ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು. ಮಸ್ಕಿ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, …
Read More »: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.
ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ ನೀಡಿದೆ.ಕೃಷ್ಣ ಮಠದ ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿರುವ ಕಲಾವಿದ ಪುರುಷೋತ್ತಮ ಅಡ್ವೆ ಮಾತನಾಡಿದ್ದಾರೆ. ಉಡುಪಿ ಕೃಷ್ಣ ಮಠವನ್ನು ಪುನಶ್ಚೇತನಗೊಳಿಸಲಾಗುತ್ತಿದೆ. ಪುನಶ್ಚೇತನದ ಸಂದರ್ಭ ಮಖ್ಯದ್ವಾರದ ಪ್ಲಾಸ್ಟಿಕ್ ಬೋರ್ಡ್ ತೆಗೆಯಲಾಗಿದೆ. ಮರದಲ್ಲಿ ತಯಾರಿಸಿ ಬೋರ್ಡ್ ಅಳವಡಿಸುವ ಯೋಜನೆ …
Read More »ಟ್ರ್ಯಾಕ್ಟರ್- ಆಟೋ ಡಿಕ್ಕಿ- ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸಕ್ಕಾಗಿ ಆಟೋದಲ್ಲಿ ತೆರಳುತ್ತಿದ್ದ ಎಂಟು ಜನರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಮೃತರ ವಿವರ ಇನ್ನು ತಿಳಿದುಬಂದಿಲ್ಲ.ಟ್ರ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದ ರಭಸಕ್ಕೆ ಗಾಯಾಳುಗಳೆಲ್ಲ …
Read More »ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇನ್ನಷ್ಟು ವಿಳಂಬ
ಬೆಂಗಳೂರು, – ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಮುಹೂರ್ತ ನಿಗದಿಪಡಿಸಿರುವುದರಿಂದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೆ ನೆನೆಗುದಿಗೆ ಬಿದ್ದಿದೆ. ವೈದ್ಯ ಹೇಳಿದ್ದೂ ಅದನ್ನೇ ರೋಗಿ ಬಯಸಿದ್ದೂ ಅದನ್ನೇ ಎಂಬಂತೆ ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಈ ವಾರದಲ್ಲಿ ಸಚಿವರಾಗುತ್ತೇವೆಂದು ಮನಸ್ಸಿನಲ್ಲೇ ಮಂಡಕ್ಕಿ ಮೇಯ್ದಿದ್ದ ಆಕಾಂಕ್ಷಿಗಳು ಜನವರಿ ವರೆಗೂ ಕಾಯಲೇಬೇಕು. ಆ ವೇಳೆಗೆ ಕೇಂದ್ರ ಚುನಾವಣಾ ಆಯೋಗವೇನಾದರೂ …
Read More »ಒಳ ಜಗಳದಿಂದಾಗಿ ಬಿಜೆಪಿ2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ:ರಾಮಲಿಂಗಾರೆಡ್ಡಿ
ಬೆಂಗಳೂರು, – ಒಳ ಜಗಳದಿಂದಾಗಿ ಬಿಜೆಪಿ 2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ಗೆ ಸೋಲಾಗಿರಬಹುದು. ಬಿಜೆಪಿ ಗೆದ್ದಿರಬಹುದು. ಆದರೆ, ಪರಿಸ್ಥಿತಿ ಹೀಗೆ ಇರುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ನಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಆದರೆ ಅವು ಸರಿ ಹೋಗುತ್ತವೆ. …
