ನವದೆಹಲಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರಿಗೆ ನಿಯಮಗಳಲ್ಲಿ ಸಡಿಲಿಕೆ ನೀಡಿದ್ದು, ಅವಧಿ ಮೀರಿದ ಡಿ.ಎಲ್ ಮತ್ತು ಆರ್.ಸಿಯನ್ನ 2021 ಡಿಸೆಂಬರ್ 31ರವರೆಗೆ ಬಳಸಬಹುದು ಎಂದಿದೆ. ಅದ್ರಂತೆ, 2020ರ ಮಾರ್ಚ್ ನಿಂದ ಅಮಾನ್ಯವಾದ ಚಾಲನಾ ಪರವಾನಗಿಗಳು, ಆರ್ ಸಿಗಳು ಮತ್ತು ಫಿಟ್ ನೆಸ್ ಪ್ರಮಾಣ ಪತ್ರಗಳನ್ನು ಹೊಂದಿರುವ ವಾಹನಗಳ ಮೇಲೆ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಡಿಸೆಂಬರ್ 31ರಿಂದ ಅಕ್ರಮ ಪರವಾನಗಿ ಹೊಂದಿರುವವರ ವಿರುದ್ಧ ಕ್ರಮ …
Read More »ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಸರ್ಕಾರಕ್ಕೆ ಮತ್ತಷ್ಟು ಅಧೋಗತಿ; ಸಿದ್ದರಾಮಯ್ಯ
ಮೈಸೂರು (ಜ. 13): ಬಿಜೆಪಿ ಸರ್ಕಾರ ಈಗಾಗಲೇ ಅಧೋಗತಿಗೆ ಇಳಿದಿದೆ. ಇದೀಗ ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಮತ್ತಷ್ಟು ಅಧೋಗತಿಗೆ ಹೋಗಲಿದೆ. ಸಂಪುಟ ಪೂರ್ತಿಯಾದ ಮಾತ್ರಕ್ಕೆ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಆದರೆ, ಮಂತ್ರಿ ಮಂಡಲ ವಿಸ್ತರಣೆಯಿಂದಾಗಿ ಯಡಿಯೂರಪ್ಪ ಇನ್ನೂ ಸ್ವಲ್ಪ ದಿನ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅನಿಸುತ್ತಿದೆ ಎನ್ನುವ ಮೂಲಕ ಸಿಎಂ ಬದಲಾಗುತ್ತಾರೆ ಎಂಬ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಈ ಹಿಂದೆ ಸದ್ಯದಲ್ಲೇ ಸಿಎಂ ಸ್ಥಾನದಿಂದ …
Read More »ಬ್ಲ್ಯಾಕ್ಮೇಲ್ ಮಾಡುವ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ: ಯತ್ನಾಳ್ ವಾಗ್ದಾಳಿ
ವಿಜಯಪುರ (ಜ. 13): ಬ್ಲ್ಯಾಕ್ಮೇಲ್ ಮಾಡುವ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಕೂಡ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಸಿಎಂ ವಿರುದ್ಧ ಹರಿಹಾಯ್ದ ಅವರು, ಕೆಲವರು ಸಿಡಿ ತೋರಿಸಿ ಹೆದರಿಸಿ, ಸಚಿವ ಸ್ಥಾನ ಪಡೆದಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ. ಸಿಎಂಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲ್ ಹಾಕಿದರು. ಪ್ರಧಾನಿ ನರೇಂದ್ರ …
Read More »ನೈತಿಕತೆ ಇದ್ದರೆ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲ
ವಿಜಯಪುರ (ಜನವರಿ. 13); ಸಿಎಂ ವೀರಶೈವ ಲಿಂಗಾಯಿತರ ಹೆಸರಿನಲ್ಲಿ ಕೇಂದ್ರ ನಾಯಕರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಮನಸ್ಲಿಲ್ಲದಿದ್ದರೂ ಸಚಿವ ಸಂಪುಟಕ್ಕೆ ಮೂರು ಜನರನ್ನು ಸೇರಿಸಿಕೊಳ್ಳಲು ಅನುಮತಿ ನೀಡಿದ್ದಾರೆ. ಹೀಗಾಗಿ ಹೈಕಮಾಂಡ್ನೆ ಬ್ಲ್ಯಾಕ್ಮೇಲ್ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ …
Read More »ಮೈಸೂರು: ಜ. 14ರಂದು ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನ
