50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ, ಹೋಳಿಗೂ ಮುನ್ನ ಡಿಎಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ಡಿಎ ಶೇಕಡಾ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಲ್ಲದೆ ಕೊರೊನಾ ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಪ್ರಿಯ ಭತ್ಯೆಯನ್ನು ಮತ್ತೆ ಸರ್ಕಾರ ನೀಡುವ ಸಾಧ್ಯತೆ ಹೆಚ್ಚಿದೆ. ಆದ್ರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. …
Read More »ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆ
ಮುಂಬೈ: ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡ ಭಾಷಿಕರು ಕರ್ನಾಟಕದಲ್ಲಿನ ಮರಾಠಿ ಪ್ರಾಬಲ್ಯದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಬಯಸಿದ್ದಾರೆ. ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈಯನ್ನು ಕರ್ನಾಟಕದ ಭಾಗವಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ಸವದಿ ಬುಧವಾರ ಹೇಳಿಕೆ ನೀಡಿದ್ದರು. ಈ ಕುರಿತಂತೆ ಇಂದು …
Read More »ಗಣರಾಜ್ಯೋತ್ಸವ ದಿನದ ಘಟನೆಯಿಂದ ರೈತರ ಹೋರಾಟ ಕೊನೆಯಾಗದು: ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ …
Read More »2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ:
ಬೆಂಗಳೂರು,ಜ.28- ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ರಾಜ್ಯಪಾಲ ವಿ.ಆರ್.ವಾಲ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಇಂದಿನಿಂದ ಆರಂಭವಾದ ಪ್ರಸಕ್ತ ಸಾಲಿನ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಹಂತ-2 …
Read More »ಬ್ಯಾಂಕ್ ಖಾತೆಗೆ ಪಿಂಚಣಿ
ಬೆಂಗಳೂರು: ರಾಜ್ಯ ಸರಕಾರ “ಮನೆ ಬಾಗಿಲಿಗೇ ಮಾಸಾಶನ’ ಎಂಬ ಅಭಿಯಾನ ಆರಂಭಿಸಿದ್ದು, ಇನ್ನು ಮುಂದೆ ಹಿರಿಯ ನಾಗರಿಕರು ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಮಾಸಾಶನಕ್ಕಾಗಿ ಕಚೇರಿಗಳಿಗೆ ಅಲೆಯಬೇಕಿಲ್ಲ! ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಯಾನ ಹಾಗೂ “ನವೋದಯ’ ಆಯಪ್ ಮತ್ತು ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ 9 ಮಾಸಿಕ ಪಿಂಚಣಿ ಯೋಜನೆ ಹಾಗೂ 3 ಏಕಕಾಲಿಕ ಸಹಾಯಧನ ನೆರವು ಯೋಜನೆ ಜಾರಿಯಲ್ಲಿದೆ. ಈಗಾಗಲೇ ಸೌಲಭ್ಯ ಪಡೆಯುತ್ತಿರುವವರ ಮಾಹಿತಿ ಮರು …
Read More »ಫೇಸ್ ಬುಕ್’ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಡಿಜಿಟಲ್ ಡೆಸ್ಕ್: 500 ಮಿಲಿಯನ್ ಫೇಸ್ ಬುಕ್ ಬಳಕೆದಾರರ ಮಾಹಿತಿಯನ್ನ ಡೇಟಾಬೇಸ್ ಒಳಗೊಂಡಿದೆ ಎಂದು ಸೇವೆಯ ಜಾಹೀರಾತು ನೀಡಿದ ವ್ಯಕ್ತಿಯೊಬ್ಬರು ಮದರ್ ಬೋರ್ಡ್ʼಗೆ ತಿಳಿಸಿದ್ದಾರೆ. ಇನ್ನು ಈ ದತ್ತಾಂಶವು ಮಾರ್ಕ್ ಜುಕರ್ ಬರ್ಗ್ ನೇತೃತ್ವದ ಕಂಪನಿ 2019ರ ಆಗಸ್ಟ್ʼನಲ್ಲಿ ನಿಗದಿ ಮಾಡಿದ ದುರ್ಬಲತೆಗೆ ಸಂಬಂಧಿಸಿದೆ ಎಂದು ವರದಿಯಾಗಿದೆ. ವೈಸ್ ಬಾಟ್ʼನ್ನ ಪರೀಕ್ಷಿಸಿದ ಮತ್ತು ಟೆಲಿಗ್ರಾಂ ಬೋಟ್ʼನಿಂದ ಆರಂಭಿಕ ಫಲಿತಾಂಶಗಳು ರಿಡ್ ಆಕ್ಟೀವಡ್ ಆಗಿರುವುದನ್ನ ಕಂಡುಹಿಡಿಯಲಾಯಿತು. ಆದ್ರೆ, ಕ್ರೆಡಿಟ್ʼಗಳನ್ನ ಖರೀದಿಸುವ ಮೂಲಕ …
Read More »ಆದಾಯ ತೆರಿಗೆ ಕಡಿತಗೊಳಿಸಲು ಈ ಬಾರಿ ಬಜೆಟ್ನಲ್ಲಿ ಚಿಂತನೆ
ನವದೆಹಲಿ: ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆಯಾಗುವ ಸಾಧ್ಯತೆಯಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ ವಾರ್ಷಿಕ 80 ಸಾವಿರ ರೂ. ರೂಪಾಯಿಯವರೆಗೂ ವಿನಾಯಕ ನೀಡುವ ಸಾಧ್ಯತೆ ಇದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ಹೇಳಿವೆ. ಸ್ಟ್ಯಾಂಡರ್ಡ್ ಡಿಡೆಕ್ಷನ್ ಮಿತಿ ಹೆಚ್ಚಳ ಮಾಡಲು ಕಳೆದ ಬಜೆಟ್ನಲ್ಲಿ ಜಾರಿಗೆ ತರಲಾಗಿದ್ದ ತೆರಿಗೆ ವ್ಯವಸ್ಥೆಗಳನ್ನು ಬದಲಾವಣೆ ಮಾಡಬಹುದು ಎಂದು ಹೇಳಲಾಗಿದೆ. …
Read More »ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ.
