Breaking News

Uncategorized

ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ.

ಮುಂಬೈ: ಲಾಕ್‍ಡೌನ್ ವೇಳೆ ವಲಸೆ ಕಾರ್ಮಿಕರಿಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದರು. ಈ ಕುರಿತು ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ. ಮುಂಬೈನ ವಿವಿಧ ಪ್ರದೇಶಗಳಲ್ಲಿರುವ 8 ಆಸ್ತಿಗಳನ್ನು ಸೋನು ಸೂದ್ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು …

Read More »

ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ

ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …

Read More »

ಬಾಳು ಕೊಡುತ್ತೇನೆಂದು ನಂಬಿಸಿ ಮೋಸ

ಚಾಮರಾಜನಗರ: ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ಸಂಸಾರದ ನೌಕೆ ಹೊತ್ತ ಯುವತಿ, ಮದುವೆಯಾದ 5 ವರ್ಷದಲ್ಲೇ ಗಂಡನಿಂದ ದೂರವಾಗಿ ತವರು ಮನೆ ಸೇರಿ ಹೆಣ್ಣು ಮಗುವಿನೊಂದಿಗೆ ಜೀವನ ನಡೆಸುತ್ತಿದ್ದಳು. ಹೀಗಿರುವಾಗಲೇ ಯುವಕನೊಬ್ಬ ಜೀವನ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದು, ಯುವತಿ ಕಣ್ಣಿರಿನಲ್ಲಿ ಕೈ ತೊಳೆಯುತ್ತಿದ್ದಾಳೆ.ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಅಮಚವಾಡಿ ಗ್ರಾಮದ ಪುಷ್ಪಾ, 14ನೇ ವಯಸ್ಸಿನಲ್ಲಿ ತನ್ನ ತಾಯಿ ಕಳೆದುಕೊಂಡು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಳು. ಅಷ್ಟರಲ್ಲಾಗಲೇ ಪುಷ್ಪಾಳ ತಂದೆ ತಾಯಿ ಇಲ್ಲದವಳನ್ನು ಯಾರೂ …

Read More »

ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ ನಡೆಸ್ತಿದ್ದಾರೆ. 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡ್ಬೇಕು, ಸಿಬ್ಬಂದಿ ಮೃತಪಟ್ಟರೆ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆಯಿಂದ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಓಡಾಟದಲ್ಲಿ ವ್ಯತ್ಯಯ …

Read More »

ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಹಾಸನ: ಸಾಲದ ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಭವಿತ್, ತೇಜಸ್, ಪುನೀತ, ನವೀನ್ ಮತ್ತು ವಿವೇಕ್ ಬಂಧಿತ ಆರೋಪಿಗಳು. ಡಿಸೆಂಬರ್ 5 ರಂದು ರಾತ್ರಿ ರಂಗೋಲಿಹಳ್ಳದ ಬಳಿ ರಘು ಎಂಬಾತನನ್ನು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಿದ್ದರು. ಆರೋಪಿಗಳೆಲ್ಲರೂ ಕೊಲೆಯಾದವನ ಸ್ನೇಹಿತರಾಗಿದ್ದರು. ಹತ್ಯೆಯಾದ ರಘು ತೇಜಸ್ ಎಂಬಾತನಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ಹಿಂದಿರುಗಿಸಲು ರಘು ನಿರಾಕರಿಸಿದ್ದ. ಈ ವಿಚಾರವಾಗಿ ರಘು, …

Read More »

ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡಾ ಗ್ರಾಮದ ಒಕ್ಕಲಕೇರಿಯಲ್ಲಿ ನಡೆದಿದೆ.ನಾಗರತ್ನಾ ಗೌಡ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉಳವರೆಯ ಬೊಳಕುಂಟೆ ಗ್ರಾಮದ ನಾಗರತ್ನಾ ಹಾರವಾಡದ ತನ್ನ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಕಲಿಕೆಯಲ್ಲೂ ಮುಂದಿದ್ದ ನಾಗರತ್ನಾ ನರ್ಸಿಂಗ್ ಮಾಡುತ್ತಿದ್ದಳು. ಸೋಮವಾರ ನರ್ಸಿಂಗ್ ಕೋರ್ಸ್ ಪರೀಕ್ಷೆ ಬರೆದು ಬಂದಿದ್ದ ಯುವತಿ ಮಂಗಳವಾರ ಪರೀಕ್ಷೆಗೆ ತೆರಳುವ ಮುನ್ನವೇ ಮನೆಯಲ್ಲಿ ಯಾರು ಇಲ್ಲದ್ದನ್ನು …

Read More »

ಎಸ್‍ಇಪಿ-ಟಿಎಸ್‍ಪಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿಶಾಸಕರ ಧರಣಿ

ಬೆಂಗಳೂರು, ಡಿ.9- ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಎಸ್‍ಇಪಿ-ಟಿಎಸ್‍ಪಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷಭೇದ ಮರೆತು ಶಾಸಕರು ವಿಧಾನಸಭೆಯಲ್ಲಿಂದು ಧರಣಿ ನಡೆಸಿ ಕೆಲಕಾಲ ಸದನ ಮುಂದೂಡಿದ ಪ್ರಸಂಗ ನಡೆಯಿತು. ಶೂನ್ಯವೇಳೆಯಲ್ಲಿ ಶಾಸಕ ಪಿ.ರಾಜೀವ್ ಅವರು ಎಸ್‍ಇಪಿ-ಟಿಎಸ್‍ಪಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣ, ಮೆಟ್ರೋ, ಸ್ಟೀಲ್‍ಬ್ರಿಡ್ಜ್ ನಿರ್ಮಾಣ ಸೇರಿದಂತೆ ಬೇರೆ ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದಾಗ, ಇದಕ್ಕೆ ದನಿಗೂಡಿಸಿದ …

Read More »

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ

ಬೆಂಗಳೂರು : ಕೆಎಸ್ಆರ್ ಟಿಸಿ, ಬಿಎಂಟಿಸಿ ನೌಕರರಿಗೆ ಡಿಸೆಂಬರ್ ತಿಂಗಳ ಸಂಬಳವನ್ನು 10 ದಿನದೊಳಗೆ ನೀಡುತ್ತೇವೆ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ ನವೆಂಬರ್ ತಿಂಗಳ ತನಕ ಎಲ್ಲಾ ನೌಕರರಿಗೆ ಸಂಬಳ ನೀಡಲಾಗಿದೆ. ಡಿಸೆಂಬರ್ ತಿಂಗಳ ಸಂಬಳವನ್ನು 8 ರಿಂದ …

Read More »

ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ  ಕೊಂಕಣಿ ಮೃತ ವ್ಯಕ್ತಿ. ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ  ಕಾರ್ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.

ಚಾಮರಾಜನಗರ: ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರಿಗೆ ದೇವರ ದರ್ಶನ ಸಿಗಲ್ಲ. ಕೊನೆಯ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ. ಕೊರೊನಾ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.12 ರಿಂದ ಡಿ.14 ರ ವರೆಗೆ ಮಾದಪ್ಪನ ದರ್ಶನ ಭಕ್ತರಿಗಿಲ್ಲ ಸಿಗಲ್ಲ. …

Read More »