ನವದೆಹಲಿ, ಫೆ.1- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಶೇ.49ರಿಂದ ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸಲು ವಿಮಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಘೋಷಿಸಿದರು. ವಿದೇಶಿ ಸಂಸ್ಥೆಗಳು ಭಾರತದಲ್ಲಿ ಕಾರ್ಯಾರಂಭ ಮಾಡಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು …
Read More »ಕೇಂದ್ರ ಬಜೆಟ್ ಬಗ್ಗೆಬಾಲಚಂದ್ರ ಜಾರಕಿಹೊಳಿ ಅವರ ಪ್ರಶಂಸೆ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …
Read More »ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ: ಡಾ.ಸೋನಾಲಿ
– ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು …
Read More »ಕೇಂದ್ರ ಬಜೆಟ್‌ನಲ್ಲಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ತೀವ್ರ ನಿರಾಸೆ;
ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ …
Read More »ತೌಸೀಪ್ ಫನೀಬಂಧ್ ಮಾರಿಹಾಳ ಗ್ರಾಪಂ ಅದ್ಯಕ್ಷ ….
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
Read More »ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ. ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 2013-14ನೇ ಸಾಲಿನಲ್ಲಿ ಗೋಧಿಯನ್ನು …
Read More »ಕೇಂದ್ರ ಬಜೆಟ್ 2021: ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?
ನವದೆಹಲಿ, ಫೆಬ್ರುವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ 2021ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಅನುದಾನಗಳನ್ನು ಘೋಷಿಸಿದ್ದಾರೆ. 2020ರಲ್ಲಿ ಕೊರೊನಾ ಸೋಲಿಸಲು 27.1 ಲಕ್ಷ ಕೋಟಿ ಮಿನಿ ಬಜೆಟ್ ಮೋದಿ ಸರ್ಕಾರದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಅಭಿವೃದ್ಧಿ ಯೋಜನೆಗಳನ್ನು ಉತ್ತೇಜಿಸಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಸ್ಥಿತಿಗತಿ ಕುಂಠಿತವಾಗಿದ್ದು, …
Read More »Big Breaking: ಕೇಂದ್ರ ಬಜೆಟ್ ಎಫೆಕ್ಟ್ : ಮದ್ಯ, ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರಿ ಹೆಚ್ಚಳ,ಇಂದು ಮದ್ಯರಾತ್ರಿಯಿಂದಲೇ ಜಾರಿ
ನವದೆಹಲಿ: ದೇಶದಲ್ಲಿ ಪ್ರಪ್ರಥಮ ಬಾರಿಗೆ ಪೆಪರ್ ಲೆಸ್ ಕೇಂದ್ರ ಬಜೆಟ್ ಮಂಡನೆಯಾಗ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ. ಇದೇ ವೇಳೆ ಅವರು ಹಲವಾರು ಮಾಹಿತಿಗಳನ್ನು ಮಂಡನೆ ಮಾಡಿದ್ದಾರೆ. ಈ ನಡುವೆ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದ್ದು, ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ. ಡಿಸೇಲ್‌ಗೆ …
Read More »ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಾರಿಗೆ ಸಚಿವ ಸವದಿ
ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಓಡಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದರು. ಭಾನುವಾರ ₹ 39.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭವಾಗಲಿದೆ. …
Read More »ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ
ಕನ್ನಡದ ಪ್ರತಿಭಾನ್ವಿತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಟಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ತೆಲುಗು ಸಿನಿಲೋಕಕ್ಕೆ ‘ಕಿರಿಕ್ ಪಾರ್ಟಿ’ ನಿರ್ದೇಶಕ ಎಂಟ್ರಿ ಕೊಟ್ಟಿದ್ದಾರೆ. ಸ್ವರೂಪ್ ಆರ್‌ಜೆಎಸ್ ನಿರ್ದೇಶನದ ಮಾಡುತ್ತಿರುವ ‘ಮಿಷನ್ ಇಂಪಾಸಿಬಲ್’ ಎಂಬ ಚಿತ್ರದಲ್ಲಿ ರಿಷಭ್ ಶೆಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟು ಕೊಡದ ಚಿತ್ರತಂಡ ಈ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲಿದೆ ಎಂದಷ್ಟೇ ತಿಳಿಸಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ …
Read More »
Laxmi News 24×7