ಹೊಸದಿಲ್ಲಿ/ಬೆಂಗಳೂರು: ಸಿನೆಮಾ ಪ್ರಿಯರಿಗೊಂದು ಸಿಹಿ ಸುದ್ದಿ. ಸಿನೆಮಾ ಹಾಲ್‌ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು ಎಂಬ ನಿಯಮವನ್ನು ತೆಗೆದುಹಾಕಿರುವ ಕೇಂದ್ರ ಸರಕಾರ ಹೆಚ್ಚಿನ ಪ್ರೇಕ್ಷಕರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಈ ಸಂಬಂಧ ಬುಧವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿನೆಮಾ ಮಂದಿರ ಮತ್ತು ಈಜುಕೊಳಗಳ ಸಂಬಂಧ ಮಹತ್ವದ ಬದಲಾವಣೆ ಮಾಡಲಾಗಿದೆ. ಆದರೆ ಎಷ್ಟು ಮಂದಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ಶೀಘ್ರದಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ …
Read More »2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಒತ್ತು: ಜಗದೀಶ ಶೆಟ್ಟರ್
ದಾವಣಗೆರೆ: ‘ಬೆಂಗಳೂರು ಕೈಗಾರಿಕೆಗಳಿಂದ ತುಂಬಿ ಹೋಗಿದೆ. ಒಂದೇ ಕಡೆ ಎಲ್ಲ ಉದ್ಯಮಗಳು ಕೇಂದ್ರೀಕೃತಗೊಳ್ಳಬಾರದು. ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಹೊಂದುವಂತೆ ಆಗಬೇಕು ಎಂದು ನಿರ್ಧರಿಸಿದ್ದೇವೆ. ಅದಕ್ಕಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಕೈಗಾರಿಕೋದ್ಯಮಿಗಳ ಜತೆ ಬುಧವಾರ ಸಭೆ ನಡೆಸಿದ ಅವರು, ‘ಬೆಂಗಳೂರು-ಮುಂಬೈ ಹೆದ್ದಾರಿಯನ್ನು ಕೈಗಾರಿಕಾ ಕಾರಿಡಾರ್ ಎಂದು ಗುರುತಿಸಲಾಗಿದೆ. ಈ ಹೆದ್ದಾರಿ ಹಾದುಹೋಗುವ …
Read More »ಮಾವನ ಮೇಲಿನ ಸಿಟ್ಟಿಗೆ ಜಗತ್ತು ನೋಡದ ಮಗುವಿನ ಜೊತೆ ಮಸಣ ಸೇರಿದ್ದಾಳೆ.
ಮೈಸೂರು; ಆಕೆ ಕಳೆದ ಐದು ತಿಂಗಳ ಹಿಂದೆ ಪೊಲೀಸ್ ಹುದ್ದೆಯಲ್ಲಿದ್ದವರನ್ನು ಮದುವೆಯಾಗಿದ್ದಳು. ಜೀವನ ಪೂರ್ತಿ ಕೆಲಸದ ಭದ್ರತೆ ಇರುತ್ತೆ, ಮನೆ ಮಂದಿ ಜೊತೆ ನೆಮ್ಮದಿಯಿಂದ ಇರಬಹುದು ಎಂದು ಊಹಿಸಿಕೊಂಡಿದ್ದ ಆಕೆ ಗಂಡನ ಜೊತೆ ಸುಖವಾಗಿಯೇ ಇದ್ದಳು. ಆಕೆ ಮೂರು ತಿಂಗಳ ಗರ್ಭಿಣಿ ಸಹ ಆಗಿ ಇನ್ನೆನು ಪುಟ್ಟ ಮಗುವಿಗೆ ಜನ್ಮ ನೀಡುವವಳಿದ್ದಳು. ಆದರೆ ಆಕೆಗೆ ತಾನು ಬಯಸಿದ ಒಂದು ಸುಖ ಸಿಗಲೇ ಇಲ್ಲದಂತಾಗಿತ್ತು. ತನ್ನ ಹೆತ್ತವರನ್ನ ಬಿಟ್ಟ, ಗಂಡನ ಮನೆಗೆ …
Read More »
Laxmi News 24×7