Read More »ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ನವದೆಹಲಿ: ಕ್ರಿಕೆಟಿಗ ಯುಜುವೇಂದ್ರ ಚಹಲ್ ಭಾವಿ ಪತ್ನಿ ಧನಶ್ರೀ ಜೊತೆ ಕ್ಲಿಕ್ಕಿಸಿಕೊಂಡಿರುವ ಸೆಲ್ಫಿ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿಕೊಂಡಿರುವ ಚಹಲ್, ಕ್ಯಾಪ್ಷನ್ ನೀಡಿಲ್ಲ. ಆದ್ರೆ ಧನಶ್ರೀ, ವಾಟ್ ಎ ಸೆಲ್ಫಿ, ಸಚ್ ಎ ಪ್ರೋ ಎಂದು ಬರೆದು ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ. https://www.instagram.com/p/CIMz3GZBIG-/?utm_source=ig_embed
Read More »ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ದುರದೃಷ್ಟಕರ: ಆರ್.ಅಶೋಕ್
ಚಾಮರಾಜನಗರ: ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರವಾಗಿದ್ದು, ಮುಂದೆ ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದರು.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ. ಅವರ ಪರವಾಗಿ ಪಕ್ಷ ಕೂಡ ನಿಲ್ಲುತ್ತದೆ. ವಿಶ್ವನಾಥ್ ಪರ ತೀರ್ಪು ಬರುತ್ತೆದೆ ಎಂಬ ಭರವಸೆ ಇತ್ತು ಎಂದು ತಿಳಿಸಿದರು. ಹೋರಾಟ ನಡೆಸಲು …
Read More »ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ
ಚೆನ್ನೈ: ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ ನೀಡಿ ವಿಕೃತಿ ಮೆರೆದಿದ್ದಾರೆ.ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಅಪರ್ಣ(32) ಹಾಗೂ ಸತ್ಯ(30) ಎಂದು ಗುರುತಿಸಲಾಗಿದೆ. ಇಬ್ಬರೂ ಕೂತೂರು ಮೂಲದವರಾಗಿದ್ದಾರೆ. ಬಾಲಕ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತ ಹುಡುಗ ಒಂದು ವಾರದ ಹಿಂದೆ ದಿಂಡಿಗಲ್ನ ಬಸ್ ನಿಲ್ದಾಣದಲ್ಲಿ ಅಪರ್ಣ ಹಾಗೂ ಸತ್ಯ ಅವರನ್ನು ಭೇಟಿಯಾಗಿದ್ದ. …
Read More »ಟ್ರ್ಯಾಕ್ಟರ್ ಅಡ್ಡ ಬಂದಿದ್ದಕ್ಕೆ ಡಿವೈಡರ್ಗೆ ಹಾರಿದ ಬಸ್
ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ಗೆ ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈವರ್ ಮೇಲೆ ಹತ್ತಿದೆ. ಬಸ್ ಡಿವೈಡರ್ ದಾಟಿ ಹೋಗದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ …
Read More »ವಿಷದ ಇಂಜೆಕ್ಷನ್ ಮಾಡ್ಕೊಂಡು ಬಾಬಾ ಆಮ್ಟೆ ಮೊಮ್ಮಗಳು ಸೂಸೈಡ್
ಮುಂಬೈ: ಕುಷ್ಠ ರೋಗಿಗಳಿಗಾಗಿ ಜೀವನವನ್ನೇ ಮುಡಿಪು ಇಟ್ಟಿದ್ದ ಸಾಮಾಜಿಕ ಕಾರ್ಯಕರ್ತ ಡಿ.ಬಾಬಾ ಆಮ್ಟೆ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕುಷ್ಠ ರೋಗಿಗಳ ಆನಂದವನ ಸಂಸ್ಥೆ ನಡೆಸುತ್ತಿದ್ದ ಡಾ.ಶೀತಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂದ್ರಪುರದಲ್ಲಿರುವ ತಮ್ಮ ನಿವಾಸದಲ್ಲಿ ವಿಷದ ಇಂಜೆಕ್ಷನ್ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಹಾರೋಗಿ ಸೇವಾ ಸಮಿತಿಯಲ್ಲಿ ಹಗರಣದ ಆರೋಪಗಳು ಕೇಳಿ ಬಂದಿದ್ದವು. ಮೃತ ಡಾ.ಶೀತಲ್ ಆಮ್ಟೆ ಮಹಾರೋಗಿ ಸೇವಾ ಸಮಿತಿಯ ಸಿಇಓ ಆಗಿದ್ದರು. ಇತ್ತ ಹಲವು ವರ್ಷಗಳಿಂದ ಪತಿ ಮತ್ತು ಕುಟುಂಬದ …
Read More »