ಮೈಸೂರು: ಸುಬ್ಬಯ್ಯನಾಯ್ಡು ಅಭಿನಯ ರಂಗ ತರಬೇತಿ ಶಿಬಿರದ ಕಲಾವಿದರು ನಟಿಸಿರುವ ‘ಸೀತಾ ಸ್ವಯಂವರ’ ನಾಟಕ ಪ್ರದರ್ಶನವು ಜ. 14ರಂದು ಸಂಜೆ 6.30ಕ್ಕೆ ರಂಗಾಯಣದ ‘ವನರಂಗ’ದಲ್ಲಿ ನಡೆಯಲಿದೆ. ಇದು ಕೊರೊನಾ ಲಾಕ್ಡೌನ್ ನಂತರ ರಂಗಾಯಣದ ಮೊದಲ ಹೊಸ ನಾಟಕ ಎನಿಸಿದೆ. ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ನ ಅಧ್ಯಕ್ಷ ಎನ್.ವಿ.ಫಣೀಶ್ ನಾಟಕದ ಕರಪತ್ರ ಬಿಡುಗಡೆ ಮಾಡಲಿದ್ದಾರೆ. ಎಂ.ಎಲ್.ಶ್ರೀಕಂಠೇಗೌಡ ಅವರ ಈ ನಾಟಕದ ರಂಗ ವಿನ್ಯಾಸವನ್ನು ಎಚ್.ಕೆ.ದ್ವಾರಕನಾಥ್ ನಿರ್ವಹಿಸಿದ್ದು, ಜೀವನ್ಕುಮಾರ್ ಬಿ ಹೆಗ್ಗೂಡು …
Read More »ನಾನು ಮಾಡಿದ ತಪ್ಪೇನು: ಸಿಎಂಗೆ ಎಚ್. ನಾಗೇಶ್ ಪ್ರಶ್ನೆ? ರಾಜಿನಾಮೆ ನೀಡಲು ಒಪ್ಪಿಗೆ
ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರಾಜಿನಾಮೆಗೆ ಕಾರಣ ಹೇಳಿಲ್ಲ, ಆದರೆ ಸಚಿವ ಸ್ಥಾನಕ್ಕೆ ಸಮಾನಾಂತರವಾದ ಹುದ್ದೆ ನೀಡುತ್ತಾರಂತೆ, ಸಿಎಂ ಮಾತಿಗೆ ಬೆಲೆಕೊಟ್ಟು ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ರಾಜಿನಾಮೆ ಕೊಡುವಂತ ತಪ್ಪು ನಾನೇನು ಮಾಡಿಲ್ಲ, ನನ್ನ ವಿರುದ್ಧ ಯಾವುದೇ ದೂರುಗಳಿಲ್ಲ, ಹೀಗಿದ್ದರೂ ಜನರಲ್ ಆಗಿ ರಾಜಿನಾಮೆ ಕೊಡಲು …
Read More »ನಿಮಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವೀಡಿಯೋ ಸಂಕಲನ, ಅಭಿನಯ ತರಬೇತಿ ಬೇಕಾ.? ಹಾಗಿದ್ದರೇ ಇಲ್ಲಿದೆ ಸುವರ್ಣ ಅವಕಾಶ.!
ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ …
Read More »CD’ ಇಟ್ಟುಕೊಂಡು ಸಿಎಂ ಬಿಎಸ್ವೈಗೆ ಬ್ಲ್ಯಾಕ್ ಮೇಲ್ : ಹೊಸ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ವಾರ್ನಿಂಗ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಸೇರಿ ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿ …
Read More »ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ
ಬೆಂಗಳೂರು,ಜ.13- ಸಂಪುಟ ವಿಸ್ತರಣೆ ಮಾತ್ರವೆಂದು ನಿಟ್ಟುಸಿರು ಬಿಟ್ಟಿದ್ದ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬಿಜೆಪಿ ಹೈಕಮಾಂಡ್ ಅಘಾತ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಳಿಕ ಸಚಿವರ ಖಾತೆ ಬದಲಾವಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬಳಿ ಇರುವ ಖಾತೆಗಳನ್ನು ಹಂಚುವುದರೊಂದಿಗೆ ಹಲವು ಸಚಿವರ ಖಾತೆ ಬದಲಾವಣೆಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು, ಪ್ರಮುಖವಾಗಿ ಹಿರಿಯ ಸಚಿವರ …
Read More »ಸಂಪುಟ ಸೇರುತ್ತಿರುವ ಸಪ್ತ ಸಚಿವರು
ಬೆಂಗಳೂರು,ಜ.13- ಇಂದು ಸಂಪುಟಕ್ಕೆ 7 ಮಂದಿ ಸಚಿವರು ಸೇರ್ಪಡೆಯಾಗಲಿದ್ದು, ಈಗಾಗಲೇ ರಾಜಭವನಕ್ಕೆ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಅಂಗಾರ, ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ.ಯೋಗೀಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದು, ಸಂಜೆ 3.50ಕ್ಕೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ …
Read More »
Laxmi News 24×7