ಆರೋಪಿಸಿ ಕಾರ್ಮಿಕರು ಕಂಪೆನಿಗೆ ಕಲ್ಲು ತೂರಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿರುವ ಘಟನೆ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಜಿಲ್ಲೆಯ ಹೊರ ವಲಯದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬರುತ್ತಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಏಕಾಏಕಿ ಕಂಪೆನಿಗೆ …
Read More »