Breaking News

Uncategorized

ಸೆಕ್ಸ್ ವೀಡಿಯೋ ತೋರಿಸಿ ರೇಪ್ – ನಿರ್ದೇಶಕನ ವಿರುದ್ಧ ನಟಿ ದೂರು

ಮುಂಬೈ: ನಿರ್ದೇಶಕ ಆಯುಷ್ ತಿವಾರಿ ವಿರುದ್ಧ ಕಿರುತೆರೆ ಮತ್ತು ವೆಬ್ ಸಿರೀಸ್ ನಟಿ ಅತ್ಯಾಚಾರದ ಆರೋಪ ಮಾಡಿ ಮುಂಬೈನ ವಾರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ನಿರ್ದೇಶಕ ಆಯುಷ್ ತಿವಾರಿ ಸಹ ದೂರ ದಾಖಲಾದ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.ನಿರ್ದೇಶಕ ಕೆಲವು ದಿನಗಳಿಂದ ತಮಗೆ ಪೋರ್ನ್ ವೀಡಿಯೋಗಳನ್ನ ತೋರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ನಟಿ ದೂರಿನಲ್ಲಿ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟಿಯ ಹೇಳಿಕೆಯನ್ನ …

Read More »

ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿ: ಅತಿವೃಷ್ಠಿಯಿಂದ ಕುಸಿದ ಮನೆಯನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿ ಸೇರಿಸಲು ಸಂತ್ರಸ್ಥನಿಂದ ಲಂಚ ಕೇಳಿದ ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕ ತಳವಾರ ಬಂಧಿತ ಆರೋಪಿ. ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಅಶೋಕ ತಳವಾರ ಮೂಡಲಗಿಯ ತಹಶೀಲದಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಾರೆ. ಅತಿವೃಷ್ಠಿಗೆ ಕುಸಿದ ಮನೆಯ ವಿವರಗಳನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿಗೆ …

Read More »

ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನ ಉದ್ಘಾಟಿಸಿದ ರಮೇಶ್ ಜಾರಕಿಹೊಳಿ

ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, …

Read More »

ಮಸ್ಕಿಯಲ್ಲಿ ಸಚಿವರ ದಂಡು – ಕಾಂಗ್ರೆಸ್ ಮುಕ್ತ ಗ್ರಾ.ಪಂಗಳ ನಿರ್ಮಾಣಕ್ಕೆ ಬಿಜೆಪಿ ಸಂಕಲ್ಪ

ರಾಯಚೂರು: ರಾಜ್ಯದಲ್ಲಿ ಶೇಕಡ 80 ರಷ್ಟು ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಬೇಕು. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಗ್ರಾಮಸ್ವರಾಜ್ಯ ಸಮಾವೇಶ ನಡೆಸಿದ್ದೇವೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಜಿಲ್ಲೆಯ ಮಸ್ಕಿಯಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸವದಿ ಉಪಚುನಾವಣೆಯ ದೃಷ್ಠಿಕೋನದಲ್ಲಿ ಇಂದು ಮಸ್ಕಿಯಲ್ಲಿ ಸಮಾವೇಶ ಮಾಡಿದ್ದೇವೆ ಎಂದರು. ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ. ಆದ್ರೆ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನೇ ಮಾಡುತ್ತಾರೆ, ಕೊಟ್ಟ …

Read More »

ರಾಜ್ಯ ರಾಜಕಾರಣದಲ್ಲಿ ಸಧ್ಯದಲ್ಲೇ ಮಹತ್ವದ ಬದಲಾವಣೆಗಳು ಆಗಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಪರೋಕ್ಷವಾಗಿ ಡಿಸಿಎಂ ಹುದ್ದೆಯ ಮೇಲೆ ಕಣ್ಣು ಇಟ್ಟಿರುವ ಬಗ್ಗೆ ಸುಳಿವು ನೀಡಿದಂತಿದೆ. ಎಲ್ಲರಿಗೂ ದೊಡ್ಡ ಹುದ್ದೆ ಮೇಲೆ ಆಸೆ ಇರುತ್ತದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಪಡುತ್ತಿದ್ದೇನೆ ಎಂದಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಎಲ್ಲಿಯೂ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿಲ್ಲ. ನನಗೆ ಹುದ್ದೆ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಎಲ್ಲರಿಗೂ ದೊಡ್ಡ ಹುದ್ದೆ ಆಸೆ ಇರಲಿದೆ. …

Read More »

ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳಿಗೆ ಈ ವಾರ ಸಿಗುತ್ತಾ ಪರಿಹಾರ..?

ಬೆಂಗಳೂರು, ನ.30-ಆಡಳಿತರೂಢ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಗೊಂದಲ, ಸಂಪುಟ ವಿಸ್ತರಣೆ/ ಪುನರಾಚನೆ, ನಿಗಮ ಮಂಡಳಿ ನೇಮಕಾತಿಯ ಅಸಮಾಧಾನ, ಸೇರಿದಂತೆ ಕಾಡುತ್ತಿರುವ ನಾನಾ ಗೊಂದಲಗಳಿಗೆ ಈ ವಾರ ಪರಿಹಾರ ಸಿಗುತ್ತದೆಯೇ ಎಂಬ ಕಾತರ ನಾಯಕರಲ್ಲಿ ಮನೆ ಮಾಡಿದೆ. ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳು ಕಮಲ ನಾಯಕರನ್ನು ನಿದ್ದೆಗೇಡುವಂತೆ ಮಾಡಿದೆ. ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಪಕ್ಷದ ಸ್ಥಿತಿಗತಿಗೆ ರಾಷ್ಟ್ರೀಯ ನಾಯಕರು …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು …

Read More »

ರೈತರಿಂದ ದೆಹಲಿಯ 5 ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ನವದೆಹಲಿ,  : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …

Read More »

ಸತತವಾಗಿ ಸುರಿದ ಮಳೆಗೆ ರೈತರ ಕನಸೆಲ್ಲಾ ನುಚ್ಚು ನೂರ- ಹತ್ತಿ, ಭತ್ತದ ಬೆಳೆ ನಾಶ

ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಜಿಲ್ಲೆಯ ರೈತರು ನಿವಾರ್ ಚಂಡಮಾರುತದಿಂದ ಮತ್ತೆ ಹಾನಿಗೊಳಗಾಗಿದ್ದಾರೆ.ಸತತವಾಗಿ ಸುರಿದ ಮಳೆಗೆ ಹತ್ತಿ, ಭತ್ತ ಬೆಳೆ ನಾಶವಾಗಿದ್ದು, ರೈತರು ಮತ್ತೆ ನಷ್ಟಕ್ಕೆ ಸಿಲುಕಿದ್ದಾರೆ. ಬಿಡಿಸಿ ತಂದಿದ್ದ ಹತ್ತಿ, ಭತ್ತದ ಬೆಳೆ ಮಳೆಗೆ ಒದ್ದೆಯಾದರೆ, ಜಮೀನಿನಲ್ಲಿದ್ದ ಹತ್ತಿ, ಭತ್ತ ಬೆಳೆ ಸಹ ಸಂಪೂರ್ಣ ನೆಲಕ್ಕಚ್ಚಿದೆ. ಸ್ವಲ್ಪ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸತತವಾಗಿ …

Read More »